ವೆನೆಜುವೆಲಾ ಚುನಾವಣೆ | ಫಲಿತಾಂಶದ ವಿರುದ್ಧ ವಿಪಕ್ಷಗಳ ಪ್ರತಿಭಟನೆ – ಅಮೆರಿಕ ಕುಮ್ಮಕ್ಕು?

Date:

ವೆನೆಜುವೆಲಾದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಚುನಾವಣೆಯ ಫಲಿತಾಂಶ ಜುಲೈ 28ರಂದು ಹೊರಬಿದಿದ್ದು, ನಿಕೋಲಸ್ ಮಡುರೊ ಮೂರನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಆದರೆ, ಚುನಾವಣಾ ಫಲಿತಾಂಶಗಳ ವಿರುದ್ಧ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾಡೊ ನೇತೃತ್ವದಲ್ಲಿ ವಿಪಕ್ಷಗಳು ವೆನೆಜುವೆಲಾ ರಾಜಧಾನಿ ಕ್ಯಾರಕಾಸ್‌ನಲ್ಲಿ ಪ್ರತಿಭಟನೆ ನಡೆಸುತ್ತಿವೆ.

- Advertisement -

ಕಳೆದ ಭಾನುವಾರ ಪ್ರಕಟವಾದ ಫಲಿತಾಂಶದಲ್ಲಿ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ವಿಜೇತ ಎಂದು ಘೋಷಿಸಲಾಗಿದೆ. ಸೋಮವಾರ ಅವರು ವಿರೋಧ ಪಕ್ಷದ ಅಭ್ಯರ್ಥಿ ಎಡ್ಮಂಡೊ ಗೊನ್ಜಾಲೆಜ್‌ ವಿರುದ್ಧ 51% ಮತ ಪಡೆದಿದ್ದಾರೆ ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಆದರೆ, ಫಲಿತಾಂಶಕ್ಕೆ ವಿರೋಧ ವ್ಯಕ್ತಪಡಿಸಿರುವ ವಿಪಕ್ಷಗಳು ಅಧ್ಯಕ್ಷೀಯ ಚುನಾವಣೆಯಲ್ಲಿ ಮಾರಿಯಾ ಅವರು ಭಾರೀ ಬಹುಮತದಿಂದ ಗೆದ್ದಿದ್ದಾರೆ. ಆದರೆ, ಫಲಿತಾಂಶಗಳನ್ನು ತಿರುಚಲಾಗಿದೆ. ಫಲಿತಾಂಶದಲ್ಲಿ ವಂಚನೆಯ ನಡೆದಿದೆ ಎಂದು ವಿಪಕ್ಷಗಳು ಆರೋಪಿಸಿವೆ. ಪ್ರತಿಭಟನೆ ನಡೆಸುತ್ತಿವೆ.

ಅಂದಹಾಗೆ, ಅತ್ಯಂತ ಪಾರದರ್ಶಕ ಚುನಾವಣೆ ನಡೆಯುವ ರಾಷ್ಟ್ರವೆಂಬ ಹೆಗ್ಗಳಿಕೆ ಪಡೆದಿರುವ ವೆನೆಜುವೆಲಾ ಇತ್ತೀಚಿನ ದಿನಗಳಲ್ಲಿ ರಾಜಕೀಯ ಬಿಕ್ಕಟ್ಟುಗಳಿಗೆ ಗುರಿಯಾಗಿದೆ. ವೆನೆಜುವೆಲಾ ರಾಜಕೀಯದ ಮೇಲೆ ಅಮೆರಿಕ ಮತ್ತು ಪಾಶ್ಚಿಮಾತ್ಯ ರಾಷ್ಟ್ರಗಳ ಪ್ರಭಾವ ಹೆಚ್ಚುತ್ತಿದೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ, 2018ರ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಮಡುರೊ ಅವರನ್ನು ಅಧಿಕಾರದಿಂದ ಕಳೆಗಿಳಿಯುವಂತೆ 2019ರ ಜನವರಿಯಲ್ಲಿ ಅಮೆರಿಕಾ ಒತ್ತಡ ಹೇರಿತ್ತು. ಮಾತ್ರವಲ್ಲದೆ, ಚುನಾವಣೆ ಸ್ಪರ್ಧಿಸದೇ ಇದ್ದ ವ್ಯಕ್ತಿಯನ್ನು ಅಧ್ಯಕ್ಷನೆಂದು ಘೋಷಿಸಲಾಗಿತ್ತು. ಈ ಎಲ್ಲ ಬಿಕ್ಕಟ್ಟುಗಳನ್ನು ನಿಭಾಯಿಸಿದ ಮಡುರೊ 2019ರ ಜನವರಿ 10ರಂದು ಪ್ರಮಾಣ ವಚನ ಸ್ವೀಕರಿಸಿ, ಆಡಳಿತ ಮುಂದುವರೆಸಿದ್ದರು. ಇದೀಗ, ಅಂತದ್ದೇ ಪರಿಸ್ಥಿತಿಯನ್ನು ಸೃಷ್ಠಿಸಲು ಅಮೆರಿಕಾ ಯತ್ನಸುತ್ತಿದೆ ಎಂದು ಆರೋಪಿಸಲಾಗಿದೆ.

