ಟ್ರಂಪ್ ವಿಧಿಸಿರುವ ಸುಂಕ ಕಾನೂನುಬಾಹಿರ: ಅಮೆರಿಕ ಕೋರ್ಟ್

Date:

ತುರ್ತು ಅಧಿಕಾರವನ್ನು ಬಳಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ವಿಧಿಸಿರುವ ಬಹುತೇಕ ಸುಂಕಗಳು ಕಾನೂನುಬಾಹಿರವಾಗಿವೆ ಎಂದು ಅಮೆರಿಕ ಫೆಡರಲ್ ಮೇಲ್ಮನವಿ ನ್ಯಾಯಾಲಯ ತೀರ್ಪು ನೀಡಿದೆ.

- Advertisement -

ಡೊನಾಲ್ಡ್‌ ಟ್ರಂಪ್‌ ಅವರು ಇದೇ ವರ್ಷದ ಏಪ್ರಿಲ್‌ನಲ್ಲಿ ಹಲವು ರಾಷ್ಟ್ರಗಳ ಮೇಲೆ ಮೊದಲ ಬಾರಿಗೆ ಸುಂಕವನ್ನು ವಿಧಿಸಿದ್ದರು. ಅದಾದ ಬಳಿಕ, ‘ಪ್ರತಿಸುಂಕ’ದ ಹೆಸರಿನಲ್ಲಿ ಚೀನಾ, ಕೆಡನಾ ಮತ್ತು ಮೆಕ್ಸಿಕೋ ವಿರುದ್ಧ ಸುಂಕವನ್ನು ಪರಿಷ್ಕರಿಸಿ, ಮತ್ತೊಂದು ಸುಂಕ ಪಟ್ಟಿಯನ್ನು ಜಾರಿಗೆ ತಂದಿದ್ದರು. ಈ ಎರಡೂ ಬಗೆಯ ಸುಂಕಗಳು ಅಕ್ರಮ ಎಂದು ಅಮೆರಿಕದ ವಾಷಿಂಗ್ಟನ್‌ ಡಿಸಿಯಲ್ಲಿರುವ ಫೆಡರಲ್ ನ್ಯಾಯಾಲಯವು ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಘೋಷಿತ ರಾಷ್ಟ್ರೀಯ ತುರ್ತು ಪರಿಸ್ಥಿತಿಗೆ ಪೂರಕವಾಗಿ ಹಲವು ಕ್ರಮಗಳನ್ನು ಕೈಗೊಳ್ಳಲು ಅಧ್ಯಕ್ಷರಿಗೆ ಶಾಸನಾತ್ಮಕ ಅಧಿಕಾರವನ್ನು ನೀಡಲಾಗಿದೆ. ಆದರೆ, ಈ ಶಾಸನಗಳು ಸುಂಕ ಅಥವಾ ತೆರಿಗೆಯನ್ನು ವಿಧಿಸುವ ಅಧಿಕಾರವನ್ನು ನೀಡಿಲ್ಲ. ಅಂತರರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ (ಐಇಇಪಿಎ) ನೀಡಿರುವ ಅಧಿಕಾರವನ್ನೂ ಮೀರಿ ಟ್ರಂಪ್‌ ವರ್ತಿಸುತ್ತಿದ್ದಾರೆ” ಎಂದು ನ್ಯಾಯಾಲಯವು ಹೇಳಿದೆ.

ಈ ಲೇಖನ ಓದಿದ್ದೀರಾ?: ಅಂಬಾನಿಯ ವಂತಾರ ಮೃಗಾಲಯದ ಕಾರ್ಯಾಚರಣೆ ತನಿಖೆಗೆ ಎಸ್‌ಐಟಿ ರಚನೆ

ನ್ಯಾಯಾಲಯದ ತೀರ್ಪು ಟ್ರಂಪ್‌ ಅವರು ಸುಂಕ ನೀತಿಗೆ ಬಲವಾದ ಪೆಟ್ಟುಕೊಟ್ಟಿದೆ. ನ್ಯಾಯಾಲಯದ ತೀರ್ಪನ್ನು ಟ್ರಂಪ್‌ ಅವರು ಅಮೆರಿಕದ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಬಹುದು ಎಂದು ಹೇಳಲಾಗುತ್ತಿದೆ.

ತೀರ್ಪನ್ನು ಟೀಕಿಸಿರುವ ಟ್ರಂಪ್, “ತೀರ್ಪನ್ನು ಜಾರಿಗೊಳಿಸಿದರೆ, ದೇಶಕ್ಕೆ ಹಾನಿಕಾರಕವಾಗಲಿದೆ. ಇದು ಪಕ್ಷಪಾತದಿಂದ ಕೂಡಿರುವ ತೀರ್ಪು. ಈ ವಿಚಾರವಾಗಿ ಸುಪ್ರೀಂ ಕೋರ್ಟ್‌ ನಮ್ಮ ಪರವಾಗಿ ತೀರ್ಪು ನೀಡಲಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...