ಆಸ್ಟ್ರೇಲಿಯಾ| ಚಾಕುವಿನಿಂದ ಇರಿದು ಹತ್ಯೆ ಪ್ರಕರಣ, ಇಬ್ಬರು ಭಾರತೀಯರ ಬಂಧನ

Date:

ಆಸ್ಟ್ರೇಲಿಯಾದಲ್ಲಿ 22 ವರ್ಷದ ಎಂಟೆಕ್ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಭಾರತೀಯರ ಬಂಧನ ಮಾಡಲಾಗಿದೆ. ಇಬ್ಬರು ಸಹೋದರರಾಗಿದ್ದು ಹರಿಯಾಣ ಮೂಲದವರಾಗಿದ್ದಾರೆ.

- Advertisement -

ಎರಡು ದಿನಗಳ ಹಿಂದೆ ಮೆಲ್ಬೋರ್ನ್‌ನ ಒರ್ಮಂಡ್‌ನಲ್ಲಿ ನವಜೀತ್ ಸಂಧು ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಎನ್‌ಎಸ್‌ಡಬ್ಲ್ಯೂ ಪೊಲೀಸರ ನೆರವಿನೊಂದಿಗೆ ನ್ಯೂ ಸೌತ್ ವೇಲ್ಸ್‌ನ ಗೌಲ್ಬರ್ನ್‌ನಲ್ಲಿರುವ ಅಭಿಜೀತ್ (26) ಮತ್ತು ರಾಬಿನ್ ಗಾರ್ಟನ್‌ನನ್ನು (27) ಬಂಧಿಸಲಾಗಿದೆ ಎಂದು ಪೊಲೀಸರು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ?  ಆಸ್ಟ್ರೇಲಿಯಾ| ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿಯ ಹತ್ಯೆ

ಇನ್ನು ಮೃತ ವಿದ್ಯಾರ್ಥಿ ಮತ್ತು ಆರೋಪಿಗಳು ಹರಿಯಾಣದ ಕರ್ನಾಲ್ ನಿವಾಸಿಗಳಾಗಿದ್ದಾರೆ. ಭಾರತೀಯ ವಿದ್ಯಾರ್ಥಿಗಳ ನಡುವೆ ಬಾಡಿಗೆ ಸಂಬಂಧಿತ ವಾಗ್ವಾದ ನಡೆಯುತ್ತಿದ್ದಾಗ ಜಗಳ ನಿಲ್ಲಿಸಲು ಮಧ್ಯಪ್ರವೇಶ ಮಾಡಿದ ಸಂದರ್ಭದಲ್ಲಿ ನವಜೀತ್ ಸಂಧುಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ನವಜೀತ್ ಅವರ 30 ವರ್ಷದ ಸ್ನೇಹಿತನಿಗೂ ಗಾಯಗಳಾಗಿವೆ ಎಂದು ಮೃತ ವಿದ್ಯಾರ್ಥಿಯ ಚಿಕ್ಕಪ್ಪ ಯಶ್ವೀರ್ ತಿಳಿಸಿದ್ದಾರೆ.

“ನವಜೀತ್‌ನ ಬಳಿ ಕಾರು ಇತ್ತು, ಅವನ ಸ್ನೇಹಿತನ (ಮತ್ತೊಬ್ಬ ಭಾರತೀಯ ವಿದ್ಯಾರ್ಥಿ) ಮನೆಯಲ್ಲಿದ್ದ ಸಾಮಾಗ್ರಿಗಳನ್ನು ಕೊಂಡೊಯ್ಯಲು ಕಾರಿನಲ್ಲಿ ಸ್ನೇಹಿತನೊಂದಿಗೆ ಆತ ವಾಸವಿದ್ದ ಮನೆಯ ಕಡೆ ಹೋಗಿದ್ದ. ಸ್ನೇಹಿತ ಒಳಗೆ ಹೋದಾಗ, ನವಜೀತ್‌ಗೆ ಕೂಗಾಟ ಕೇಳಿಬಂದಿದೆ. ಗಲಾಟೆ ನೋಡಿ ಜಗಳ ನಿಲ್ಲಿಸುವ ಪ್ರಯತ್ನ ಮಾಡಿದ್ದಾನೆ. ಈ ಸಂದರ್ಭದಲ್ಲಿ ನವಜೀತ್ ಎದೆಗೆ ಚಾಕುವಿನಿಂದ ಮಾರಣಾಂತಿಕವಾಗಿ ಇರಿಯಲಾಗಿದೆ” ಎಂದು ಯಶ್ವಿರ್ ಹೇಳಿದರು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...