ಇರಾನ್‌ನ ಪರಮಾಣು ಕಾರ್ಯಕ್ರಮದ ಮಾಹಿತಿ ಕೊಟ್ಟವರಿಗೆ 2 ಕೋಟಿ ಡಾಲರ್ ಬಹುಮಾನ: ಅಮೆರಿಕ ಘೋಷಣೆ

Date:

ಇರಾನ್‌ನ ಪರಮಾಣು ಕಾರ್ಯಕ್ರಮದ ಕುರಿತು ಮಹತ್ವದ ಮಾಹಿತಿ ನೀಡುವವರಿಗೆ ಗರಿಷ್ಠ 20 ಮಿಲಿಯನ್ ಡಾಲರ್ (2 ಕೋಟಿ ಡಾಲರ್) ಬಹುಮಾನ ನೀಡುವುದಾಗಿ ಅಮೆರಿಕ ಘೋಷಿಸಿದೆ. ಇರಾನ್‌ನ ಪರಮಾಣು ಕೇಂದ್ರಗಳು, ಅಲ್ಲಿನ ಉಪಕರಣಗಳು, ಸಂಶೋಧನೆಯಲ್ಲಿ ತೊಡಗಿರುವ ವಿಜ್ಞಾನಿಗಳು ಹಾಗೂ ಅವುಗಳ ಚಟುವಟಿಕೆಗಳ ಕುರಿತು ಮಾಹಿತಿ ನೀಡುವವರಿಗೆ ಅಮೆರಿಕದ ವಿದೇಶಾಂಗ ಇಲಾಖೆಯ ‘ರಿವಾರ್ಡ್ಸ್ ಫಾರ್ ಜಸ್ಟಿಸ್’ ಕಾರ್ಯಕ್ರಮದ ಅಡಿಯಲ್ಲಿ ಈ ಬಹುಮಾನ ನೀಡಲಾಗುವುದು ಎಂದು ಅಮೆರಿಕದ ಸೇನೆಯ ಸೆಂಟ್ರಲ್ ಕಮಾಂಡ್ (CENTCOM) ತಿಳಿಸಿದೆ.

- Advertisement -

ಮಾಹಿತಿ ನೀಡುವವರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯವಿದ್ದಲ್ಲಿ ಅವರನ್ನು ಬೇರೆ ಸ್ಥಳಕ್ಕೆ ಸ್ಥಳಾಂತರಿಸುವ ಅವಕಾಶವನ್ನೂ ಒದಗಿಸಲಾಗುತ್ತದೆ ಎಂದು ಸೆಂಟ್ರಲ್ ಕಮಾಂಡ್‌ ತಿಳಿಸಿದೆ. ಆದರೆ, ಯಾವ ರೀತಿಯ ಮಾಹಿತಿ ನೀಡಿದರೆ ಗರಿಷ್ಠ 2 ಕೋಟಿ ಡಾಲರ್ ಬಹುಮಾನ ದೊರೆಯುತ್ತದೆ ಎಂಬುದರ ಕುರಿತು ನಿರ್ದಿಷ್ಟ ಷರತ್ತುಗಳನ್ನು ಪ್ರಕಟಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ಇರಾನ್‌ನ ಪರಮಾಣು ಕಾರ್ಯಕ್ರಮವು ಹಲವು ವರ್ಷಗಳಿಂದ ಅಮೆರಿಕ ಮತ್ತು ಇರಾನ್ ನಡುವಿನ ಪ್ರಮುಖ ವಿವಾದಗಳಲ್ಲಿ ಒಂದಾಗಿದೆ. ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸುವ ಸಾಧ್ಯತೆಯ ಬಗ್ಗೆ ಅಮೆರಿಕ ಆತಂಕ ವ್ಯಕ್ತಪಡಿಸುತ್ತಿದ್ದರೆ, ತನ್ನ ಪರಮಾಣು ಕಾರ್ಯಕ್ರಮವು ಶಾಂತಿಯುತ ಉದ್ದೇಶಗಳನ್ನು ಹೊಂದಿದೆ ಎಂದು ಇರಾನ್ ಪ್ರತಿಪಾದಿಸಿದೆ.

