ಅಮೆರಿಕ | 88 ಲಕ್ಷ ರೂ. H-1B ವೀಸಾ ಶುಲ್ಕ: ಯಾರಿಗೆ ವಿನಾಯಿತಿ, ಅನ್ವಯ?

Date:

ಎಚ್‌1-ಬಿ ವೀಸಾ (H-1B) ಹೊಂದಲು $100,000 ಅಂದರೆ 88 ಲಕ್ಷ ರೂಪಾಯಿ ಶುಲ್ಕ ಪಾವತಿಸಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೆಪ್ಟೆಂಬರ್ 19ರಂದು ಘೋಷಣೆ ಮಾಡಿದ್ದರು. ಇದೀಗ ಈ ಶುಲ್ಕವನ್ನು ಯಾರು ಪಾವತಿಸಬೇಕು ಎಂಬ ಕುರಿತಾಗಿ ಅಮೆರಿಕ ಮಾರ್ಗಸೂಚಿಗಳನ್ನು ಹೊರತಂದಿದೆ.

- Advertisement -

ಅಮೆರಿಕ ಎಚ್‌1-ಬಿ ವೀಸಾಗೆ $100,000 ಶುಲ್ಕ ವಿಧಿಸಿರುವುದು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಈ ಸಂಬಂಧ ಟ್ರಂಪ್ ಆಡಳಿತದ ವಿರುದ್ಧ ಯುಎಸ್‌ ಚೇಂಬರ್ ಆಫ್ ಕಾಮರ್ಸ್ ಮೊಕದ್ದಮೆ ಹೂಡಿದೆ. ಈ ನಡುವೆ ಅಮೆರಿಕ ನವೀಕರಿಸಿದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಯಾರಿಗೆ ವೀಸಾ ಶುಲ್ಕ ವಿನಾಯಿತಿ, ಅನ್ವಯ?

ಅಮೆರಿಕ ಪೌರತ್ವ ಮತ್ತು ವಲಸೆ ಸೇವೆಗಳು(USCIS) ಭಾನುವಾರ ಹೊರಡಿಸಿದ ಮಾರ್ಗಸೂಚಿಯು H-1B ವೀಸಾ ಆಕಾಂಕ್ಷಿಗಳು ತಮ್ಮ ಪ್ರಸ್ತುತ ವೀಸಾವನ್ನು ಬದಲಾಯಿಸಲು ಅಥವಾ ಈಗಾಗಲೇ ಇರುವ ವೀಸಾವನ್ನು ವಿಸ್ತರಿಸಲು ಅಥವಾ ನವೀಕರಿಸಲು ಬಯಸಿದರೆ $100,000 ಶುಲ್ಕ ಪಾವತಿಯಿಂದ ವಿನಾಯಿತಿ ನೀಡುತ್ತವೆ. ಹಾಗೆಯೇ ಈಗಾಗಲೇ F-1 ವೀಸಾ ಹೊಂದಿರುವ ವಿದೇಶಿ ವಿದ್ಯಾರ್ಥಿಗಳು, L-1 ವೀಸಾ ಹೊಂದಿರುವವರಿಗೆ H-1B ವೀಸಾ ಅರ್ಜಿ ಸಲ್ಲಿಸುವಾಗ ಶುಲ್ಕ ವಿನಾಯಿತಿ ನೀಡಲಾಗುತ್ತದೆ.

ಇದನ್ನು ಓದಿದ್ದೀರಾ? ಅಮೆರಿಕ H-1B ವೀಸಾ ಶುಲ್ಕ ₹84 ಲಕ್ಷಕ್ಕೆ ಏರಿಸಿದ ಟ್ರಂಪ್; ಭಾರತದ ಮೇಲೆ ಗಂಭೀರ ಪರಿಣಾಮ

ಆದರೆ ಸೆಪ್ಟೆಂಬರ್ 21ರಿಂದ ಸಲ್ಲಿಸಲಾದ ಹೊಸ H-1B ವೀಸಾ ಅರ್ಜಿಗಳಿಗೆ, ಹಾಗೆಯೇ ಮಾನ್ಯ ವೀಸಾ ಇಲ್ಲದ ಮತ್ತು ಪ್ರಸ್ತುತ ಯುಎಸ್‌ನ ಹೊರಗಿರುವ H-1B ಅರ್ಜಿದಾರರಿಗೆ $100,000 ಶುಲ್ಕ ಅನ್ವಯಿಸುತ್ತದೆ. ಇನ್ನು USCIS ಈಗಾಗಲೇ ಹೊಸ H-1B ವೀಸಾ ಅರ್ಜಿಗಳ ಜೊತೆಗೆ ಶುಲ್ಕವನ್ನು ಪಾವತಿಸಲು ಪೋರ್ಟಲ್ ಅನ್ನು ತೆರೆದಿದೆ.

ಯುಎಸ್ ಆಡಳಿತವು ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳಿಗೆ ವೀಸಾ ಶುಲ್ಕದಿಂದ ವಿನಾಯಿತಿ ನೀಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ಮಾರ್ಗಸೂಚಿ ಈ ಬಗ್ಗೆ ಉಲ್ಲೇಖಿಸಿಲ್ಲ. ಅಮೇರಿಕನ್ ಮೆಡಿಕಲ್ ಅಸೋಸಿಯೇಷನ್ ಈ ವಲಯದ ವಿದೇಶಿ ವೃತ್ತಿಪರರಿಗೆ $100,000 ಶುಲ್ಕವನ್ನು ಮನ್ನಾ ಮಾಡುವಂತೆ ಒತ್ತಾಯಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...