ತೈವಾನ್‌ನಲ್ಲಿ ‘ರಾಗಸ’ ಚಂಡಮಾರುತದಿಂದ ಭಾರಿ ಅನಾಹುತ ಸೃಷ್ಟಿ, ಕನಿಷ್ಠ 14 ಜನರು ಸಾವು

Date:

Advertisements

ಹಾಂಗ್ ಕಾಂಗ್‌ನ ತೈವಾನ್‌ನಲ್ಲಿ ‘ರಾಗಸ’ ಚಂಡಮಾರುತ ಭಾರಿ ಅನಾಹುತವನ್ನೇ ಸೃಷ್ಟಿಸಿದೆ. ಸರೋವರದ ತಡೆಗೋಡೆ ಒಡೆದು ಪಟ್ಟಣದ ಒಳಗಡೆ ನುಗಿದ್ದು, 14 ಮಂದಿ ಮೃತಪಟ್ಟಿದ್ದಾರೆ. 18 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿಶ್ವದಲ್ಲೇ ಅತ್ಯಂತ ಶಕ್ತಿಶಾಲಿ ಚಂಡಮಾರುತ ಎಂದು ಇದನ್ನು ಗುರುತಿಸಲಾಗಿದ್ದು, ಇದಕ್ಕೆ ಸೂಪರ್ ಟೈಫೂನ್ ರಾಗಸ ಎಂದು ಹೆಸರಿಡಲಾಗಿದೆ. ಸುಮಾರು 100 ಹೆಚ್ಚು ಜನರು ಪ್ರವಾಹದಲ್ಲಿ ಸಿಲುಕಿದ್ದು, ರಕ್ಷಣೆಗಾಗಿ ಗೋಗರೆಯುತ್ತಿದ್ದಾರೆ.

ಗಂಟೆಗೆ 200 ಕಿ.ಮೀ (124 ಮೈಲು) ವೇಗದಲ್ಲಿ ಗಾಳಿ ಚಂಡಮಾರುತ ಬರುತ್ತಿದ್ದು, ಮುಂದಿನ ಕೆಲವು ಗಂಟೆಗಳಲ್ಲಿ ಹಾಂಗ್ ಕಾಂಗ್ ನಗರಕ್ಕೆ ಹತ್ತಿರವಾಗಲಿದ್ದು, ಜನನಿಬಿಡ ಪ್ರದೇಶದಿಂದ ದಕ್ಷಿಣಕ್ಕೆ 100 ಕಿ.ಮೀ (60 ಮೈಲು) ದೂರದಲ್ಲಿ ಚಲಿಸಲಿದೆ ಎಂದು ಸ್ಥಳೀಯ ಹಹಾಮಾನ ಇಲಾಖೆ ಹೇಳಿದೆ.

ಚಂಡಮಾರುತ ಬುಧವಾರ ಹಾಂಗ್ ಕಾಂಗ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ವಿವಿಧೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣ ಮತ್ತು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದ ಹೊರಗೆ ತಯಾರಾದ ಸಿನಿಮಾಗಳಿಗೆ ಶೇ. 100 ಸುಂಕ: ಟ್ರಂಪ್ ಘೋಷಣೆ

ಅಮೆರಿಕದ ಹೊರಗೆ ನಿರ್ಮಾಣವಾಗುವ ಎಲ್ಲ ಚಿತ್ರಗಳ ಮೇಲೂ ಶೇ. 100 ರಷ್ಟು...

ಅಮೆರಿಕಕ್ಕೆ ವಾಪಸಾಗುತ್ತಿರುವ ಭಾರತೀಯರ ವಿರುದ್ದ ‘Clog The Toilet’ ವರ್ಣಭೇದ ಅಭಿಯಾನ; ಏನಿದು?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್‌-1ಬಿ(H-1B) ವೀಸಾಗಳಿಗೆ $100,000 ಶುಲ್ಕವನ್ನು ಘೋಷಿಸಿದ...

ಗಾಜಾದಲ್ಲಿ ಮುಂದುವರೆದ ಇಸ್ರೇಲ್ ಕ್ರೌರ್ಯ; 59 ಪ್ಯಾಲೆಸ್ತೀನಿಯರು ಸಾವು

ಗಾಜಾದಲ್ಲಿ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ವಾಯುದಾಳಿ ಮತ್ತು ಗುಂಡಿನ ದಾಳಿ ನಡೆಸಿದೆ....

ಪಾಕಿಸ್ತಾನ ಪಡೆ ಮತ್ತು ಟಿಟಿಪಿ ನಡುವೆ ಘರ್ಷಣೆ; 17 ಮಂದಿ ಸಾವು

ಪಾಕಿಸ್ತಾನ ಪಡೆಗಳು ಮತ್ತು ನಿಷೇಧಿತ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ನಡುವೆ ಘರ್ಷಣೆ...

Download Eedina App Android / iOS

X