 ಇಡೀ ಪ್ರಪಂಚದಲ್ಲಿಯೇ ಹೆಚ್ಚು ಕಚ್ಚಾ ತೈಲ ಹೊಂದಿರುವ ರಾಷ್ಟ್ರ ವೆನೆಜುವೆಲಾ. ಹೀಗಾಗಿ, ಅಲ್ಲಿನ ಅಧ್ಯಕ್ಷ ಮಡುರೊ ಅವರನ್ನು ಅಧಿಕಾರದಿಂದ ಕೆಳಗಿಳಿಸಿ, ತಮಗೆ ಬೇಕಾದವರನ್ನು ಅಧಿಕಾರಕ್ಕೇರಿಸಿ, ಅಲ್ಲಿನ ಕಚ್ಚಾ ತೈಲ ಸಂಪತ್ತನ್ನು ದೋಚುವ ಉದ್ದೇಶದಿಂದ ಅಮೆರಿಕ ಅಲ್ಲಿನ ವಿಪಕ್ಷಗಳಿಗೆ ಕುಮ್ಮಕ್ಕು ನೀಡುತ್ತಿದೆ. ಚುನಾವಣಾ ಫಲಿತಾಂಶವನ್ನೇ ಬುಡಮೇಲು ಮಾಡಲು ಅಮೆರಿಕ ಮತ್ತು ಪಾಶ್ಚಿಮಾತ್ಯ ರಾಷ್ಟ್ರಗಳು ಯತ್ನಿಸುತ್ತಿವೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...

ಗಾಜಾ ನರಮೇಧ : ಪ್ಯಾಲೆಸ್ತೀನಿಯನ್ ಪಟ್ಟಣಗಳ ನಾಶವನ್ನು ತೋರಿಸುವ ಉಪಗ್ರಹಚಿತ್ರಗಳು

ಜೆರುಸಲೇಮ್: ಕಳೆದ ವರ್ಷ ಇಸ್ರೇಲ್–ಹಮಾಸ್ ಕದನ ವಿರಾಮ ಒಪ್ಪಂದ ಜಾರಿಯಾದ ಬಳಿಕವೂ...

ಅಮೆಜಾನ್‌ನಲ್ಲಿ ಮತ್ತೆ ಉದ್ಯೋಗ ಕಡಿತ ; ಭಾರತದ ಉದ್ಯೋಗಿಗಳಿಗೂ ತಟ್ಟಿದ ಪರಿಣಾಮ

ದೆಹಲಿ/ವಾಷಿಂಗ್ಟನ್‌ ಡಿಸಿ : ಇ-ಕಾಮರ್ಸ್ ದೈತ್ಯ ಅಮೆಜಾನ್ ಮತ್ತೊಮ್ಮೆ ಉದ್ಯೋಗ ಕಡಿತದ...