ಗಾಝಾದಲ್ಲಿ ವಿದೇಶಿ ಮಾಧ್ಯಮ ಪ್ರವೇಶ ನಿರ್ಬಂಧ ತೆರವುಗೊಳಿಸಿ: ಇಸ್ರೇಲ್‌ಗೆ 27 ದೇಶಗಳ ಒಕ್ಕೂಟ ಆಗ್ರಹ

Date:

ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ ಸರ್ಕಾರವು ವಿಧಿಸಿರುವ ವಿದೇಶಿ ಪತ್ರಕರ್ತರ ನಿರ್ಬಂಧವನ್ನು ತೆಗೆದುಹಾಕಿ ತಕ್ಷಣವೇ ವಿದೇಶಿ ಮಾಧ್ಯಮಗಳಿಗೆ ಅನುಮತಿ ನೀಡಬೇಕು ಎಂದು ಪತ್ರಕರ್ತರ ಹಕ್ಕುಗಳು ಮತ್ತು ರಕ್ಷಣೆಗಾಗಿ ವಾದಿಸುವ ಅಂತರಸರ್ಕಾರಿ ಸಂಸ್ಥೆ ಮೀಡಿಯಾ ಪ್ರೀಡಂ ಕೋಯಲಿಶನ್‌ ಒಕ್ಕೂಟವು ಆಗ್ರಹಿಸಿದೆ. ಫ್ರಾನ್ಸ್‌, ಜರ್ಮನಿ, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಬೆಲ್ಜಿಯಂ ಮತ್ತು ಜಪಾನ್‌ ಸೇರಿದಂತೆ 27 ದೇಶಗಳು ಈ ಹೇಳಿಕೆಯನ್ನು ಬೆಂಬಲಿಸಿ ಸಹಿ ಮಾಡಿವೆ.

- Advertisement -

ಈ ಒಕ್ಕೂಟವು 51 ದೇಶಗಳನ್ನು ಒಳಗೊಂಡಿದ್ದು ಭಾರತವು ಈ ಒಕ್ಕೂಟದಲ್ಲಿ ತನ್ನ ಸದಸ್ಯತ್ವ ಹೊಂದಿಲ್ಲದ ಕಾರಣ ಸಹಿ ಹಾಕುವ ಅವಕಾಶವನ್ನು ಹೊಂದಿಲ್ಲ. ಆದರೆ ಅಮೆರಿಕವು ಒಕ್ಕೂಟದ ಸದಸ್ಯತ್ವ ಹೊಂದಿದ್ದರೂ ಸಹಿ ಮಾಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಮೈಸೂರು | ಇಸ್ರೆಲ್ ವಿರುದ್ಧ ಪ್ರತಿಭಟನೆಗೆ ಅನುಮತಿ ನಿರಾಕರಣೆ; ಎಸ್‌ಡಿಪಿಐ ಖಂಡನೆ

“ಗಾಝಾದಲ್ಲಿ ನಡೆಯತ್ತಿರುವ ನಿರಂತರ ಇಸ್ರೇಲ್‌ ದಾಳಿ ಮತ್ತಷ್ಟು ಬಿಗು ವಾತಾವರಣ ಹಾಗೂ ದೀರ್ಘಕಾಲದ ಬರಗಾಲವನ್ನು ಸೃಷ್ಟಿ ಮಾಡಿದೆ. ಪತ್ರಕರ್ತರು ಮತ್ತು ಮಾಧ್ಯಮಗಳು ಯುದ್ಧದ ಅಮಾನವೀಯ ವಾಸ್ತವತೆಯನ್ನು ತೆರೆದಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಪರಿಣಾಮಕಾರಿಯಾಗಿ ತನ್ನ ಕೆಲಸ ನಿರ್ವಹಿಸಬೇಕಾದರೆ ಯುದ್ಧ ವಲಯಗಳಿಗೆ ಮಾಧ್ಯಮಗಳಿಗೆ ಮುಕ್ತ ಪ್ರವೇಶದ ಅಗತ್ಯವಿದೆ” ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

“ಆದರೆ ಇಸ್ರೇಲ್‌ ಸರ್ಕಾರವು ಪತ್ರಿಕಾ ಸ್ವಾತಂತ್ರ್ಯವನ್ನು ಕಸಿದುಕೊಂಡು ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿದೆ. ಈ ನಿರ್ಬಂಧ ಮತ್ತು ಪತ್ರಕರ್ತರ ಮೇಲೆ ನಡೆದ ದಾಳಿಯನ್ನು ವಿರೋಧಿಸುತ್ತೇವೆ. ಪತ್ರಕರ್ತರಿಗೆ ಪ್ರವೇಶ ಹಾಗೂ ರಕ್ಷಣೆಯನ್ನು ನೀಡಬೇಕು” ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನು ಓದಿದ್ದೀರಾ? ಗಾಝಾದಲ್ಲಿ ಕ್ಷಾಮ ಉಲ್ಬಣ: ಸುತ್ತಲಿನ ಪ್ರದೇಶಗಳಿಗೂ ಬರ ಪರಿಸ್ಥಿತಿ ಸಾಧ್ಯತೆ

“ಪತ್ರಕರ್ತರು ಮತ್ತು ಮಾಧ್ಯಮ ಕಾರ್ಯಕರ್ತರ ವಿರುದ್ಧ ನಡೆಸಲಾಗುವ ಎಲ್ಲಾ ಹಿಂಸಾಚಾರಗಳನ್ನು, ಸಾವು-ನೋವುಗಳು, ಬಂಧನಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ. ಗಾಝಾ, ಇಸ್ರೇಲ್, ಪಶ್ಚಿಮ ದಂಡೆ ಮತ್ತು ಪೂರ್ವ ಜೆರುಸಲೆಮ್‌ನಲ್ಲಿರುವ ಸ್ಥಳೀಯ ಮತ್ತು ವಿದೇಶಿ ಮಾಧ್ಯಮ ಕಾರ್ಯಕರ್ತರು ತಮ್ಮ ಕೆಲಸವನ್ನು ಮುಕ್ತವಾಗಿ ಮತ್ತು ಸುರಕ್ಷಿತವಾಗಿ ನಡೆಸುವಲ್ಲಿ ಇಸ್ರೇಲ್‌ ಸರ್ಕಾರ ಮತ್ತು ಅಧಿಕಾರಿಗಳು ಎಲ್ಲಾ ರೀತಿಯ ಕಾನೂನು ರಕ್ಷಣೆ ನೀಡಬೇಕು” ಎಂದು ಮೀಡಿಯಾ ಪ್ರೀಡಂ ಕೋಯಲಿಶನ್‌ ಒಕ್ಕೂಟ ಒತ್ತಾಯಿಸಿದೆ.

ಈ ಎರಡು ವರ್ಷಗಳಲ್ಲಿ ಕನಿಷ್ಟ 192 ಪತ್ರಕರ್ತರು ಹಾಗೂ ಮಾಧ್ಯಮ ಕಾರ್ಯಕರ್ತರ ಮಾರಣಹೋಮ ನಡೆದಿದೆ. ಸಾವನ್ನಪ್ಪಿದ ಪತ್ರಕರ್ತರಲ್ಲಿ ಬಹುತೇಕರು ಪ್ಯಾಲೆಸ್ತೀನಿರಾಗಿದ್ದರು ಎಂದು ಕಮಿಟಿ ಟು ಪ್ರೊಟೆಕ್ಟ್‌ ಹೇಳಿಕೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...