ಡೊನಾಲ್ಡ್ ಟ್ರಂಪ್ ಆಡಳಿತದ ಪೌರತ್ವ ನೀತಿ ಆದೇಶಕ್ಕೆ ಅಮೆರಿಕ ಕೋರ್ಟ್ ತಡೆ

Date:

ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ ಪೌರತ್ವ ನೀತಿ ಸಂಬಂಧಿಸಿದಂತೆ ಹೊರಡಿಸಿದ ಕಾರ್ಯಾದೇಶದ ಜಾರಿಗೆ ಫೆಡರಲ್ ನ್ಯಾಯಾಧೀಶರು ಗುರುವಾರ ತಡೆ ವಿಧಿಸಿದ್ದಾರೆ.

- Advertisement -

ಇದನ್ನು ಅಸಂವಿಧಾನಿಕ ಎಂದು ನ್ಯಾಯಾಲಯ ಘೋಷಿಸಿದೆ. ಹುಟ್ಟಿನಿಂದಲೇ ಅಮೆರಿಕದ ಪೌರತ್ವವನ್ನು ಪಡೆಯುವ ಹಕ್ಕನ್ನು ಮೊಟಕುಗೊಳಿಸುವ ಕಾರ್ಯಾದೇಶಕ್ಕೆ ಡೊನಾಲ್ಡ್ ಟ್ರಂಪ್ ತಮ್ಮ ಎರಡನೇ ಅಧ್ಯಕ್ಷಾವಧಿಯ ಮೊದಲ ದಿನವೇ ಸಹಿ ಮಾಡಿದ್ದರು. ರಿಪಬ್ಲಿಕನ್ ಅಧ್ಯಕ್ಷರು ಸೋಮವಾರ ಸಹಿ ಮಾಡಿದ ಕಾರ್ಯಾದೇಶದ ಜಾರಿಗೆ ತಡೆಯೊಡ್ಡುವಂತೆ ಕೋರಿ ಡೆಮಾಕ್ರಟಿಕ್ ಆಡಳಿತದ ನಾಲ್ಕು ರಾಜ್ಯಗಳು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಅಮೆರಿಕದ ಜಿಲ್ಲಾ ನ್ಯಾಯಾಧೀಶ ಜಾನ್ ಕಫ್ನೌರ್ ಈ ತಡೆಯಾಜ್ಞೆ ವಿಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಇದು ಸಂಪೂರ್ಣವಾಗಿ ಕಾನೂನುಬಾಹಿರ ಆದೇಶ” ಎಂದು ಟ್ರಂಪ್ ಕಾರ್ಯಾದೇಶದ ಕುರಿತಂತೆ ಅಮೆರಿಕದ ನ್ಯಾಯಾಂಗ ಇಲಾಖೆಯ ವಕೀಲರಿಗೆ ನ್ಯಾಯಮೂರ್ತಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈಕ್ರೋ ಫೈನಾನ್ಸ್‌ಗೆ ಬಲಿಯಾಗುತ್ತಿರುವ ಬಡವರು; ಸತ್ತಂತಿರುವ ಸರ್ಕಾರ

ಟ್ರಂಪ್ ಆದೇಶದ ವಿರುದ್ಧ ನಾಗರಿಕ ಹಕ್ಕು ಸಂಘಟನೆಗಳು ಈಗಾಗಲೇ ಐದು ದಾವೆಗಳನ್ನು ಸಲ್ಲಿಸಿವೆ. ಜತೆಗೆ 22 ರಾಜ್ಯಗಳ ಡೆಮಾಕ್ರಟಿಕ್ ಅಟಾರ್ನಿ ಜನರಲ್ ಗಳು ಕೂಡಾ ದಾವೆ ಸಲ್ಲಿಸಿದ್ದಾರೆ. ಈ ಆದೇಶ ಅಮೆರಿಕ ಸಂವಿಧಾನದ ಸ್ಪಷ್ಟ ಉಲ್ಲಂಘನೆ ಎಂದು ವಾದಿಸಲಾಗಿದೆ.

ಈ ಆದೇಶದ ಅನ್ವಯ ಇಂದು ಹುಟ್ಟಿನ ಶಿಶುಗಳು ಅಮೆರಿಕದ ಪೌರರಾಗಲು ಸಾಧ್ಯವಿಲ್ಲ ಎಂದು ವಾಷಿಂಗ್ಟನ್ ಸಹಾಯಕ ಅಟಾರ್ನಿ ಜನರಲ್ ಲಾಲ್ ಪೊಲೊಝೋಲಾ ಅವರು ಅಮೆರಿಕದ ಜಿಲ್ಲಾ ನ್ಯಾಯಾಧೀಶ ಜಾನ್ ಕಫ್ನೌರ್ ಅವರಿಗೆ ವಿಚಾರಣೆ ಆರಂಭದ ವೇಳೆ ಸ್ಪಷ್ಟನೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...