ಹೆಂಡತಿಯನ್ನು ಕೊಂದು 224 ತುಂಡು ಮಾಡಿ ನದಿಗೆ ಎಸೆದ ಕ್ರೂರಿ

Date:

28 ವರ್ಷದ ಯುವಕನೊಬ್ಬ ತನ್ನ ಹೆಂಡತಿಯನ್ನು ಕೊಂದು 224 ತುಂಡುಗಳನ್ನಾಗಿ ಮಾಡಿ ನದಿಗೆ ಎಸೆದ ಆಘಾತಕಾರಿ ಘಟನೆ ಇಂಗ್ಲೆಂಡ್‌ ನಲ್ಲಿ ನಡೆದಿದೆ. ಆರೋಪಿಯು ಯಾವುದೇ ಕಾರಣ ನೀಡದೆ ಕೊಲೆಯನ್ನು ಒಪ್ಪಿಕೊಂಡಿದ್ದು ಏ.8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

- Advertisement -

ಕಳೆದ ಮಾರ್ಚ್‌ 25 ರಂದು ಘಟನೆ ನಡೆದಿದ್ದು, ಆರೋಪಿ ನಿಕೊಲಸ್‌ ಮೆಟ್ಸೊನ್ ಲಂಡನ್‌ನ ಲಿಂಕ್ಲೊನ್‌ ಸಿಟಿಯ ನಿವಾಸಿಯಾಗಿದ್ದು, 26 ವರ್ಷದ ತನ್ನ ಪತ್ನಿ ಹೋಲಿ ಬ್ರಮ್‌ಲೇ ಎಂಬುವವರನ್ನು ಚಾಕುವಿನಿಂದ ಅಮಾನುಷವಾಗಿ ಹತ್ಯೆ ಮಾಡಿ ದೇಹವನ್ನು 224 ತುಂಡುಗಳನ್ನಾಗಿ ಕತ್ತರಿಸಿ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿ ನದಿಗೆ ಎಸೆದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕೊಲೆಯಾದ 8 ದಿನಗಳ ನಂತರ ಯುವತಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿತ್ತು. ಪೊಲೀಸರ ವರದಿಗಳ ಪ್ರಕಾರ ತಾನು ಆರಂಭದಲ್ಲಿ ಕೊಲೆ ಮಾಡಿಲ್ಲ ಎಂದು ನಿರಾಕರಿಸಿದ್ದಾನೆ.

ಮೃತದೇಹವನ್ನು ನದಿಗೆ ಎಸೆಯಲು ಸಹಾಯ ಮಾಡಿದ ಆರೋಪಿಯ ಸ್ನೇಹಿತ 28 ವರ್ಷದ ಜೋಶ್ವಾ ಹಾನ್‌ಕಾಕ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮರೆಯಲಾರದ, ಮರೆಯಬಾರದ ಮನಮೋಹನ ಈ ಸಿಂಗ್

ಆರೋಪಿ ನಿಕೊಲಸ್‌ ಮೆಟ್ಸೊನ್ ಈ ಮೊದಲು ತನ್ನ ಮಾಜಿ ಸ್ನೇಹಿತೆಯರಿಗೆ ತೊಂದರೆ ನೀಡಿದ ಕಾರಣಕ್ಕಾಗಿ 2013,2016 ಹಾಗೂ 2017ರಲ್ಲಿ ಶಿಕ್ಷೆಗೊಳಗಾಗಿದ್ದ.

ಕೊಲೆಯಾದ ಯುವತಿ ಆರೋಪಿಯನ್ನು 2021ರಲ್ಲಿ ವಿವಾಹವಾಗಿದ್ದು, ತಾನು ವಾಸವಿದ್ದ ಅಪಾರ್ಟ್‌ಮೆಮೆಂಟ್‌ನಲ್ಲೆ ಹಲವು ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾನೆ.

ಹತ್ಯೆಯಾದ ಯುವತಿಯ ಹಿಂದಿನ ಹೇಳಿಕೆಗಳನ್ನು ಆಕೆಯ ತಾಯಿ ಹಾಗೂ ಸಹೋದರಿಯೆ ಕೋರ್ಟ್‌ನಲ್ಲಿ ವಿಚಾರಣೆಯ ಸಂದರ್ಭದಲ್ಲಿ ಓದಿದರು. ದಂಪತಿಗಳು 16 ತಿಂಗಳ ಹಿಂದೆ ವಿವಾಹವಾಗಿದ್ದು, ಇಬ್ಬರು ತಮ್ಮ ಸಂಬಂಧ ಮುರಿದುಕೊಂಡಿದ್ದರು ಎಂದು ಹೇಳಿಕೆಯಲ್ಲಿ ತಾಯಿ ಹಾಗೂ ಸಹೋದರಿ ತಿಳಿಸಿದ್ದಾರೆ.

ಪ್ರಕರಣ ಬೆಳಕಿಗೆ ಬರುವುದಕ್ಕೂ ಒಂದು ವಾರ ಮುನ್ನ ಪೊಲೀಸರು ಅಪಾರ್ಟ್‌ಮೆಂಟ್‌ಗೆ ತೆರಳಿದಾಗ ಆರೋಪಿಯೇ ಬಾಗಿಲು ತೆರೆದಿದ್ದಾನೆ. ಪತ್ನಿ ತನ್ನನ್ನು ನಿಂದಿಸಿ, ಹಲ್ಲೆ ಮಾಡಿ ಹೋಗಿದ್ದಾಳೆ ಎಂದು ತಿಳಿಸಿದ್ದ. ಒಂದು ವಾರದ ನಂತರ ಮಾ.25 ರಂದು ಪೊಲೀಸರು ಪುನಃ ಬಂದಾಗ ರಕ್ತದ ಕಲೆಗಳು ಸ್ನಾನದ ಕೋಣೆ, ಮಲಗುವ ಕೋಣೆಯಲ್ಲಿ ಇರುವುದನ್ನು ಗಮನಿಸಿ ಆರೋಪಿಯನ್ನು ಬಂಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...