ವೆನೆಜುವೆಲಾ ಮೇಲೆ ಅಮೆರಿಕ ವಾಯುದಾಳಿ; ಬೀದಿಗಿಳಿದು ಪ್ರತಿಭಟಿಸಿ ಎಂದ ವೆನೆಜುವೆಲಾ ಅಧ್ಯಕ್ಷ

Date:

ದಕ್ಷಿಣ ಅಮೆರಿಕದ ರಾಷ್ಟ್ರ ವೆನೆಜುವೆಲಾದ ರಾಜಧಾನಿ ಕಾರಕಾಸ್‌ ಮೇಲೆ ಅಮೆರಿಕದ ಸೇನಾಪಡೆಗಳು ಇಂದು ನುಸುಕಿನ ಜಾವ ಕ್ಷಿಪಣಿ ಮತ್ತು ವಾಯುದಾಳಿ ನಡೆಸಿವೆ. ಅಮೆರಿಕದ ಈ ‘ಗಂಭೀರ ಮಿಲಿಟರಿ ಆಕ್ರಮಣ’ದ ಬೆನ್ನಲ್ಲೇ ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮದುರೊ ದೇಶದಲ್ಲಿ ‘ರಾಷ್ಟ್ರೀಯ ತುರ್ತು ಪರಿಸ್ಥಿತಿ’ ಘೋಷಿಸಿದ್ದಾರೆ.

- Advertisement -

​ಶನಿವಾರ ನಸುಕಿನ 2 ಗಂಟೆಯ ಸುಮಾರಿಗೆ (ಸ್ಥಳೀಯ ಕಾಲಮಾನ) ರಾಜಧಾನಿ ಕಾರಕಾಸ್‌ನಲ್ಲಿ ಯುದ್ಧ ವಿಮಾನಗಳು ಹಾರಾಟ ನಡೆಸಿದ ಶಬ್ದದೊಂದಿಗೆ ಕನಿಷ್ಠ ಏಳು ಭಾರಿ ಸ್ಫೋಟಗಳು ಸಂಭವಿಸಿವೆ ಎಂದು ಅಂತಾರಾಷ್ಟ್ರೀಯ ಸುದ್ದಿಸಂಸ್ಥೆಗಳು ವರದಿ ಮಾಡಿವೆ. ನಾಗರಿಕ ಮತ್ತು ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ವೆನೆಜುವೆಲಾ ಸರ್ಕಾರ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಸ್ಫೋಟಗಳ ಬಗ್ಗೆ ಶ್ವೇತಭವನ ಅಥವಾ ಪೆಂಟಗನ್ ತಕ್ಷಣಕ್ಕೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ, ಅಮೆರಿಕದ ಪ್ರಮುಖ ಮಾಧ್ಯಮಗಳಾದ ‘ಸಿಬಿಎಸ್ ನ್ಯೂಸ್’ ಮತ್ತು ‘ಫಾಕ್ಸ್ ನ್ಯೂಸ್’ ವರದಿಗಳ ಪ್ರಕಾರ, ಟ್ರಂಪ್ ಆಡಳಿತದ ಅಧಿಕಾರಿಗಳು ಅಮೆರಿಕದ ಸೇನೆ ಈ ದಾಳಿಯಲ್ಲಿ ಭಾಗಿಯಾಗಿರುವುದನ್ನು ಖಚಿತಪಡಿಸಿದ್ದಾರೆ.

ದಾಳಿಗೂ ಮುನ್ನವೇ, ‘ಮುಂದುವರಿದಿರುವ ಮಿಲಿಟರಿ ಚಟುವಟಿಕೆ’ಗಳ ಕಾರಣವನ್ನು ನೀಡಿ ಅಮೆರಿಕದ ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ (ಎಫ್‌ಎಎ), ವೆನೆಜುವೆಲಾ ಮತ್ತು ಕ್ಯುರಾಕೊ ದ್ವೀಪದ ವಾಯುಪ್ರದೇಶದಲ್ಲಿ ಅಮೆರಿಕದ ವಾಣಿಜ್ಯ ಮತ್ತು ಖಾಸಗಿ ವಿಮಾನಗಳ ಹಾರಾಟವನ್ನು ನಿಷೇಧಿಸಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾದಕ ವಸ್ತು ಉತ್ಪಾದನೆಗಿಳಿದ ಹೊರರಾಜ್ಯ ಮಾಫಿಯಾ ಗ್ಯಾಂಗ್‌; ಕರ್ನಾಟಕದ ಕಳಂಕ!

​‘ಬೀದಿಗಿಳಿಯಿರಿ’: ಮದುರೊ ಕರೆ

ದಾಳಿಯನ್ನು ‘ಸಾಮ್ರಾಜ್ಯಶಾಹಿ ಆಕ್ರಮಣ’ ಎಂದು ಕರೆದಿರುವ ಮದುರೊ ಸರ್ಕಾರ, ದೇಶದ ಸಾರ್ವಭೌಮತೆಯನ್ನು ರಕ್ಷಿಸಲು ಜನರನ್ನು ಬೀದಿಗಿಳಿದು ಪ್ರತಿಭಟಿಸುವಂತೆ ಕರೆ ನೀಡಿದೆ. “ನಮ್ಮ ನೆಲ ಮತ್ತು ಜನರ ವಿರುದ್ಧ ಅಮೆರಿಕ ಸರ್ಕಾರ ನಡೆಸಿದ ಈ ಹೇಯ ಕೃತ್ಯವನ್ನು ನಾವು ಖಂಡಿಸುತ್ತೇವೆ. ರಾಷ್ಟ್ರೀಯ ರಕ್ಷಣಾ ಯೋಜನೆಗಳನ್ನು ಜಾರಿಗೊಳಿಸಲು ಆದೇಶಿಸಲಾಗಿದೆ,” ಎಂದು ವೆನೆಜುವೆಲಾ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಕಾರಣವೇನು?

