ಯುದ್ಧ ನಿಲ್ಲುವವರೆಗೆ ಹಾನಿಗೊಳಗಾದ ಪರಮಾಣು ಕೇಂದ್ರಗಳ ತಪಾಸಣೆಗೆ ವಿಶ್ವಸಂಸ್ಥೆಗಿಲ್ಲ ಅವಕಾಶ: ಇರಾನ್ ಸ್ಪಷ್ಟನೆ

Date:

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವು ಶಾಶ್ವತವಾಗಿ ಅಂತ್ಯಗೊಳ್ಳುವವರೆಗೆ ಮತ್ತು ತಮ್ಮ ಷರತ್ತುಗಳನ್ನು ಅಮೆರಿಕ ಒಪ್ಪಿಕೊಳ್ಳುವವರೆಗೆ, ಹಾನಿಗೊಳಗಾದ ತಮ್ಮ ಪರಮಾಣು ಕೇಂದ್ರಗಳಿಗೆ ಭೇಟಿ ನೀಡಲು ವಿಶ್ವಸಂಸ್ಥೆಯ ತಂಡಕ್ಕೆ ಅವಕಾಶ ನೀಡುವುದಿಲ್ಲ ಎಂದು ಇರಾನ್ ಸ್ಪಷ್ಟವಾಗಿ ಹೇಳಿದೆ.

- Advertisement -

ಕಳೆದ ವರ್ಷ ನಡೆದ ಇಸ್ರೇಲ್‌ನೊಂದಿಗೆ 12 ದಿನಗಳ ಯುದ್ಧ ಮತ್ತು ಇದೇ ವರ್ಷದ ಫೆಬ್ರವರಿಯಲ್ಲಿ ಅಮೆರಿಕ-ಇಸ್ರೇಲ್‌ ಜಂಟಿಯಾಗಿ ಇರಾನ್‌ ಮೇಲೆ ನಡೆಸಿದ ದಾಳಿಯಿಂದಾಗಿ ಮಧ್ಯಪ್ರಾಚ್ಯದಲ್ಲಿ ಯುದ್ಧ ಕಾರ್ಮೋಡ ಕವಿದಿದೆ. ಈ ಸಂಘರ್ಷದಲ್ಲಿ ಇರಾನ್‌ನ ಪರಮಾಣು ನೆಲೆಗಳ ಮೇಲೆ ಅಮೆರಿಕ-ಇಸ್ರೇಲ್ ದಾಳಿ ನಡೆಸಿದ್ದವು. ಅಂದಿನಿಂದ, ಇರಾನ್‌ನ ಪರಮಾಣು ನೆಲೆಗಳ ತಪಾಸಣೆ ಸ್ಥಗಿತಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿನೆಮಾ ನೋಡುವುದು: ಕಲೆಯ ಆಂತರ್ಯವನ್ನು ಗ್ರಹಿಸುವ ಕ್ರಮ

ಸಿನೆಮಾ ವಿಶ್ಲೇಷಣೆ ಎಂದರೆ ಕೇವಲ ದೋಷಗಳನ್ನು ಎಣಿಸುವ ಮೇಲ್ನೋಟದ ತೀರ್ಪಲ್ಲ. ಪರದೆಯ ಮೇಲೆ ಕಾಣುವ ಒಂದೊಂದು ಕ್ಷಣದ ಹಿಂದೆಯೂ ನಿರ್ದೇಶಕ ಮತ್ತು ತಂತ್ರಜ್ಞರ ದೀರ್ಘ ಶ್ರಮ, ಆರ್ಥಿಕ ಮಿತಿಗಳು ಹಾಗೂ ತಾಂತ್ರಿಕ ಸವಾಲುಗಳಿರುತ್ತವೆ....

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

ಸೆಪ್ಟೆಂಬರ್ ತಿಂಗಳಲ್ಲಿ ಅಂತಾರಾಷ್ಟ್ರೀಯ ಪರಮಾಣು ಇಂಧನ ಸಂಸ್ಥೆ (IAEA) ತಪಾಸಕರು ಇರಾನ್‌ನ ಬುಶೆಹ್ರ್ ಪರಮಾಣು ವಿದ್ಯುತ್ ಸ್ಥಾವರಕ್ಕೆ ಭೇಟಿ ನೀಡಿದ್ದರಾದರೂ, ಬಾಂಬ್ ದಾಳಿಗೆ ತುತ್ತಾದ ನಟಾಂಜ್, ಫೋರ್ಡೊ ಮತ್ತು ಇಸ್ಫಹಾನ್ ಸೇರಿದಂತೆ ಇತರ ಪ್ರಮುಖ ಪರಮಾಣು ನೆಲೆಗಳನ್ನು ಪರಿಶೀಲಿಸಲು ಸಾಧ್ಯವಾಗಿಲ್ಲ.

ಇದೀಗ, ತಪಾಸಣೆಯನ್ನು ಪುನರಾರಂಭಿಸಲು ಐಎಇಎ ಮುಂದಾಗಿದೆ. ಆದರೆ, ಐಎಇಎಯ ನಿರ್ಧಾರವನ್ನು ಇರಾನ್ ತಿರಸ್ಕರಿಸಿದೆ.

