ಅಮೆರಿಕದಂತೆ ಇಂಗ್ಲೆಂಡ್‌ನಲ್ಲೂ ಅಕ್ರಮ ವಲಸಿಗ ಭಾರತೀಯರ ಗಡಿಪಾರು; ಈಗಾಗಲೇ 19 ಸಾವಿರ ಮಂದಿ ಗಡಿಪಾರು

Date:

ಅಮೆರಿಕದಲ್ಲಿ ಅಕ್ರಮ ವಲಸಿಗರನ್ನು ಗಡಿಪಾರು ಕಾರ್ಯಾಚರಣೆ ಮಾಡುತ್ತಿರುವಂತೆ ಇಂಗ್ಲೆಂಡ್‌ನ ಲೇಬರ್‌ ಸರ್ಕಾರ ತನ್ನ ದೇಶದಲ್ಲಿ ಅಕ್ರಮವಾಗಿ ನೆಲಸಿರುವ ವಲಸಿಗರನ್ನು ಗಡಿಪಾರು ಮಾಡಲು ಮುಂದಾಗಿದೆ.

- Advertisement -

ಭಾರತೀಯರಿಗೆ ಸಂಬಂಧಿಸಿದಂತೆ ಮುಖ್ಯವಾಗಿ ಭಾರತೀಯ ರಸ್ಟೋರೆಂಟ್‌ಗಳು, ಹೋಟೆಲ್‌ಗಳು, ಮಳಿಗೆಗಳು, ಕಾರು ಸ್ವಚ್ಛಗೊಳಿಸುವ ಕೇಂದ್ರಗಳು ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ರಮ ವಲಸಿಗ ಭಾರತೀಯರನ್ನು ಗಡಿಪಾರು ಮಾಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇಂಗ್ಲೆಂಡ್‌ನ ಗೃಹ ಕಾರ್ಯದರ್ಶಿ ಯವಟ್ಟೆ ಕೂಪರ್‌ ಅವರು ಈ ಕಾರ್ಯವನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ಜನವರಿಯಲ್ಲಿ 828 ಸ್ಥಳಗಳಲ್ಲಿ ಪರಿಶೀಲನೆ ನಡೆಸಿ 609 ಮಂದಿಯನ್ನು ಬಂಧಿಸಲಾಗಿದೆ. ಕಳೆದ ವರ್ಷಕ್ಕಿಂತ ಹೆಚ್ಚು ಅಕ್ರಮ ವಲಸಿಗರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ವಲಸೆ ನಿಯಮವನ್ನು ಕಡ್ಡಾಯವಾಗಿ ಗೌರವಿಸಬೇಕಾಗಿದೆ ಹಾಗೂ ಜಾರಿಗೊಳಿಸಬೇಕಾಗಿದೆ. ಉದ್ಯೋಗದಾತರು ದೀರ್ಘಕಾಲದಿಂದ ಅಕ್ರಮ ವಲಸಿಗರನ್ನು ತಮ್ಮ ಸಂಸ್ಥೆಗಳಲ್ಲಿ ನೇಮಿಸಿಕೊಂಡಿದ್ದಾರೆ. ಆದರೆ ಇಲ್ಲಿಯವರೆಗೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿರಲಿಲ್ಲ. ವಲಸಿಗರು ಸಣ್ಣ ದೋಣಿಗಳಲ್ಲಿ ಆಪಾಯಕಾರಿ ಕಾಲುವೆಗಳ ಮೂಲಕ ಗಡಿಯನ್ನು ದಾಟಿ ಬರುವುದು ಮಾತ್ರ ಅಪಾಯಕಾರಿಯಾಗಿರದೆ ವಲಸೆ ವ್ಯವಸ್ಥೆ ಹಾಗೂ ನಮ್ಮ ಆರ್ಥಿಕತೆಯ ಮೇಲೂ ಪರಿಣಾಮ ಬೀರುತ್ತಿದೆ” ಎಂದು ಗೃಹ ಕಾರ್ಯದರ್ಶಿ ಯವಟ್ಟೆ ಕೂಪರ್‌ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕ ಮಾನವೀಯ ಮಾದರಿಯ ತಿರಸ್ಕರಿಸಿ ನೆತ್ತರು ಹರಿಸಿದ ಅಮಿತ್ ಶಾ

ಇಂಗ್ಲೆಂಡ್‌ನಲ್ಲಿ ನೂತನ ಸರ್ಕಾರ ರಚನೆಯಾದ ಮೇಲೆ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರಿಗೆ ಅಕ್ರಮ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳುವ ಒತ್ತಡ ಹೆಚ್ಚಾಗಿದೆ. ವಲಸಿಗರನ್ನು ಗಡಿಪಾರು ಮಾಡಲು 800 ಜನರನ್ನು ಹೊತ್ತೊಯ್ಯುವ ದೊಡ್ಡ ವಿಮಾನಗಳನ್ನು ಬಳಸಲಾಗುತ್ತಿದೆ. ಹೊಸ ಸರ್ಕಾರವು ಅಧಿಕಾರ ವಹಿಸಿಕೊಂಡ ನಂತರ 19 ಸಾವಿರ ವಿದೇಶಿ ಅಪರಾಧಿಗಳು ಹಾಗೂ ಅಕ್ರಮ ವಲಸಿಗರನ್ನು ಗಡಿಪಾರು ಮಾಡಿರುವುದಾಗಿ ವಿಡಿಯೋ ಬಿಡುಗಡೆ ಮಾಡಿದೆ. 2018 ರಿಂದ 2024ರ ಜುಲೈವರೆಗೂ 16,500 ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿತ್ತು.

ಕಳೆದ ಒಂದು ವರ್ಷದಿಂದ ಅಕ್ರಮ ವಲಸಿಗರನ್ನು ಕೆಲಸಕ್ಕೆ ನೇಮಿಸಿಕೊಂಡ ಉದ್ಯೋಗದಾತರಿಗೆ 1090 ದಂಡ ವಿಧಿಸುವ ನೋಟಿಸ್ ನೀಡಲಾಗಿದೆ. ಒಂದು ವೇಳೆ ಉದ್ಯೋಗದಾತರು ಅಕ್ರಮ ವಲಸಿಗರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದರೆ ಪ್ರತಿ ಉದ್ಯೋಗಿಯ ಆಧಾರದ ಮೇಲೆ 60 ಸಾವಿರ ಪೌಂಡ್‌ ದಂಡ ವಿಧಿಸಲಾಗುತ್ತದೆ.

https://twitter.com/ukhomeoffice/status/1888998675415761399?ref_src=twsrc%5Etfw%7Ctwcamp%5Etweetembed%7Ctwterm%5E1888998675415761399%7Ctwgr%5E4d7f7f0792b1a3af9b50e7de75a722da6223d6f5%7Ctwcon%5Es1_&ref_url=https%3A%2F%2Fwww.tribuneindia.com%2Fnews%2Fdiaspora%2Fvideo-uk-launches-trump-style-immigration-crackdown-19000-illegal-migrants-deported%2F&mx=2
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...