ವೆನೆಜುವೆಲಾ ಮೇಲೆ ಅಮೆರಿಕ ದಾಳಿ: ಅಧ್ಯಕ್ಷ ಮಡುರೊ ದಂಪತಿ ಸೆರೆ; ಡೊನಾಲ್ಡ್ ಟ್ರಂಪ್ ಘೋಷಣೆ

Date:

ದಕ್ಷಿಣ ಅಮೆರಿಕದ ರಾಷ್ಟ್ರವಾದ ವೆನೆಜುವೆಲಾ ಮೇಲೆ ನಸುಕಿನ ಜಾವ ಅಮೆರಿಕ ಸೇನೆ ಬೃಹತ್ ಪ್ರಮಾಣದ ದಾಳಿ ನಡೆಸಿದೆ. ಈ ಕಾರ್ಯಾಚರಣೆಯಲ್ಲಿ ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮದುರೊ ಹಾಗೂ ಅವರ ಪತ್ನಿಯನ್ನು ಸೆರೆಹಿಡಿದು, ದೇಶದಿಂದ ಹೊರಗೆ ಕರೆದೊಯ್ಯಲಾಗಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

- Advertisement -

​ಈ ಕುರಿತು ‘ಟ್ರೂತ್ ಸೋಶಿಯಲ್’ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಟ್ರಂಪ್, “ಅಮೆರಿಕ ಸಂಯುಕ್ತ ಸಂಸ್ಥಾನವು ವೆನೆಜುವೆಲಾ ಹಾಗೂ ಅದರ ನಾಯಕನ ವಿರುದ್ಧ ಬೃಹತ್ ಪ್ರಮಾಣದ ದಾಳಿಯನ್ನು ಯಶಸ್ವಿಯಾಗಿ ನಡೆಸಿದೆ. ಅಧ್ಯಕ್ಷ ನಿಕೋಲಸ್ ಮದುರೊ ಮತ್ತು ಅವರ ಪತ್ನಿಯನ್ನು ಬಂಧಿಸಿ ದೇಶದಿಂದ ಸ್ಥಳಾಂತರಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

​ಮದುರೊ ಅವರು ಅಧಿಕಾರದಿಂದ ಕೆಳಗಿಳಿಯುವಂತೆ ಒತ್ತಡ ಹೇರಲು ಅಮೆರಿಕ ಹಲವು ತಿಂಗಳುಗಳಿಂದ ಪ್ರಯತ್ನಿಸುತ್ತಿತ್ತು. ಜೊತೆಗೆ ವಲಯದಲ್ಲಿ ತನ್ನ ಮಿಲಿಟರಿ ಉಪಸ್ಥಿತಿಯನ್ನು ಹೆಚ್ಚಿಸಿತ್ತು. ಇದರ ಬೆನ್ನಲ್ಲೇ ಈ ಹಠಾತ್ ಬೆಳವಣಿಗೆ ನಡೆದಿದೆ.
​
ಬೆಚ್ಚಿಬಿದ್ದ ರಾಜಧಾನಿ

