ಅಮೆರಿಕಾ| ಮತ್ತೊಬ್ಬ ವ್ಯಕ್ತಿಯಲ್ಲಿ ಹಕ್ಕಿ ಜ್ವರ ಪತ್ತೆ

Date:

ಹಕ್ಕಿ ಜ್ವರ ಆತಂಕ ಹೆಚ್ಚಾಗುತ್ತಿರುವ ನಡುವೆ ಅಮೆರಿಕಾದಲ್ಲಿ ಹಕ್ಕಿ ಜ್ವರದ ಎರಡನೇ ಮಾನವ ಪ್ರಕರಣ ಪತ್ತೆಯಾಗಿರುವುದಾಗಿ ಯುಎಸ್ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಮೊದಲನೆಯ ಪ್ರಕರಣ ದಾಖಲಾದ ಎರಡು ತಿಂಗಳ ಅವಧಿಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

- Advertisement -

ಮೊದಲನೆಯದಾಗಿ ಟೆಕ್ಸಾಸ್‌ನಲ್ಲಿ ಒಬ್ಬರಲ್ಲಿ H5N1 ಎಂಬ ವೈರಸ್ ಸೋಂಕು ಕಂಡು ಬಂದಿದೆ. ಈಗ ಮಿಚಿಗನ್‌ನಲ್ಲಿ ಮತ್ತೊಬ್ಬರಲ್ಲಿ ಈ ವೈರಸ್ ಕಂಡು ಬಂದಿದೆ. ಇಬ್ಬರೂ ಕೂಡಾ ಡೈರಿ ಫಾರ್ಮ್ ಕಾರ್ಮಿಕರು ಆಗಿದ್ದು, ಸಣ್ಣ ಪುಟ್ಟ ರೋಗ ಲಕ್ಷಣಗಳನ್ನು ಹೊಂದಿದ್ದರು. ಈಗ ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಈ ರೋಗದಿಂದ ಸಾಮಾನ್ಯ ಜನರಿಗೆ ಅಪಾಯ ಪ್ರಮಾಣ ‘ಕಡಿಮೆ’ ಎಂದು ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಹೇಳಿದೆ. ಆದರೆ ಇನ್ನಷ್ಟು ಪ್ರಕರಣಗಳು ದಾಖಲಾಗುವ ಸಾಧ್ಯತೆಯಿದೆ ಎಂದು ಕೂಡಾ ಹೇಳಿದೆ.

ಇದನ್ನು ಓದಿದ್ದೀರಾ? ನಿಫಾ ವೈರಸ್‌ ಆತಂಕ; ರೋಗ ಲಕ್ಷಣ, ತಡೆಗಟ್ಟುವ ವಿಧಾನದ ಮಾಹಿತಿ

“ಸೋಂಕಿತ ಹಸುಗಳಿಂದ ಬರುವ ಹಸಿ ಹಾಲಿನಲ್ಲಿ ವೈರಸ್‌ ಅಧಿಕವಾಗಿರುತ್ತದೆ. ಡೈರಿ ಹಸುಗಳಲ್ಲಿ ಈ ವೈರಸ್ ಹರಡುವಿಕೆಯ ಪ್ರಮಾಣವನ್ನು ಗಮನಿಸಿದರೆ, ಇದೇ ರೀತಿಯಾಗಿ ಹೆಚ್ಚಾಗಿ ಹಕ್ಕಿ ಜ್ವರ ಮಾನವ ಪ್ರಕರಣಗಳು ದಾಖಲಾಗುವ ಸಾಧ್ಯತೆಯಿದೆ” ಎಂದು ಸಿಡಿಸಿ ತಿಳಿಸಿದೆ.

ಮಿಚಿಗನ್‌ನಲ್ಲಿ ಡೈರಿ ಫಾರ್ಮ್‌ನಲ್ಲಿ ಕೆಲಸ ಮಾಡುವ ವ್ಯಕ್ತಿಯಲ್ಲಿ ಹಕ್ಕಿ ಜ್ವರ ಕಂಡು ಬಂದಿದೆ. ಅಲ್ಲಿ ಹಸುಗಳಲ್ಲಿ H5N1 ವೈರಸ್ ಕಂಡು ಬಂದಿದೆ. ವ್ಯಕ್ತಿಯ ಒಂದು ಮೂಗಿನಿಂದ ಮತ್ತು ಇನ್ನೊಂದು ಕಣ್ಣಿನಿಂದ ಎರಡು ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷಿಸಲಾಗಿದೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2026ರ ನೊಬೆಲ್ ಸಾಹಿತ್ಯ ಪ್ರಶಸ್ತಿ: ಕೆನಡಾದ ಖ್ಯಾತ ಕವಯಿತ್ರಿ ‘ಆನ್ ಕಾರ್ಸನ್’ ಮುಡಿಗೇರಿದ ಗರಿ

ಸಾಹಿತ್ಯ ಲೋಕದ ಅತ್ಯಂತ ಪ್ರತಿಷ್ಠಿತ ಗೌರವವಾದ 2026ನೇ ಸಾಲಿನ 'ನೊಬೆಲ್ ಸಾಹಿತ್ಯ...

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...