ಔಷಧ ಆಮದಿನ ಮೇಲೆ ಶೇ. 200 ಸುಂಕ: ಭಾರತಕ್ಕೆ ಟ್ರಂಪ್ ಎಚ್ಚರಿಕೆ

Date:

ಬ್ರಿಕ್ಸ್‌ನ 14 ದೇಶಗಳ ಜೊತೆ ತೆರಿಗೆ ಸಮರ ಆರಂಭಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇದೀಗ ಮತ್ತೊಂದು ಮಹತ್ವದ ಘೋಷಣೆ ಹೊರಡಿಸಿದ್ದಾರೆ. ಉಕ್ಕು ಮತ್ತು ಅಲ್ಯೂಮಿನಿಯಂ ಆಮದುಗಳ ಮೇಲೆ ಸುಂಕ ವಿಧಿಸಿದ ಬೆನ್ನಲ್ಲೇ ತಾಮ್ರದ ಮೇಲೆ ಶೇ. 50 ಸುಂಕ ಘೋಷಿಸಿದ್ದಾರೆ. ಜೊತೆಗೆ ಅಮೆರಿಕಕ್ಕೆ ಆಮದಾಗುವ ಫಾರ್ಮಾ ಔಷಧಗಳ ಮೇಲೆ ಶೇ. 200 ಸುಂಕ ವಿಧಿಸುವ ಎಚ್ಚರಿಕೆ ನೀಡಿದ್ದಾರೆ.

- Advertisement -

ಮಂಗಳವಾರ ಕ್ಯಾಬಿನೆಟ್‌ ಸಭೆಗೆ ಟ್ರಂಪ್‌ ಈ ವಿಷಯ ತಿಳಿಸಿದ್ದಾರೆ. ನಾವು ತಾಮ್ರದ ಮೇಲೆ ಶೇ. 50 ಸುಂಕ ವಿಧಿಸಲಿದ್ದೇವೆ . ಅಲ್ಲದೇ 1 ವರ್ಷದ ನಂತರ ಅಮೆರಿಕ ಆಮದು ಮಾಡಿಕೊಳ್ಳುವ ಔಷಧಗಳ ಮೇಲಿನ ಸುಂಕ ಶೇ. 200 ರಷ್ಟು ಹೆಚ್ಚಾಗಬಹುದು. ಸೆಮಿಕಂಡಕ್ಟರ್ ಚಿಪ್‌ಗಳಂತಹ ನಿರ್ದಿಷ್ಟ ಉತ್ಪನ್ನಗಳ ಮೇಲೂ ಹೆಚ್ಚಿನ ಸುಂಕ ಬರಬಹುದು ಎಂದು ಎಚ್ಚರಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಅಮೆರಿಕ ಶೀಘ್ರದಲ್ಲೇ ಫಾರ್ಮಾ ಔಷಧಿಗಳ ಮೇಲಿನ ಸುಂಕ ಘೋಷಣೆ ಮಾಡಲಿದೆ. ಆದರೆ ತಯಾರಕ ಕಂಪನಿಗಳು ತಮ್ಮ ಕಾರ್ಯಾಚರಣೆಯನ್ನು ಸ್ಥಳಾಂತರಿಸಿಕೊಳ್ಳಲು ಸಮಯ ಕೇಳಿದ್ದಾರೆ. ಅದಕ್ಕಾಗಿ 1 ವರ್ಷ, ಹೆಚ್ಚೆಂದರೆ ಒಂದೂವರೆ ವರ್ಷ ಸಮಯಾವಕಾಶ ನೀಡಲಿದ್ದೇವೆ. ಅದರ ಬಳಿಕ ಅವರೂ ಸುಂಕಕ್ಕೆ ಒಳಗಾಗುತ್ತಾರೆ ಎಂದು ಟ್ರಂಪ್‌ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿಶ್ವಾಸಾರ್ಹತೆ ಕಳೆದುಕೊಂಡ ಚುನಾವಣಾ ಆಯೋಗದ ಅವಶ್ಯಕತೆ ಇದೆಯೇ?

ಹೊಸ ಸುಂಕ ನೀತಿಯು ಭಾರತದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಏಕೆಂದರೆ ಅಮೆರಿಕವು ಭಾರತದ ಔಷಧಗಳಿಗೆ ಅತಿ ದೊಡ್ಡ ವಿದೇಶಿ ಮಾರುಕಟ್ಟೆಯಾಗಿದೆ. ಅಲ್ಲದೇ ತಾಮ್ರ ಮತ್ತು ತಾಮ್ರ ಉತ್ಪನ್ನಗಳ ಪ್ರಮುಖ ರಫ್ತು ಮಾಡುವ ರಾಷ್ಟ್ರವಾಗಿದೆ.

2024-2025ರ ವರ್ಷದಲ್ಲಿ ಭಾರತವು ವಿಶ್ವದಾದ್ಯಂತ ಸುಮಾರು 2 ಶತಕೋಟಿ ಡಾಲರ್‌ ಮೌಲ್ಯದಷ್ಟು ತಾಮ್ರ ಮತ್ತು ತಾಮ್ರದ ಉತ್ಪನ್ನಗಳನ್ನು ರಫ್ತು ಮಾಡಿತ್ತು. ಈ ಪೈಕಿ ಅಮೆರಿಕದ ಮಾರುಕಟ್ಟೆಗಳಿಗೆ 360 ದಶಲಕ್ಷ ಡಾಲರ್‌ ಮೌಲ್ಯದಷ್ಟು ಅಥವಾ ಶೇ.17ರಷ್ಷು ರಫ್ತು ಮಾಡಿತ್ತು. ಅದೇ ರೀತಿ ಸೌದಿ ಅರೇಬಿಯಾಗೆ ಶೇ.26, ಚೀನಾಗೆ ಶೇ.18ರಷ್ಟು ರಫ್ತು ಮಾಡಿತ್ತು. ಇದೀಗ ಅಮೆರಿಕ ಶೇ. 50 ಸುಂಕ ನೀತಿಯು ಈ ವಹಿವಾಟಿನ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಜಾಬ್: ಎಲ್‌ಪಿಯು ‘ವಿವಿ’ಯಲ್ಲಿ ಅತ್ಯಾಚಾರ ಆರೋಪ; ಭುಗಿಲೆದ್ದ ಪ್ರತಿಭಟನೆ, ತರಗತಿಗಳು ರದ್ದು

ಪಂಜಾಬ್‌ನ ಫಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ (ಎಲ್‌ಪಿಯು) ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ...

3 ದಿನಗಳ ಬ್ಯಾಂಕ್ ಮುಷ್ಕರ ವಾಪಸ್: ವಾರಕ್ಕೆ 5 ದಿನ ಕೆಲಸದ ಪರಿಶೀಲನೆಗೆ ಸಮಿತಿ

ಸಾರ್ವಜನಿಕ ವಲಯದ ಬ್ಯಾಂಕ್‌ ನೌಕರರ ಒಕ್ಕೂಟವು (ಯುಎಫ್‌ಬಿಯು) ಸೋಮವಾರದಿಂದ ಹಮ್ಮಿಕೊಂಡಿದ್ದ ಮೂರು...

2017ರಲ್ಲಿ ಚುನಾವಣಾ ಆಯೋಗವನ್ನು ನಂಬಿದ್ದೆವು, ಆದರೆ 2022ರಲ್ಲಿ ಎಸ್‌ಪಿ ಮತಗಳನ್ನು ಇಸಿ ಅಳಿಸಿದೆ: ಅಖಿಲೇಶ್ ಆರೋಪ

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಬೆಂಬಲಿಗರ...

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...