ಶನಿವಾರ ಬೆಳಗಿನ ಜಾವ 2 ಗಂಟೆಯ ಸುಮಾರಿಗೆ (ಸ್ಥಳೀಯ ಕಾಲಮಾನ) ರಾಜಧಾನಿ ಕಾರಾಕಸ್‌ನಲ್ಲಿ ಭಾರೀ ಸ್ಫೋಟದ ಸದ್ದುಗಳು ಕೇಳಿಸಿವೆ. ಆಕಾಶದಲ್ಲಿ ಯುದ್ಧ ವಿಮಾನಗಳ ಹಾರಾಟ ಮತ್ತು ದಟ್ಟ ಹೊಗೆ ಆವರಿಸಿದ್ದನ್ನು ಕಂಡು ಜನರು ಭಯಭೀತರಾಗಿದ್ದಾರೆ. ಪ್ರಮುಖ ಸೇನಾ ನೆಲೆಯ ಸಮೀಪವಿರುವ ನಗರದ ದಕ್ಷಿಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸ್ಫೋಟದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾದಕ ವಸ್ತು ಉತ್ಪಾದನೆಗಿಳಿದ ಹೊರರಾಜ್ಯ ಮಾಫಿಯಾ ಗ್ಯಾಂಗ್‌; ಕರ್ನಾಟಕದ ಕಳಂಕ!
​
ಸ್ಫೋಟದ ವರದಿಗಳು ಬರುತ್ತಿದ್ದಂತೆಯೇ ವೆನೆಜುವೆಲಾದಲ್ಲಿರುವ ಅಮೆರಿಕ ರಾಯಭಾರ ಕಚೇರಿಯು ಎಚ್ಚರಿಕೆ ನೀಡಿದ್ದು, ಜನರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಸೂಚಿಸಿದೆ.
​
ಇರಾನ್ ಖಂಡನೆ

ಅಮೆರಿಕದ ಈ ನಡೆಯನ್ನು ಇರಾನ್ ವಿದೇಶಾಂಗ ಸಚಿವಾಲಯ ತೀವ್ರವಾಗಿ ಖಂಡಿಸಿದ್ದು, “ಇದು ವೆನೆಜುವೆಲಾದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ಮೇಲಿನ ಅಮೆರಿಕದ ಮಿಲಿಟರಿ ದಾಳಿ” ಎಂದು ಕಿಡಿಕಾರಿದೆ. ಸದ್ಯದ ಮಟ್ಟಿಗೆ ವೆನೆಜುವೆಲಾದ ವಿರೋಧ ಪಕ್ಷಗಳು ಈ ಘಟನೆಯ ಬಗ್ಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನವ-ಉದಾರವಾದದ ಬಿಕ್ಕಟ್ಟು ಮತ್ತು ಫ್ಯಾಸಿಸ್ಟ್-ವಿರೋಧಿ ಅರ್ಥಶಾಸ್ತ್ರ: ಡಾ. ಇಸಬೆಲ್ಲಾ ವೆಬರ್ ಒಳನೋಟಗಳು

ಪ್ರಸ್ತುತ ಜಗತ್ತನ್ನು ಕಾಡುತ್ತಿರುವ ಬೆಲೆ ಏರಿಕೆ, ಆರ್ಥಿಕ ಅಸಮಾನತೆ ಮತ್ತು ಅದರಿಂದಾಗಿ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ; ವಿಕೃತ ಕಾಮುಕನ ಸಾವಿನ ರಹಸ್ಯವೇನು?

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ...

ಹೆಬ್ಬಂಡೆಯೊಳಗೊಂದು ಡೈನೋಸಾರ್ ಕೌತುಕ: 7.5 ಕೋಟಿ ವರ್ಷ ಹಳೆಯ ಪಳೆಯುಳಿಕೆ ಪತ್ತೆ!

ಆ ಡೈನೋಸಾರ್ ಬದುಕಿದ್ದು 750 ಲಕ್ಷ ವರ್ಷಗಳ ಹಿಂದೆ. ಮಾನವ ಪ್ರಭೇದದ...

ಷೇರುದಾರರ ಇಂದಿನ ಜಾಗತಿಕ ಮಂತ್ರ- ‘ಅಮೆರಿಕವನ್ನು ನಂಬಿ ಹಣ ಹೂಡಿ’

ಅಮೆರಿಕನ್ನರು ಮಾತ್ರವಲ್ಲ, ವಿದೇಶಗಳ ಸಾಮಾನ್ಯ ಜನರೂ ಮುಗಿಬಿದ್ದು ಅಮೆರಿಕದ ಷೇರುಗಳನ್ನು ಕೊಳ್ಳುತ್ತಿದ್ದಾರೆ....