ಭಾನುವಾರ ತಡರಾತ್ರಿ ದೂರದರ್ಶನದ ಸಂದರ್ಶನವೊಂದರಲ್ಲಿ ಮಾತನಾಡಿದ ಇರಾನ್‌ನ ಉಪ ವಿದೇಶಾಂಗ ಸಚಿವ ಕಾಜೆಮ್ ಘರಿಬಾಬಾದಿ, “ಇರಾನ್‌ನ ಷರತ್ತುಗಳು ಈಡೇರುವವರೆಗೆ ಮತ್ತು ಯುದ್ಧವು ಶಾಶ್ವತವಾಗಿ ಮುಗಿಯುವವರೆಗೆ ನಮ್ಮ ಪರಮಾಣು ಕೇಂದ್ರಗಳಿಗೆ ಐಎಇಎ ಪ್ರವೇಶಕ್ಕೆ ಅನುಮತಿ ನೀಡುವುದಿಲ್ಲ” ಎಂದು ಖಚಿತಪಡಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ ಸಿಲುಕಿದ ಸತ್ಯಾನ್ವೇಷಣೆ!

“ಹಾನಿಗೊಳಗಾದ ಪರಮಾಣು ಕೇಂದ್ರಗಳನ್ನು ಪರಿಶೀಲಿಸಲು ಐಎಇಎ ಮಾಡುತ್ತಿರುವ ಮನವಿಯ ಹಿಂದೆ ಅಮೆರಿಕದ ಶಸ್ತ್ರಾಸ್ತ್ರಗಳ ಪರಿಣಾಮಕಾರಿತ್ವವನ್ನು ಅಂದಾಜು ಮಾಡುವ ಉದ್ದೇಶ ಇರುವುದು ಕಾಣುತ್ತಿದೆ” ಎಂದು ಘರಿಬಾಬಾದಿ ಹೇಳಿದ್ದಾರೆ.

ಇದೇ ಹೊತ್ತಿನಲ್ಲಿ, ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಯತ್ನಗಳು ಯಾವುದೇ ಪ್ರಗತಿ ಕಂಡಿಲ್ಲ. ಸಂಘರ್ಷದ ಸಮಯದಲ್ಲಿ ತಾನು ದಿಗ್ಬಂಧನ ವಿಧಿಸಿರುವ ‘ಹಾರ್ಮುಜ್ ಜಲಸಂಧಿ’ಯನ್ನು ಮತ್ತೆ ತೆರೆಯಬೇಕೆಂದರೆ, ಅಮೆರಿಕ ತನ್ನ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಬೇಕು. ಅಲ್ಲದೆ, ಅಮೆರಿಕದಲ್ಲಿ ತಡೆಹಿಡಿಯಲಾಗಿರುವ ಇರಾನ್‌ನ ಸ್ವತ್ತುಗಳನ್ನು ಬಿಡುಗಡೆ ಮಾಡಬೇಕು ಎಂಬಿತ್ಯಾದಿ ಷರತ್ತುಗಳನ್ನು ಇರಾನ್ ಮುಂದಿಟ್ಟಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆಯ ಚಳಿಗಾಲದ ಅಧಿವೇಶನ; ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆ ಮಂಡನೆಗೆ ಬಿಜೆಪಿ ತಯಾರಿ

ಕೇಂದ್ರ ಬಿಜೆಪಿ ಸರ್ಕಾರವು ಮುಂಬರುವ ಚಳಿಗಾಲದ ಅಧಿವೇಶನಕ್ಕೂ ಮುನ್ನವೇ ಸಂಸತ್ತಿನ ವಿಶೇಷ...

Aurad Ground Report | ನೀರಿನ ತ್ರಾಸ ಭಾಳ ಅದಾ, ಟ್ಯಾಂಕರ್‌ ನೀರು ಭ್ಯಾಡಾ, ನಮ್ಗ್ ನಳ ನೀರೇ ಬೇಕ್!

"ಎಂಟು ದಿನಕ್ಕೊಮ್ಮೆ ನೀರಿನ ಟ್ಯಾಂಕರ್‌ ಬರ್ತದೆ, ಅವರು ಮನೆಗೊಂದು ಬ್ಯಾರಲ್‌ ನೀರಷ್ಟೇ...

ರಸ್ತೆ ಅಪಘಾತ | ರಾಜ್ಯದಲ್ಲಿ ವರ್ಷಕ್ಕೆ 11 ಸಾವಿರಕ್ಕೂ ಹೆಚ್ಚು ಬಲಿ; ಪ್ರತಿದಿನ ಸರಾಸರಿ 31 ಮಂದಿ ಸಾವು!

ರಾಜ್ಯದಲ್ಲಿ ರಸ್ತೆ ಅಪಘಾತಗಳು ಆತಂಕಕಾರಿ ಮಟ್ಟ ತಲುಪಿದ್ದು, ಪ್ರತಿ ವರ್ಷ 11...

ಸಿನೆಮಾ ನೋಡುವುದು: ಕಲೆಯ ಆಂತರ್ಯವನ್ನು ಗ್ರಹಿಸುವ ಕ್ರಮ

ಸಿನೆಮಾ ವಿಶ್ಲೇಷಣೆ ಎಂದರೆ ಕೇವಲ ದೋಷಗಳನ್ನು ಎಣಿಸುವ ಮೇಲ್ನೋಟದ ತೀರ್ಪಲ್ಲ. ಪರದೆಯ...