ಅಮೆರಿಕವು ಕಳೆದ ಕೆಲವು ತಿಂಗಳುಗಳಿಂದ ಕೆರಿಬಿಯನ್ ಸಮುದ್ರದಲ್ಲಿ ತನ್ನ ಸೇನಾ ಜಮಾವಣೆಯನ್ನು ಹೆಚ್ಚಿಸಿತ್ತು. ಮಾದಕ ದ್ರವ್ಯ ಕಳ್ಳಸಾಗಣೆ (ನಾರ್ಕೋ-ಟೆರರಿಸಂ) ಆರೋಪದಡಿ ಅಧ್ಯಕ್ಷ ನಿಕೋಲಸ್ ಮದುರೊ ಅವರನ್ನು ಅಮೆರಿಕ ಗುರಿಯಾಗಿಸಿಕೊಂಡಿದೆ. ಕಳೆದ ವಾರವಷ್ಟೇ ವೆನೆಜುವೆಲಾದ ಡಾಕಿಂಗ್ ಪ್ರದೇಶವೊಂದರ ಮೇಲೆ ಸಿಐಎ (CIA) ಡ್ರೋನ್ ದಾಳಿ ನಡೆಸಿತ್ತು. ವೆನೆಜುವೆಲಾದಲ್ಲಿರುವ ಬೃಹತ್ ತೈಲ ನಿಕ್ಷೇಪಗಳ ಮೇಲೆ ಹಿಡಿತ ಸಾಧಿಸಲು ಮತ್ತು ಸರ್ಕಾರವನ್ನು ಬದಲಾಯಿಸಲು ಅಮೆರಿಕ ಈ ಸಂಚು ರೂಪಿಸಿದೆ ಎಂದು ಮದುರೊ ಗುರುವಾರವಷ್ಟೇ ಆರೋಪಿಸಿದ್ದರು.

​ನೆರೆ ರಾಷ್ಟ್ರದ ಖಂಡನೆ

ವೆನೆಜುವೆಲಾ ಮೇಲಿನ ಅಮೆರಿಕದ ದಾಳಿಯನ್ನು ನೆರೆಯ ಕೊಲಂಬಿಯಾ ಅಧ್ಯಕ್ಷ ಗುಸ್ತಾವೊ ಪೆಟ್ರೋ ತೀವ್ರವಾಗಿ ಖಂಡಿಸಿದ್ದಾರೆ. ಇದೇ ವೇಳೆ, ವೆನೆಜುವೆಲಾದ ವಿರೋಧ ಪಕ್ಷಗಳು ದಾಳಿಯ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
​
“ಇಡೀ ನೆಲವೇ ಅದುರಿದಂತಾಯಿತು. ಇದು ಭಯಾನಕವಾಗಿತ್ತು. ನಾವು ಸ್ಫೋಟದ ಸದ್ದು ಮತ್ತು ವಿಮಾನಗಳ ಹಾರಾಟವನ್ನು ಕೇಳಿದೆವು. ಗಾಳಿ ಬಂದು ಅಪ್ಪಳಿಸಿದ ಅನುಭವವಾಯಿತು,” ಎಂದು ಕಾರ್ಮೆನ್ ಹಿಡಾಲ್ಗೊ ಎಂಬ 21 ವರ್ಷದ ಪ್ರತ್ಯಕ್ಷದರ್ಶಿಯೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

ರಷ್ಯಾದಲ್ಲಿ ನ್ಯುಮೋನಿಕ್ ಪ್ಲೇಗ್ ಭೀತಿ: ಲ್ಯಾಬ್ ಸಿಬ್ಬಂದಿ ಸಾವು, 200 ಮಂದಿ ಮೇಲೆ ನಿಗಾ

ರಷ್ಯಾದ ಇರ್ಕುಟ್ಸ್ಕ್ (Irkutsk) ಪ್ರದೇಶದಲ್ಲಿ ಶಂಕಿತ ನ್ಯುಮೋನಿಕ್ ಪ್ಲೇಗ್‌ಗೆ ಲ್ಯಾಬ್ ಉದ್ಯೋಗಿಯೊಬ್ಬರು...

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ...

ಹಾರ್ಮುಜ್ ಜಲಸಂಧಿಯಲ್ಲಿ ಕುವೈತ್ ಹಡಗಿನ ಮೇಲೆ ದಾಳಿ: ಐವರು ಭಾರತೀಯರ ರಕ್ಷಣೆ

ಹಾರ್ಮುಜ್ ಜಲಸಂಧಿಯಲ್ಲಿ ಕುವೈತ್ ಧ್ವಜವಿದ್ದ ತೈಲ ಹಡಗಿನ ಮೇಲೆ ಸ್ಫೋಟಕ ವಸ್ತುವಿನಿಂದ...