ಭಾರತೀಯ ಮಮ್ದಾನಿಗೆ ‘100% ಕಮ್ಯುನಿಸ್ಟ್ ಹುಚ್ಚ’ ಎಂದು ಟೀಕಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

Date:

ನ್ಯೂಯಾರ್ಕ್ ನಗರದ ಡೆಮಾಕ್ರಟಿಕ್ ಮೇಯರ್ ಪ್ರೈಮರಿ ಚುನಾವಣೆಯಲ್ಲಿ ಗೆದ್ದಿರುವ ಡೆಮಾಕ್ರಟಿಕ್ ಸಮಾಜವಾದಿ ಜೊಹ್ರಾನ್ ಮಮ್ದಾನಿ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

- Advertisement -

ಡೊನಾಲ್ಡ್ ಟ್ರಂಪ್ ತಮ್ಮ ಸೋಷಿಯಲ್ ಮೀಡಿಯಾ ವೇದಿಕೆ ಟ್ರೂತ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿ, ಮಮ್ದಾನಿಯನ್ನು “100% ಕಮ್ಯುನಿಸ್ಟ್ ಹುಚ್ಚ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಭಾರತೀಯ ಮೂಲದ ಮುಸ್ಲಿಂ ಮತ್ತು ಎಡಪಂಥೀಯ ಅಭ್ಯರ್ಥಿಯಾದ ಜೋಹ್ರಾನ್ ಮಮ್ದಾನಿ ಅವರು ನ್ಯೂಯಾರ್ಕ್ ನಗರದ ಮೇಯರ್ ಸ್ಥಾನಕ್ಕೆ ನಡೆಯುವ ಅಭ್ಯರ್ಥಿ ಆಯ್ಕೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಅಮೆರಿಕದ ರಾಜಕೀಯದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ.

33 ವರ್ಷದ ಮಮ್ದಾನಿ ಈಗ ನ್ಯೂಯಾರ್ಕ್ ನಗರದ ಮೇಯರ್ ಆಗುವುದು ಖಚಿತ ಎಂದೇ ಹೇಳಲಾಗುತ್ತಿದೆ. ನಿರೀಕ್ಷಿತದಂತೆ ಮೇಯರ್‌ ಸ್ಥಾನಕ್ಕೆ ಮಮ್ದಾನಿ ಆಯ್ಕೆಯಾದರೆ ಈ ಸ್ಥಾನಕ್ಕೆ ಏರಿದ ಮೊದಲ ಭಾರತೀಯ-ಅಮೆರಿಕನ್ ಹಾಗೂ ಮೊದಲ ಮುಸ್ಲಿಂ ಆಗಲಿದ್ದಾರೆ.

ಜೋಹ್ರಾನ್ ಮಮ್ದಾನಿ ಉಗಾಂಡಾದಲ್ಲಿ ಜನಿಸಿದ್ದು ಅವರ ಪೋಷಕರು ಭಾರತೀಯ ಮೂಲದವರು. ಅವರ ತಾಯಿ ಮೀರಾ ನಾಯರ್ ಖ್ಯಾತ ನಿರ್ದೇಶಕಿ. ಅವರು ‘ಸಲಾಮ್ ಬಾಂಬೆ’, ‘ನೇಮ್‌ಸೇಕ್’ ಮತ್ತು ‘ಮಾನ್ಸೂನ್ ವೆಡ್ಡಿಂಗ್’ ನಂತಹ ಚಲನಚಿತ್ರಗಳನ್ನು ನಿರ್ದೇಶಿಸಿದ್ದರು. ಇವು ಭಾರತ ಸೇರಿದಂತೆ ಪ್ರಪಂಚದಾದ್ಯಂತ ಪ್ರಸಿದ್ಧವಾಗಿವೆ. ಅದೇ ಸಮಯದಲ್ಲಿ, ಅವರ ತಂದೆ ಮಹಮೂದ್ ಮಮ್ದಾನಿ ಪ್ರಸಿದ್ಧ ಶಿಕ್ಷಣ ತಜ್ಞರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಳುಗುತ್ತಿರುವ ಬ್ಯಾಂಕಾಕ್: 50 ಜಿಲ್ಲೆಗಳಲ್ಲಿ ‘ವಿಪತ್ತು’ ಘೋಷಣೆ, ಸ್ತಬ್ಧಗೊಂಡ ಜನಜೀವನ

ಸತತ ಮಳೆಯಿಂದಾಗಿ ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ಅಕ್ಷರಶಃ ಜಲಾವೃತಗೊಂಡಿದ್ದು, ನಗರದ ಎಲ್ಲಾ...

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...