ಅಮೆರಿಕ ಬದ್ಧತೆ ಮುರಿದ ಇತಿಹಾಸವಿದೆ; ಶಾಂತಿ ಒಪ್ಪಂದದ ಕುರಿತು ಇರಾನ್ ಪ್ರತಿಕ್ರಿಯೆ

Date:

ಅಮೆರಿಕ ಜೊತೆಗಿನ ಈ ಒಪ್ಪಂದವನ್ನು ತಾವು ಸಂಪೂರ್ಣವಾಗಿ ನಂಬಲು ಸಿದ್ಧವಿಲ್ಲ. ಒಪ್ಪಂದಗಳು ಮುರಿದುಬಿದ್ದ ಇತಿಹಾಸ ನಮ್ಮ ಮುಂದಿದೆ. ಕರಡುಗಳನ್ನು ಹರಿದು ಹಾಕಿದ ನಿದರ್ಶನಗಳೂ ಇವೆ. ಈ ಒಪ್ಪಂದಕ್ಕೆ ಸಂಬಂಧಿಸಿದಂತೆ ನಾವು ಜಾಗರೂಕ ಮತ್ತು ಎಚ್ಚರಿಕೆ ಹೆಜ್ಜೆ ಇಡುತ್ತೇವೆ ಎಂದು ಇರಾನ್ ಹೇಳಿದೆ.

- Advertisement -

ಸೋಮವಾರ, ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದದ ಚರ್ಚೆಗಳನ್ನು ಪೂರ್ಣಗೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಿಸಿದ್ದರು. ಇದೀಗ, ಈ ಒಪ್ಪಂದದ ಕುರಿತು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಪ್ರತಿಕ್ರಿಯೆ ನೀಡಿದ್ದಾರೆ. “ನಾವು ಯಾವುದೇ ಆತುರದ ತೀರ್ಮಾನಕ್ಕೆ ಬಾರದೆ, ಎಚ್ಚರಿಕೆಯ ನಡೆ ಅನುಸರಿಸುತ್ತೇವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಹಿಂದೆ ಮಾಡಿಕೊಂಡಿದ್ದ ಒಪ್ಪಂದಗಳಲ್ಲಿ ಅಮೆರಿಕದ ಬದ್ಧತೆಗಳು ಹೇಗೆ ಮುರಿದುಬಿದ್ದವು ಎಂಬುದನ್ನು ನಾವು ನೋಡಿದ್ದೇವೆ. ಅವರು ಸಹಿ ಹಾಕಿದ ಕರಡು ಪ್ರತಿಗಳನ್ನು ಹೇಗೆ ಹರಿದುಹಾಕಿದರು ಎಂಬ ಕಟು ಇತಿಹಾಸ ನಮ್ಮ ಕಣ್ಣಮುಂದಿದೆ. ಅಮೆರಿಕದ ಈ ಹಿಂದಿನ ನಂಬಿಕೆದ್ರೋಹದ ಎಲ್ಲ ನಿದರ್ಶನಗಳು ನಮ್ಮ ಮನಸ್ಸಿನಲ್ಲಿ ಹಚ್ಚಹಸಿರಾಗಿಯೇ ಇವೆ” ಎಂದು ಅಬ್ಬಾಸ್ ಹೇಳಿದ್ದಾರೆ.

ಇದೇ ವಿಷಯವಾಗಿ ಇರಾನ್ ವಿದೇಶಾಂಗ ಇಲಾಖೆಯ ಉಪ ಸಚಿವ ಕಝೆಮ್‌ ಘರಿಬಬಾದಿ ಕೂಡ ಮಾತನಾಡಿದ್ದು, “ಪ್ರಸ್ತುತ ಜಾರಿಗೆ ಬಂದಿರುವ ಒಪ್ಪಂದವು ಜಾಗತಿಕ ಇಂಧನ ಮಾರುಕಟ್ಟೆಯನ್ನು ನಡುಗಿಸಿದ್ದ ಭೀಕರ ಯುದ್ಧವನ್ನು ಸದ್ಯಕ್ಕೆ ಕೊನೆಗೊಳಿಸಿದೆ. ಆದರೆ, ಇದು ಕೇವಲ ಆರಂಭಿಕ ಹಂತವಾಗಿದ್ದು, ಮುಂದಿನ ಎರಡು ತಿಂಗಳ ಒಳಗಾಗಿ ಉಭಯ ದೇಶಗಳ ನಡುವೆ ಎಲ್ಲ ಅಂಶಗಳನ್ನು ಒಳಗೊಂಡ ಸಂಪೂರ್ಣ ಮತ್ತು ಅಂತಿಮ ಒಪ್ಪಂದವು ಏರ್ಪಡಲಿದೆ” ಎಂದಿದ್ದಾರೆ.

