ವಕ್ಫ್‌ ಕಾಯ್ದೆ | ‘ವಕ್ಫ್ ಭೂಮಿಯಲ್ಲಿ ಬಿಜೆಪಿ ದೇವಾಲಯ ಕಟ್ಟುತ್ತಿದೆ’; ಢಾಕಾದಲ್ಲಿ ಪ್ರತಿಭಟನೆ

Date:

ಭಾರತದ ಕೇಂದ್ರ ಸರ್ಕಾರವು ‘ವಕ್ಫ್‌ ತಿದ್ದುಪಡಿ ಕಾಯ್ದೆ-2025’ಅನ್ನು ಜಾರಿಗೊಳಿಸಿದೆ. ಈ ಮೂಲಕ, ಭಾರತದಾದ್ಯಂತ ವಕ್ಫ್‌ ಭೂಮಿಯಲ್ಲಿ ಬಿಜೆಪಿ ದೇವಾಲಯ ಕಟ್ಟುವ ಹುನ್ನಾರ ಹೊಂದಿದೆ. ಮುಸ್ಲಿಮರನ್ನು ದಮನ ಮಾಡಲು ಯತ್ನಿಸುತ್ತಿದೆ ಎಂದು ಬಾಂಗಾದೇಶದ ಮುಸ್ಲಿಂ ಸಂಘಟನೆಗಳು ಆರೋಪಿಸಿವೆ. ಕಾಯ್ದೆಯಲ್ಲಿ ಹಿಂಪಡೆದುಕೊಳ್ಳುವಂತೆ ಭಾರತ ಸರ್ಕಾರವನ್ನು ಒತ್ತಾಯಿಸಿವೆ.

- Advertisement -

ಬಾಂಗ್ಲಾ ರಾಜಧಾನಿ ಢಾಕಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ಬಲಪಂಥೀಯ ಇಸ್ಲಾಮಿಸ್ಟ್ ಪಕ್ಷ ‘ಖಿಲಾಫತ್ ಮಜ್ಲಿಸ್’ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ‘ಭಾರತದಲ್ಲಿ ಮುಸ್ಲಿಮರಿಗೆ ಸೇರಿದ ಭೂಮಿಯನ್ನು ಅತಿಕ್ರಮಿಸಲಾಗುತ್ತಿದೆ’ ಎಂದು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಪ್ರತಿಭಟನೆಯಲ್ಲಿ ಮಾತನಾಡಿರುವ ಪಕ್ಷದ ಮುಖ್ಯಸ್ಥ ಮೌಲಾನಾ ಮಾಮುನುಲ್ ಹಕ್, “ಮುಸ್ಲಿಮರ ಖಾಸಗಿ ಮತ್ತು ವಕ್ಫ್ ಆಸ್ತಿಗಳನ್ನು ಅತಿಕ್ರಮಿಸಿಕೊಂಡು ಅಥವಾ ಅಕ್ರಮವಾಗಿ ಸ್ವಾಧೀನಪಡಿಸಿಕೊಂಡು ಅವರು (ಬಿಜೆಪಿ) ದೇವಾಲಯ ಕಟ್ಟುತ್ತಿದ್ದಾರೆ. ಈ ಅತಿಕ್ರಮಣ ಮತ್ತು ಸ್ವಾಧೀನಗಳಿಗೆ ಕಾನೂನು ಚೌಕಟ್ಟನ್ನು ನೀಡಲು ವಕ್ಫ್ ತಿದ್ದುಪಡಿ ಕಾಯ್ದೆ-2025ಯನ್ನು ಅಂಗೀಕರಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ವರದಿ ಓದಿದ್ದೀರಾ?: ವಕ್ಫ್‌ ತಿದ್ದುಪಡಿ ಕಾಯ್ದೆ | ಮೂಗಿಗೆ ತುಪ್ಪ ಹಚ್ಚಲು ಮನೆ ಬಾಗಿಲಿಗೆ ಬರುತ್ತಿದೆ ಬಿಜೆಪಿ!

“ಹಿಂದುತ್ವವಾದಿ ಬಿಜೆಪಿ ಸರ್ಕಾರವು ಭಾರತದಾದ್ಯಂತ ಹಿಂದಿನಿಂದಲೂ ಮುಸ್ಲಿಮರನ್ನು ಕೊಲ್ಲುತ್ತಿದೆ. ಅವರು ಮುಸ್ಲಿಮರ ಮೇಲೆ ದಾಳಿ ಮಾಡಲು ಹಿಂದುತ್ವವಾದಿಗಳನ್ನು ಪ್ರಚೋದಿಸುತ್ತಿದ್ದಾರೆ” ಎಂದು ದೂರಿದ್ದಾರೆ.

“ಭಾರತದಾದ್ಯಂತ ಕಾಯ್ದೆಯ ವಿರುದ್ಧ ಮುಸ್ಲಿಮರು ಪ್ರತಿಭಟನೆಯಲ್ಲಿ ಸಿಡಿದಿದ್ದಾರೆ. ಕಾಯ್ದೆಯು ಮುಸ್ಲಿಮರ ಧಾರ್ಮಿಕ ಕಾನೂನುಗಳು ಮತ್ತು ಹಕ್ಕುಗಳ ಮೇಲೆ ಹಸ್ತಕ್ಷೇಪ ಮಾಡುತ್ತದೆ. ಭಾರತದಲ್ಲಿ ಮುಸ್ಲಿಮರ ಹತ್ಯೆ ಮತ್ತು ಮುಸ್ಲಿಮರ ಧಾರ್ಮಿಕ ಭಾವನೆಗೆಳಿಗೆ ಧಕ್ಕೆ ತರಲು ಯತ್ನಿಸುತ್ತಿರುವ ಭಾರತದ ಸರ್ಕಾರ ವಿರುದ್ಧ ಮುಸ್ಲಿಂ ಜಗತ್ತು ಧ್ವನಿ ಎತ್ತಬೇಕು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೀವು ಮತ್ತು ನಿಮ್ಮ ಪೊಲೀಸರು ಮಹಿಳೆಯರಿಗೆ ಹೆದರುವುದೇಕೆ: ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರು ಹಾಗೂ ಮಹಿಳಾ...

AI ಗೆ ಸಂಪೂರ್ಣ ನಿಯಂತ್ರಣ ಬೇಡ, ಕೆಲ ಅಪಾಯಗಳನ್ನು ಸ್ವೀಕರಿಸೋಣ: ಸ್ಯಾಮ್ ಆಲ್ಟ್‌ಮನ್

AI ತಂತ್ರಜ್ಞಾನದಿಂದ ಉಂಟಾಗಬಹುದಾದ ಕೆಲವು ಅಪಾಯಗಳನ್ನು ಒಪ್ಪಿಕೊಂಡರೂ, ಅದರ ಮೂಲಕ ದೊರೆಯುವ...

ಯುಪಿ ರಾಜ್ಯಸಭೆ ಚುನಾವಣೆ | ಬಿಜೆಪಿಯ 8 ಅಭ್ಯರ್ಥಿಗಳ ಪಟ್ಟಿ ಪ್ರಕಟ; ಕೇಂದ್ರ ಸಚಿವ ಹರ್ದೀಪ್‌ ಪುರಿ ಔಟ್‌

ಮುಂದಿನ ಅಕ್ಟೋಬರ್ 16ರಂದು ನಡೆಯಲಿರುವ ಉತ್ತರ ಪ್ರದೇಶ ರಾಜ್ಯಸಭಾ ಚುನಾವಣೆಗೆ ಬಿಜೆಪಿ...

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...