ಯುಕೆ ಚುನಾವಣೆ | ಕೀರ್ ಸ್ಟಾರ್‌ಮರ್‌ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

Date:

ಯುಕೆ ಚುನಾವಣೆಯಲ್ಲಿ ಜಯಗಳಿಸಿದ ಕೀರ್ ಸ್ಟಾರ್‌ಮರ್‌ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಲೇಬರ್ ಪಕ್ಷದ ನಾಯಕರೊಂದಿಗೆ ಸಕಾರಾತ್ಮಕ ಸಹಯೋಗಕ್ಕಾಗಿ ಎದುರು ನೋಡುತ್ತಿರುವುದಾಗಿ ಮೋದಿ ಹೇಳಿದ್ದಾರೆ. ಜೊತೆಗೆ, ನಿರ್ಗಮಿತ ಪ್ರಧಾನಿ ರಿಷಿ ಸುನಕ್ ಅವರಿಗೆ ಸಂದೇಶವನ್ನೂ ನೀಡಿದ್ದಾರೆ.

- Advertisement -

ಗುರುವಾರ ನಡೆದ ಚುನಾವಣೆಯಲ್ಲಿ ಲೇಬರ್ ಪಕ್ಷವು ಕನ್ಸರ್ವೇಟಿವ್‌ ಪಕ್ಷದ ವಿರುದ್ಧ ಗೆಲುವು ಸಾಧಿಸಿದೆ. ಚುನಾವಣೆಯಲ್ಲಿ ಒಟ್ಟು 650 ಸ್ಥಾನಗಳ ಪೈಕಿ ಆಡಳಿತದಲ್ಲಿದ್ದ ಕನ್ಸರ್ವೇಟಿವ್ ಪಕ್ಷ ಕೇವಲ 120 ಸ್ಥಾನಗಳನ್ನು ಗೆದಿದ್ದರೆ, ಲೇಬರ್ ಪಕ್ಷವು 412 ಸ್ಥಾನಗಳನ್ನು ಗೆದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಚುನಾವಣೆಯಲ್ಲಿ ಗೆದ್ದ ಲೇಬರ್ ಪಕ್ಷದ ಕೀರ್ ಸ್ಟಾರ್‌ಮರ್‌ ಅವರಿಗೆ ಶುಭ ಕೋರಿ ಟ್ವೀಟ್‌ ಮಾಡಿರುವ ಮೋದಿ, “ಯುಕೆ ಸಾರ್ವತ್ರಿಕ ಚುನಾವಣೆಯಲ್ಲಿ ಗಮನಾರ್ಹ ವಿಜಯ ಸಾಧಿಸಿದ ಕೀರ್ ಸ್ಟಾರ್‌ಮರ್‌ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಎಲ್ಲ ಕ್ಷೇತ್ರಗಳಲ್ಲಿ ಭಾರತ-ಯುಕೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು, ಪರಸ್ಪರ ಅಭಿವೃದ್ಧಿ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ಸಕಾರಾತ್ಮಕ ಮತ್ತು ರಚನಾತ್ಮಕ ಸಹಯೋಗವನ್ನು ನಾನು ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.

 

ಸುನಕ್ ಅವರದ್ದ ‘ಶ್ಲಾಘನೀಯ ನಾಯಕತ್ವ’ ಎಂದು ಪ್ರಶಂಸಿಸಿರುವ ಮೋದಿ, ಭಾರತ-ಯುಕೆ ಸಂಬಂಧಗಳನ್ನು ಗಟ್ಟಿಗೊಳಿಸುವಲ್ಲಿ ಸುನಕ್ ಅವರ ಕೊಡುಗೆಗಳಿಗಾಗಿ ಧನ್ಯವಾದ ಅರ್ಪಿಸಿದ್ದಾರೆ.

“ಬ್ರಿಟನ್‌ನ ನಿಮ್ಮ ಶ್ಲಾಘನೀಯ ನಾಯಕತ್ವಕ್ಕಾಗಿ ರಿಶಿ ಸುನಕ್ ಅವರಿಗೆ ಧನ್ಯವಾದಗಳು. ನಿಮ್ಮ ಅಧಿಕಾರಾವಧಿಯಲ್ಲಿ ನಿಮ್ಮ ಸಕ್ರಿಯ ಕೊಡುಗೆಯಿಂದಾಗಿ ಭಾರತ ಮತ್ತು ಯುಕೆ ನಡುವಿನ ಸಂಬಂಧವು ಗಟ್ಟಿಗೊಂಡಿದೆ. ನಿಮ್ಮ ಮುಂದಿನ ಭವಿಷ್ಯಕ್ಕೆ ನಿಮಗೂ ಮತ್ತು ನಿಮ್ಮ ಕುಟುಂಬಕ್ಕೂ ಶುಭಾಶಯಗಳು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...