ಇರಾನ್‌ನಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ‌ಡೊನಾಲ್ಡ್ ಟ್ರಂಪ್

Date:

ಇಸ್ರೇಲ್-ಇರಾನ್ ನಡುವಿನ ಸಂಘರ್ಷ ಯುದ್ಧವಾಗಿ ತಿರುವು ಪಡೆದುಕೊಂಡಿದೆ. ಇರಾನ್ ರಾಷ್ಟ್ರದ 3 ಅಣುಸ್ಥಾವರಗಳ ಮೇಲೆ ದಾಳಿ ನಡೆಸಿ ಸಂಘರ್ಷಕ್ಕೆ ಅಧಿಕೃತ ಪ್ರವೇಶ ಪಡೆದಿರುವ ಅಮೆರಿಕ ಇದೀಗ ಇರಾನ್‌ನಲ್ಲಿ ಅಧಿಕಾರ ಬದಲಾವಣೆ ಕುರಿತು ಸುಳಿವು ನೀಡಿದೆ.

- Advertisement -

ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ಇರಾನ್‌ನಲ್ಲಿ ಆಡಳಿತ ಬದಲಾವಣೆ ಮೂಲಕ ಮಧ್ಯಪ್ರಾಚ್ಯದಲ್ಲಿ ಶಾಶ್ವತ ಶಾಂತಿ ನೆಲೆಸುವಂತೆ ಮಾಡುವ ಸಾಧ್ಯತೆ ಕುರಿತು ನಾವು ಚಿಂತಿಸುತ್ತಿದ್ದೇವೆ. ಆಡಳಿತ ಬದಲಾವಣೆ ಎಂಬ ಪದವನ್ನು ಬಳಸುವುದು ರಾಜಕೀಯವಾಗಿ ಸರಿಯಲ್ಲ, ಆದರೆ, ಪ್ರಸ್ತುತ ಆಯತೊಲ್ಲಾ ಅಲಿ ಖಮೇನಿ ಆಡಳಿತ ಇರಾನ್‌ನ್ನು ಮತ್ತೆ ಶ್ರೇಷ್ಠಗೊಳಿಸಲು (Make Iran Great Again-MIGA) ಸಾಧ್ಯವಾಗದಿದ್ದರೆ, ಆಡಳಿತ ಬದಲಾವಣೆ ಬಗ್ಗೆ ಏಕೆ ಚಿಂತಿಸಬಾರದು?” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದೇ ವೇಳೆ ಇರಾನ್ ಮೇಲೆ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್’ ಯಶಸ್ವಿ ಕಾರ್ಯಾಚರಣೆಯ ಬಳಿಕ ಅಮೆರಿಕದ ಬಿ-2 ಯುದ್ಧ ವಿಮಾನಗಳು ಸುರಕ್ಷಿತವಾಗಿ ಮಿಸ್ಸೋರಿಯಲ್ಲಿ ಬಂದಿಳಿವೆ ಎಂದು ಟ್ರಂಪ್ ಮಾಹಿತಿ ನೀಡಿದ್ದಾರೆ.

“ಮತ್ತೊಂದು ಪೋಸ್ಟ್‌ನಲ್ಲಿ ಇರಾನ್ ಮೇಲಿನ ದಾಳಿ ಅತ್ಯಂತ ಕಠಿಣ ಹಾಗೂ ನಿಖರವಾಗಿದ್ದವು. ನಮ್ಮ ಸೇನೆಯ ಸಾಮರ್ಥ್ಯವನ್ನು ತೋರಿಸಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...