ಬಾಂಗ್ಲಾದೇಶದಲ್ಲಿ ಇಂದು ಸಾರ್ವತ್ರಿಕ ಚುನಾವಣೆ

Date:

ದೇಶವ್ಯಾಪಿ ವಿದ್ಯಾರ್ಥಿ ಪ್ರತಿಭಟನೆಯ ಪರಿಣಾಮವಾಗಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ 15 ವರ್ಷಗಳ ಆಳ್ವಿಕೆ ಅಂತ್ಯಗೊಂಡು 18 ತಿಂಗಳ ಬಳಿಕ ಬಾಂಗ್ಲಾದೇಶದ ಸಂಸತ್ತಿಗೆ ಗುರುವಾರ ಚುನಾವಣೆ ನಡೆಯುತ್ತಿದೆ. ಆ ಬಳಿಕ ಮಧ್ಯಂತರ ಸರ್ಕಾರ ದೇಶದ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಈ ಅವಧಿಯಲ್ಲೂ ಪ್ರತಿಭಟನೆಗಳು, ದಂಗೆಗಳು ಹಾಗೂ ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರ ಮುಂದುವರಿದಿದ್ದವು. ಎಲ್ಲಕ್ಕಿಂತ ಪ್ರಮುಖವಾಗಿ ದೇಶದ ವಿದೇಶಾಂಗ ನೀತಿ ಬದಲಾಗಿದ್ದು, ಭಾರತದಿಂದ ದೂರ ಸರಿದು ಪಾಕಿಸ್ತಾನ ಮತ್ತು ಚೀನಾ ಜತೆಗಿನ ನಂಟು ಬಲಗೊಂಡಿದೆ.

- Advertisement -

ದೇಶದಲ್ಲಿ ಚುನಾಯಿತ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈ ಎಲ್ಲ ಘಟನೆಗಳು ಬದಲಾಗುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ. ಖಲೀದಾ ಝಿಯಾ ಅವರ ಬಾಂಗ್ಲಾದೇಶ ನ್ಯಾಷನಲ್ ಪಕ್ಷ ದೇಶದ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ಲೇಷಿಸಲಾಗಿದೆ. ಖಲೀದಾ ನಿಧನದ ಬಳಿಕ ಅವರ ಪುತ್ರ ತಾರಿಕ್ ರಹಮಾನ್ ಪಕ್ಷವನ್ನು ಮುನ್ನಡೆಸುತ್ತಿದ್ದು, ಪ್ರಧಾನಿ ಹುದ್ದೆಯ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖುದ್ದು ರಾಜಧರ್ಮ ಪಾಲಿಸಲಿಲ್ಲ ಮೋದಿಯವರು, ಹಿಮಂತರಿಗೆ ಹೇಗೆ  ಉಪದೇಶ ನೀಡಬಲ್ಲರು ಪಾಪ?

ಮಾಜಿ ಪ್ರಧಾನಿ ಶೇಖ್ ಹಸೀನಾ ಪದಚ್ಯುತಿಯ ಬಳಿಕ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನುಸ್ ಅವರು ಅವಾಮಿ ಲೀಗ್ ಪಕ್ಷವನ್ನು ಅನರ್ಹಗೊಳಿಸಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧ ಹೇರಿದ್ದರು.

ದೇಶದ ಎಲ್ಲಾ 299 ಸಂಸದೀಯ ಕ್ಷೇತ್ರಗಳಲ್ಲಿ ಬೆಳಿಗ್ಗೆ 7.30ರಿಂದ ಸಂಜೆ 4.30ರವರೆಗೆ ಮತದಾನ ನಡೆಯಲಿದ್ದು, 8 ಲಕ್ಷ ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. 50 ಪಕ್ಷಗಳು ಕಣದಲ್ಲಿವೆ. ಮತಪತ್ರದ ಮೂಲಕ ಮತದಾನ ನಡೆಯುತ್ತಿದ್ದು, ಪಾರದರ್ಶಕ ಮತಪೆಟ್ಟಿಗೆಯಲ್ಲಿ ಮತಪತ್ರಗಳನ್ನು ಹಾಕಲಾಗುತ್ತದೆ. ಒಟ್ಟು 2,028 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಳುಗುತ್ತಿರುವ ಬ್ಯಾಂಕಾಕ್: 50 ಜಿಲ್ಲೆಗಳಲ್ಲಿ ‘ವಿಪತ್ತು’ ಘೋಷಣೆ, ಸ್ತಬ್ಧಗೊಂಡ ಜನಜೀವನ

ಸತತ ಮಳೆಯಿಂದಾಗಿ ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ಅಕ್ಷರಶಃ ಜಲಾವೃತಗೊಂಡಿದ್ದು, ನಗರದ ಎಲ್ಲಾ...

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...