ವೆನೆಜುವೆಲಾ ಬೆಳವಣಿಗೆಗಳ ಬಗ್ಗೆ ಭಾರತ ತೀವ್ರ ಕಳವಳ; ಶಾಂತಿ ಸ್ಥಾಪನೆಗೆ ಜೈಶಂಕರ್ ಆಗ್ರಹ

Date:

ವೆನೆಜುವೆಲಾದಲ್ಲಿ ಅಮೆರಿಕ ನಡೆಸಿದ ಮಿಲಿಟರಿ ಕಾರ್ಯಾಚರಣೆ ಮತ್ತು ಅಧ್ಯಕ್ಷ ನಿಕೋಲಸ್ ಮಡುರೊ ಅವರ ಬಂಧನದ ನಂತರ ಉಂಟಾಗಿರುವ ಬಿಕ್ಕಟ್ಟಿನ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಅಲ್ಲಿನ ಜನರ ಸುರಕ್ಷತೆಯೇ ನಮ್ಮ ಪ್ರಮುಖ ಆದ್ಯತೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಪ್ರತಿಪಾದಿಸಿದ್ದಾರೆ.

- Advertisement -

​ಮಂಗಳವಾರ ಲಕ್ಸೆಂಬರ್ಗ್‌ನಲ್ಲಿ ಮಾತನಾಡಿದ ಅವರು, ಬಿಕ್ಕಟ್ಟಿನಲ್ಲಿ ಭಾಗಿಯಾಗಿರುವ ಎಲ್ಲ ಪಕ್ಷಗಳು ಒಂದೆಡೆ ಕುಳಿತು ಮಾತುಕತೆ ನಡೆಸುವ ಮೂಲಕ ಶಾಂತಿ ಸ್ಥಾಪಿಸಬೇಕು. ವೆನೆಜುವೆಲಾ ಜನರ ಹಿತಾಸಕ್ತಿಯನ್ನು ಕಾಪಾಡುವಂತಹ ನಿರ್ಧಾರಕ್ಕೆ ಬರಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

​”ವೆನೆಜುವೆಲಾದಲ್ಲಿನ ಬೆಳವಣಿಗೆಗಳ ಬಗ್ಗೆ ನಾವು ಈಗಾಗಲೇ ಹೇಳಿಕೆ ನೀಡಿದ್ದೇವೆ. ಅಲ್ಲಿ ನಡೆಯುತ್ತಿರುವ ಘಟನೆಗಳು ಸಹಜವಾಗಿಯೇ ಕಳವಳಕಾರಿಯಾಗಿವೆ. ಅಂತಿಮವಾಗಿ ಜನರ ಸುರಕ್ಷತೆ ಮುಖ್ಯವಾಗಿದ್ದು, ಸಂಬಂಧಪಟ್ಟವರು ಮಾತುಕತೆಯ ಮೂಲಕ ಶಾಂತಿಯುತ ಪರಿಹಾರ ಕಂಡುಕೊಳ್ಳಬೇಕು,” ಎಂದು ಜೈಶಂಕರ್ ತಿಳಿಸಿದರು.

​ವೆನೆಜುವೆಲಾ ಜತೆ ಭಾರತ ಹಲವು ವರ್ಷಗಳಿಂದ ಉತ್ತಮ ಬಾಂಧವ್ಯ ಹೊಂದಿದೆ ಎಂದು ಸ್ಮರಿಸಿದ ಅವರು, “ಘಟನೆಗಳು ಯಾವುದೇ ತಿರುವು ಪಡೆದರೂ, ಅಲ್ಲಿನ ಜನರು ಸಂಕಷ್ಟದಿಂದ ಪಾರಾಗಬೇಕು ಎಂಬುದೇ ನಮ್ಮ ಬಯಕೆ,” ಎಂದು ಸ್ಪಷ್ಟಪಡಿಸಿದರು.

ಇದನ್ನು ಓದಿದ್ದೀರಾ? ವೆನೆಜುವೆಲಾ ಸಾರ್ವಭೌಮತೆಯ ಮೇಲೆ ಅಮೆರಿಕದ ‘ದರೋಡೆಕೋರ’ ದಾಳಿ: ಪ್ರಜಾಪ್ರಭುತ್ವದ ಮುಖವಾಡದಲ್ಲಿ ಸಂಪನ್ಮೂಲಗಳ ಲೂಟಿ

ಶನಿವಾರವಷ್ಟೇ ವೆನೆಜುವೆಲಾ ರಾಜಧಾನಿ ಕ್ಯಾರಕಾಸ್‌ನಲ್ಲಿ ಅಮೆರಿಕದ ಗುಪ್ತಚರ ಸಂಸ್ಥೆಗಳು ಮತ್ತು ಕಾನೂನು ಜಾರಿ ಏಜೆನ್ಸಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ಸೆರೆಹಿಡಿದು ದೇಶದಿಂದ ಹೊರಗೆ ಕರೆದೊಯ್ಯಲಾಗಿತ್ತು. ಈ ಹಠಾತ್ ಬೆಳವಣಿಗೆಯಿಂದಾಗಿ ಆ ದೇಶದಲ್ಲಿ ರಾಜಕೀಯ ಅಸ್ಥಿರತೆ ಮತ್ತು ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

​ಈ ಬೆಳವಣಿಗೆಯ ಬೆನ್ನಲ್ಲೇ ಹೇಳಿಕೆ ಬಿಡುಗಡೆ ಮಾಡಿರುವ ಭಾರತದ ವಿದೇಶಾಂಗ ಸಚಿವಾಲಯ, “ವೆನೆಜುವೆಲಾದಲ್ಲಿನ ಇತ್ತೀಚಿನ ಬೆಳವಣಿಗೆಗಳು ತೀವ್ರ ಕಳವಳಕಾರಿ ವಿಷಯವಾಗಿದೆ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ,” ಎಂದು ತಿಳಿಸಿದೆ.

​ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲ ಪಕ್ಷಗಳು ಮಾತುಕತೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಭಾರತ ಕರೆ ನೀಡಿದೆ. ಅಲ್ಲದೆ, ಕ್ಯಾರಕಾಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಅಲ್ಲಿರುವ ಭಾರತೀಯ ಸಮುದಾಯದೊಂದಿಗೆ ಸಂಪರ್ಕದಲ್ಲಿದ್ದು, ಅಗತ್ಯವಿರುವ ಎಲ್ಲ ನೆರವು ನೀಡಲಿದೆ ಎಂದು ಸಚಿವಾಲಯ ಭರವಸೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...