ಪ್ರಧಾನಿ ಮೋದಿ ರಷ್ಯಾ ಭೇಟಿ: ನ್ಯಾಟೋ ಶೃಂಗಸಭೆಯಲ್ಲಿ ಅಮೆರಿಕ ಆಕ್ರೋಶ

Date:

Advertisements

ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಮಾಸ್ಕೋ ಭೇಟಿಯ ಸಮಯದಲ್ಲಿ ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯದ ಮಾತುಕತೆಯ ಬಗ್ಗೆ ಜೋ ಬೈಡನ್ ನೇತೃತ್ವದ ಅಮೆರಿಕ ಆಡಳಿತದ ಹಲವು ಹಿರಿಯ ಅಧಿಕಾರಿಗಳನ್ನು ಕೆರಳಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ತಮ್ಮ ಎರಡು ದಿನಗಳ ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ರಷ್ಯಾವನ್ನು ಭಾರತದ “ಸಾರ್ವಕಾಲಿಕ ಸ್ನೇಹಿತ” ಎಂದು ಬಣ್ಣಿಸಿದರು. ಅಲ್ಲದೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಸ್ವೀಕರಿಸಿದ ಮೋದಿ, ವ್ಲಾಡಿಮಿರ್‌ ಪುಟಿನ್‌ ಅವರ ಎರಡು ದಶಕದ ಆಡಳಿತದಲ್ಲಿಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಸದೃಢವಾಗಿದೆ ಎಂದು ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ವಾಷಿಂಗ್ಟನ್‌ನಲ್ಲಿ ಜುಲೈ 9 ರಿಂದ ಜುಲೈ 11 ರವರೆಗೂ ನಡೆದ ನ್ಯಾಟೋ ಶೃಂಗಸಭೆಯಲ್ಲಿ ನರೇಂದ್ರ ಮೋದಿ ರಷ್ಯಾ ಭೇಟಿ ಹಾಗೂ ಉಭಯ ನಾಯಕರ ಮಾತುಕತೆಗಳ ಬಗ್ಗೆ ಅಮೆರಿಕದ ಹಿರಿಯ ಅಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ವರದಿ ಹೇಳಿದೆ.

Advertisements

ಉಕ್ರೇನ್ ಮೇಲೆ ಅಮೆರಿಕ ಆಕ್ರಮಣದ ನಂತರ ಪ್ರಧಾನಿ ಮೋದಿ ಅವರ ಮೊದಲ ರಷ್ಯಾ ಭೇಟಿ ಇದಾಗಿದ್ದು, ಅಮೆರಿಕಾ ಹಾಗೂ ಭಾರತದ ನಿಕಟ ಸಂಬಂಧಗಳ ಬಗ್ಗೆ ಅಮೆರಿಕದ ಸರ್ಕಾರದ ಒಳಗೆ ಮತ್ತು ಹೊರಗೆ ಟೀಕೆಗಳನ್ನು ಹುಟ್ಟುಹಾಕಿದೆ ಎಂದು ಅಮೆರಿಕದ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮನಗರ ಜಿಲ್ಲೆ ಹೆಸರು ಬದಲಾವಣೆ ಯಾರಿಗಾಗಿ, ಏತಕ್ಕಾಗಿ?

ಮೋದಿ ಭೇಟಿಯು ಜೋ ಬೈಡನ್ ಆಡಳಿತಕ್ಕೆ “ಕಷ್ಟಕರ ಮತ್ತು ಅನಾನುಕೂಲ” ಎಂದು ಅಮೆರಿಕ ಅಧಿಕಾರಿಗಳು ಒಪ್ಪಿಕೊಂಡಿದ್ದು, ಉಭಯ ದೇಶಗಳ ಸಂಬಂಧ ಮತ್ತಷ್ಟು ಸಂಕೀರ್ಣಗೊಳಿಸುತ್ತದೆ ಎಂದು ನವದೆಹಲಿಗೆ ತಿಳಿಸಲಾಗಿದೆ ಎಂದು ವರದಿ ಮಾಡಲಾಗಿದೆ.

ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ ಕೂಡ ಹಿಂದಿನ ದಿನ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಪ್ರಧಾನಿ ಮೋದಿ-ಪುಟಿನ್ ಭೇಟಿಯನ್ನು ಪರೋಕ್ಷವಾಗಿ ಟೀಕಿಸಿದರು. ಭಾರತವು ಅಮೆರಿಕ ಸ್ನೇಹವನ್ನು ಉದಾಸೀನ ಮಾಡಬಾರದು ಎಂದು ಹೇಳಿದ್ದರು.

ಈ ನಡುವೆ, ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ನವದೆಹಲಿಗೆ ಎಚ್ಚರಿಕೆ ನೀಡಿದ್ದಾರೆ. “ಭಾರತವು ದೀರ್ಘಕಾಲದ, ವಿಶ್ವಾಸಾರ್ಹ ಪಾಲುದಾರರಾಗಿ ರಷ್ಯಾ ಮೇಲೆ ಅವಲಂಬಿತವಾಗುವುದು ಉತ್ತಮ ಬೆಳವಣಿಗೆಯಲ್ಲ. ರಷ್ಯಾವು ಚೀನಾಕ್ಕೆ ಹತ್ತಿರವಾಗುತ್ತಿದೆ. ಸಂಘರ್ಷದ ಸಂದರ್ಭದಲ್ಲಿ ಮಾಸ್ಕೋ ನವದೆಹಲಿಯ ವಿರುದ್ಧವಾಗಿ ಹಾಗೂ ಬೀಜಿಂಗ್‌ ಪರವಾಗಿ ನಿಲ್ಲುತ್ತದೆ. ಇತ್ತೀಚಿನ ವರ್ಷಗಳಲ್ಲಿ ಚೀನಾ ಆಕ್ರಮದ ಬಗ್ಗೆ ಪ್ರಧಾನಿ ಮೋದಿ ಸಹಜವಾಗಿ ಕಳವಳಗೊಂಡಿರುವುದನ್ನು ನಾವು ನೋಡಿದ್ದೇವೆ. ಚೀನಾದ ಆಕ್ರಮಣದ ಬಗ್ಗೆ ನಾವು ಭಾರತ ಸೇರಿದಂತೆ ವಿಶ್ವದ ಪ್ರತಿಯೊಂದು ದೇಶಕ್ಕೂ ತಿಳಿಸುತ್ತೇವೆ” ಎಂದು ಸುಲ್ಲಿವನ್ ಹೇಳಿದರು.

2022 ರಿಂದ ಆರಂಭವಾದ ಉಕ್ರೇನ್‌ ಮೇಲಿನ ರಷ್ಯಾದ ಆಕ್ರಮಣವನ್ನು ಭಾರತ ಇಲ್ಲಿಯವರೆಗೆ ಖಂಡಿಸಿಲ್ಲ. ಈ ಬಗ್ಗೆ ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳು ಆಕ್ರೋಶ ವ್ಯಕ್ತಪಡಿಸಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X