ಭಾರತ, ಚೀನಾದ ಮೇಲೆ ಶೇ.500 ರಷ್ಟು ಸುಂಕ ವಿಧಿಸಬಹುದಾದ ಮಸೂದೆಗೆ ಟ್ರಂಪ್‌ ಒಪ್ಪಿಗೆ?

Date:

ರಷ್ಯಾದ ತೈಲ ಮತ್ತು ಇಂಧನ ಉತ್ಪನ್ನಗಳನ್ನು ಖರೀದಿಸುವ ಚೀನಾ ಮತ್ತು ಭಾರತದಂತಹ ದೇಶಗಳ ಮೇಲೆ ಶೇ 500ರಷ್ಟು ಸುಂಕ ವಿಧಿಸಬಹುದಾದ ಸೆನೆಟ್ ಮಸೂದೆಗೆ ಅಮೆರಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನುಮೋದನೆ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿದೆ.

- Advertisement -

ರಷ್ಯಾ ವಿರುದ್ಧ ಕಠಿಣ ನಿರ್ಬಂಧಗಳ ಮಸೂದೆಯನ್ನು ಮತಕ್ಕಾಗಿ ಸೆನೆಟ್ ಮುಂದಿಡಬೇಕು ಎಂದು ಟ್ರಂಪ್ ನನಗೆ ಹೇಳಿದ್ದಾರೆ ಎಂದು ಅಮೆರಿಕದ ಸೆನೆಟರ್ ಲಿಂಡ್ಡೆ ಗ್ರಹಾಂ ಎಬಿಸಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಟ್ರಂಪ್‌ ಅವರ ಈ ನಿರ್ಧಾರವನ್ನು ಒಂದು ದೊಡ್ಡ ಪ್ರಗತಿ ಎಂದು ಕರೆದಿರುವ ಅವರು, ಇದು ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಉಕ್ರೇನ್ ವಿರುದ್ಧದ ಯುದ್ಧದ ಕುರಿತು ಮಾತುಕತೆಗೆ ಒತ್ತಾಯಪೂರ್ವಕವಾಗಿ ಕರೆತರುವ ಪ್ರಯತ್ನಗಳ ಭಾಗವಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪತ್ರಿಕಾ ದಿನಾಚರಣೆ: ಅತಿರೇಕ ಅಳಿಯುತ್ತದೆ, ಒಳಿತು ಉಳಿಯುತ್ತದೆ

‘ಈ ಮಸೂದೆಯ ಪರಿಣಾಮ ಹೇಗಿರುತ್ತದೆ ಎಂದರೆ ನೀವು ರಷ್ಯಾದಿಂದ ಉತ್ಪನ್ನಗಳನ್ನು ಖರೀದಿಸುತ್ತಿದ್ದರೆ, ಉಕ್ರೇನ್‌ಗೆ ನೆರವು ನೀಡದೇ ಇದ್ದರೆ, ಅಮೆರಿಕವು ನಿಮ್ಮ ದೇಶದಿಂದ ಆಮದಾಗುವ ಉತ್ಪನ್ನಗಳ ಮೇಲೆ ಶೇ.500ರಷ್ಟು ಸುಂಕ ವಿಧಿಸುತ್ತದೆ. ಭಾರತ ಮತ್ತು ಚೀನಾ ರಷ್ಯಾದಿಂದ ಶೇ 70ರಷ್ಟು ತೈಲ ಖರೀದಿಸುತ್ತವೆ’ ಎಂದು ಗ್ರಹಾಂ ಹೇಳಿದ್ದಾರೆ.

ಆ ಮಸೂದೆ ಅಮೆರಿಕ ಸಂಸತ್ತಿನಲ್ಲಿ ಅಂಗೀಕಾರ ಪಡೆದು ಕಾನೂನಾಗಿ ಜಾರಿ ಮಾಡಲು ಸಹಿ ಮಾಡಬೇಕೇ ಅಥವಾ ಬೇಡವೇ ಎಂಬುದನ್ನು ಟ್ರಂಪ್ ನಿರ್ಧರಿಸಬಹುದು ಎಂದು ಅವರು ಒತ್ತಿ ಹೇಳಿದ್ದಾರೆ.

ವರದಿಗಳ ಪ್ರಕಾರ ಭಾರತವು ಮೇ 2025 ರಲ್ಲಿ ರಷ್ಯಾದಿಂದ ಪಳೆಯುಳಿಕೆ ಇಂಧವನ್ನು ಖರೀದಿಸುತ್ತಿರುವ 2ನೇ ಅತೀ ದೊಡ್ಡ ರಾಷ್ಟ್ರವಾಗಿದೆ. ಭಾರತವು ಈ ತಿಂಗಳಲ್ಲಿ ಅಂದಾಜು 38 ಸಾವಿರ ಕೋಟಿ ರೂ. ಕೋಟಿ ಮೌಲ್ಯದ ಪಳೆಯುಳಿಕೆ ಇಂಧನವನ್ನು ರಷ್ಯಾದಿಂದ ಖರೀದಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...