ಇರಾನ್‌ನ ಯುರೇನಿಯಂ ಶಕ್ತಿಯನ್ನು ನಾಶ ಮಾಡಲೆಂದು ಅಮೆರಿಕ-ಇಸ್ರೇಲ್ ಜಂಟಿಯಾಗಿ ಕಳೆದ ಫೆಬ್ರವರಿಯಲ್ಲಿ ಇರಾನ್‌ ಮೇಲೆ ದಾಳಿ ನಡೆಸಿದ್ದವು. ಆದರೆ, ಈ ದಾಳಿಗೆ ಇರಾನ್ ಪ್ರಬಲವಾಗಿ ಪ್ರತಿದಾಳಿ ನಡೆಸಿತು. ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿರುವ ಅಮೆರಿಕ ಸೇನಾ ನೆಲೆಗಳನ್ನು ಧ್ವಂಸಗೊಳಿಸಿತು. ಅಂದಿನಿಂದ, ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿವೆ. ಆಗ್ಗಾಗ್ಗೆ ಶಾಂತಿ ಒಪ್ಪಂದಗಳು ನಡೆಯುತ್ತಿವೆ. ಆದರೂ, ಕದನ ವಿರಾಮವನ್ನು ಅಮೆರಿಕ-ಇಸ್ರೇಲ್ ಮುರಿಯುತ್ತಲೇ ಇವೆ.

ಈ ಯುದ್ಧದ ನಡುವೆ, ಹಲವು ಬಾರಿ ಹೇಳಿಕೆಗಳನ್ನು ನೀಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್, “ಅಮೆರಿಕ ನಡೆಸಿದ ಸೇನಾ ದಾಳಿಗಳಿಂದ ಇರಾನ್‌ನ ಪರಮಾಣು ಕಾರ್ಯಕ್ರಮಕ್ಕೆ ತೀವ್ರ ಹಾನಿಯಾಗಿದೆ” ಎಂದು ಹೇಳಿಕೊಂಡಿದ್ದರು.

ಆದರೆ, ಇದೀಗ ಅದೇ ಪರಮಾಣು ಕಾರ್ಯಕ್ರಮದ ಸ್ಥಾವರಗಳು, ಉಪಕರಣಗಳು ಹಾಗೂ ವಿಜ್ಞಾನಿಗಳ ಕುರಿತು ಮಾಹಿತಿ ಸಂಗ್ರಹಿಸಲು ಅಮೆರಿಕ ಭಾರೀ ಮೊತ್ತದ ಬಹುಮಾನ ಘೋಷಿಸಿದೆ. ಇದು ಟ್ರಂಪ್ ಹೇಳಿಕೆಗಳಿಗೆ ತದ್ವಿರುದ್ಧವಾಗಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಆತ್ಮರಕ್ಷಣೆಗೆ ವುಶು, ಕರಾಟೆ ಕ್ರೀಡೆಗಳ ಅಗತ್ಯವಿದೆ: ಡಾ. ವೀರಣ್ಣ ಚರಂತಿಮಠ

ದೈಹಿಕ ಹಾಗೂ ಮಾನಸಿಕ ಸದೃಢತೆ ಕಾಪಾಡಿಕೊಳ್ಳಲು ಕ್ರೀಡೆಗಳು ಅತ್ಯವಶ್ಯವಾಗಿದ್ದು, ವುಶು ಮತ್ತು...

ರಾಜ್ಯದ 13 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಕಳೆದೊಂದು ವಾರದಿಂದ ಮಳೆ ಅಬ್ಬರಿಸುತ್ತಿದೆ. ನಾನಾ ಭಾಗಗಳಲ್ಲಿ ಧಾರಾಕಾರ ಮಳೆ...

ಅರುಣಾಚಲ ಪ್ರದೇಶ | ಸಿಯಾಂಗ್ ಅಣೆಕಟ್ಟಿಗೆ ವಿರೋಧ; ಸರ್ಕಾರದ ಜತೆಗೆ ಮಾತುಕತೆ ನಿರಾಕರಿಸಿದ ಪ್ರತಿಭಟನಾಕಾರರು

ಅರುಣಾಚಲ ಪ್ರದೇಶದ ಸಿಯಾಂಗ್ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ಸರ್ಕಾರ ಮುಂದಾಗಿದೆ....

ಭಾರತದಲ್ಲಿ ನೆಲೆಸಿರುವ ನಿರಾಶ್ರಿತರಿಗೆ ವೀಸಾ ಕಡ್ಡಾಯ; ಏನಿದು ಕೇಂದ್ರದ ನೂತನ ವಲಸೆ ನಿಯಮ?

ಭಾರತದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳು, ನಿರಾಶ್ರಿತರು ಮತ್ತು ನೆರೆರಾಷ್ಟ್ರಗಳ ಪೌರರಿಗೆ ಕೇಂದ್ರ...