ಈ ಒಪ್ಪಂದವು ತಮ್ಮ ಬಹುದೊಡ್ಡ ಜಯ ಎಂದು ಇರಾನ್‌ನ ಮಿಲಿಟರಿ ಮತ್ತು ರಾಜಕೀಯ ನಾಯಕತ್ವ ಘೋಷಿಸಿವೆ. ಒಪ್ಪಂದವು ಅಮೆರಿಕ ಮತ್ತು ಇಸ್ರೇಲ್‌ನ ಜಂಟಿ ಕೂಟಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಉಂಟಾದ ಭಾರಿ ಮುಖಭಂಗ ಎಂದು ಇರಾನ್ ಸೇನೆ ಅಧಿಕೃತವಾಗಿ ಹೇಳಿದೆ. ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರೂ ಸಹ ಒಪ್ಪಂದವನ್ನು ಶ್ಲಾಘಿಸಿದ್ದು, ಇಡೀ ಪಶ್ಚಿಮ ಏಷ್ಯಾ ಭಾಗದಲ್ಲಿ ಇರಾನ್ ತನ್ನ ಸಾರ್ವಭೌಮತ್ವವನ್ನು ಎತ್ತಿಹಿಡಿದ ಐತಿಹಾಸಿಕ ಸಾಧನೆ ಇದಾಗಿದೆ ಎಂದು ಬಣ್ಣಿಸಿದ್ದಾರೆ.

ಮತ್ತೊಂದೆಡೆ, ಅಮೆರಿಕ-ಇರಾನ್‌ ಒಪ್ಪಂದದಿಂದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತೀವ್ರ ಅಸಮಾಧಾನಗೊಂಡಿದ್ದಾರೆ. ‘ಹೋರಾಟ ಇಲ್ಲಿಗೇ ನಿಂತಿಲ್ಲ. ಒಪ್ಪಂದದ ನಿಯಮಗಳಂತೆ ಇರಾನ್ ನಡೆದುಕೊಳ್ಳುವ ಬಗ್ಗೆ ತಮಗೆ ಯಾವುದೇ ನಂಬಿಕೆಯಿಲ್ಲ” ಎಂದು ನೆತನ್ಯಾಹು ಹೇಳಿದ್ದಾರೆ.

ಕಳೆದ ಫೆಬ್ರುವರಿ 28ರಂದು ಅಮೆರಿಕ-ಇಸ್ರೇಲ್‌ ಜಂಟಿಯಾಗಿ ಇರಾನ್ ಮೇಲೆ ದಾಳಿ ಆರಂಭಿಸಿದ್ದವು. ಇರಾನ್‌ನ ಪರಮೋಚ್ಚ ಧಾರ್ಮಿಕ ನಾಯಕ ಆಯಾತೊಲ್ಲಾ ಅಲಿ ಖಮೇನಿಯನ್ನು ಹತ್ಯೆ ಮಾಡಿದ್ದವು. ಬಳಿಕ, ಇರಾನ್ ಪ್ರತಿದಾಳಿ ಆರಂಭಿಸಿತ್ತು. ಮಧ್ಯಪ್ರಾಚ್ಯದಲ್ಲಿರುವ ಅಮೆರಿಕ ಸೇನಾ ನೆಲಗಳು ಮತ್ತು ಇಸ್ರೇಲ್ ಮೇಲೆ ನಿರಂತರ ದಾಲಿ ಮಾಡಿತು. ಈ ದಾಳಿಗಳಿಂದ ಅಮೆರಿಕ-ಇಸ್ರೇಲ್ ತತ್ತರಿಸಿ ಹೋಗಿದ್ದರು. ಇರಾನ್ ಪ್ರತಿದಾಳಿಯಿಂದ ಕಂಗಾಲಾಗಿದ್ದ ಟ್ರಂಪ್, ಆರ್ಥಿಕ ಮತ್ತು ರಾಜತಾಂತ್ರಿಕ ಕಾರಣಗಳನ್ನು ಮುಂದಿಟ್ಟು, ಯುದ್ಧ ನಿಲ್ಲಿಸಲು ಯತ್ನಿಸಿದ್ದರು. ಕಳೆದ ಏಪ್ರಿಲ್‌ನಲ್ಲಿ ಕದನ ವಿರಾಮ ಘೋಷಿಸಲಾಗಿತ್ತು. ಅಂದಿನಿಂದ, ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಅಮೆರಿಕ-ಇರಾನ್ ನಡುವೆ ನಿರಂತರ ಶಾಂತಿ ಒಪ್ಪಂದದ ಮಾತುಕತೆಗಳು ನಡೆದಿದ್ದವು. ಇದೀಗ, ಒಪ್ಪಂದವು ಅಂತಿಮಗೊಂಡಿದ್ದು, ಶುಕ್ರವಾರ ಎರಡೂ ರಾಷ್ಟ್ರಗಳು ಸ್ವಿಡ್ಜರ್‌ಲ್ಯಾಂಡ್‌ನಲ್ಲಿ ಒಪ್ಪಂದಕ್ಕೆ ಸಹಿ ಹಾಕಲಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...