ಯುದ್ಧ ಅಪರಾಧಿ | ವಿಶ್ವಸಂಸ್ಥೆಯ ಶೃಂಗಸಭೆಯಲ್ಲಿ ನೆತನ್ಯಾಹು ಬಂಧನಕ್ಕೆ ಕಾನೂನು ಪರಿಶೀಲನೆ: ಮಮ್ದಾನಿ

Date:

ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ICC) ಬಂಧನ ವಾರೆಂಟ್ ಹೊರಡಿಸಿದ ಬೆನ್ನಲ್ಲೇ, ನೆತನ್ಯಾಹು ಒಬ್ಬ ಯುದ್ಧ ಅಪರಾಧಿ ಮತ್ತು ಅವರು ‘ದಿ ಹೇಗ್‌ಗೆ ಸೇರಬೇಕಾದವರು’ ಎಂದು ನ್ಯೂಯಾರ್ಕ್ ಸಿಟಿ ಮೇಯರ್ ಜೊಹ್ರಾನ್ ಮಮ್ದಾನಿ ದೃಢವಾಗಿ ಪ್ರತಿಪಾದಿಸಿದ್ದಾರೆ.

- Advertisement -

ಸೆಪ್ಟೆಂಬರ್‌ನಲ್ಲಿ ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಗೆ ಭಾಗಿಯಾಗಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಬಂಧಿಸಲು ಇರುವ ಕಾನೂನುಬದ್ಧ ಅಧಿಕಾರ ಮತ್ತು ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ಮಮ್ದಾನಿ ನೇತೃತ್ವದ ನ್ಯೂಯಾರ್ಕ್ ಆಡಳಿತ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

“ಮೇಯರ್‌ಗೆ ಇರುವ ಜಾರಿ ಅಧಿಕಾರಗಳ ನಿಖರವಾದ ಕಾನೂನು ವ್ಯಾಪ್ತಿಯನ್ನು ನಿರ್ಧರಿಸಲು ನ್ಯೂಯಾರ್ಕ್‌ನ ಕಾನೂನು ಸಲಹೆಗಾರರೊಂದಿಗೆ ಸತತ ಸಮಾಲೋಚನೆ ನಡೆಸಲಾಗುತ್ತಿದೆ” ಎಂದು ಮಮ್ದಾನಿ ಹೇಳಿರುವುದಾಗಿ ‘ದಿ ನ್ಯೂಯಾರ್ಕ್ ಟೈಮ್ಸ್’ ವರದಿ ಮಾಡಿದೆ.

“ತಮ್ಮ ಆಡಳಿತವು ಹೊಸ ಕಾನೂನುಗಳನ್ನು ರಚಿಸದೆ ಚಾಲ್ತಿಯಲ್ಲಿರುವ ನಿಯಮಗಳನ್ನಷ್ಟೇ ಕಟ್ಟುನಿಟ್ಟಾಗಿ ಪಾಲಿಸಲಿದೆ. ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ICC) ಬಂಧನ ವಾರೆಂಟ್ ಹೊರಡಿಸಿರುವುದರಿಂದ ನೆತನ್ಯಾಹು ಒಬ್ಬ ಯುದ್ಧ ಅಪರಾಧಿ. ಅವರು ‘ದಿ ಹೇಗ್‌’ನಲ್ಲಿ ಇರಬೇಕಾದವರು” ಎಂದು ಪ್ರತಿಪಾದಿಸಿದ್ದಾರೆ.

 “ನ್ಯೂಯಾರ್ಕ್ ನಗರದ ಕಾನೂನು ನನಗೆ ಏನು ಮಾಡಲು ಅನುಮತಿ ನೀಡುತ್ತದೆಯೋ ಅದನ್ನೇ ನಾವು ಮಾಡುತ್ತೇವೆ. ಆದರೆ, ಅದಕ್ಕಾಗಿ ನಾವು ನಮ್ಮದೇ ಆದ ಹೊಸ ಕಾನೂನುಗಳನ್ನು ಬರೆಯುವುದಿಲ್ಲ,” ಎಂದು ಮಮ್ದಾನಿ ತಿಳಿಸಿದ್ದಾರೆ.

“ಕಳೆದ ಹಲವು ವರ್ಷಗಳಿಂದ ನೆತನ್ಯಾಹು ಅವರ ಕ್ರಮಗಳು ಉಂಟುಮಾಡಿದ ಪರಿಣಾಮಗಳಿಂದಾಗಿ ಜಾಗತಿಕವಾಗಿ ಅನೇಕರು ಇದೇ ಅಭಿಪ್ರಾಯವನ್ನು ಹೊಂದಿದ್ದಾರೆ,” ಎಂದು ಮಮ್ದಾನಿ ತಿಳಿಸಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ICC) ಇತ್ತೀಚೆಗೆ ಬಂಧನ ವಾರೆಂಟ್ ಹೊರಡಿಸಿದೆ. ಗಜಾದಲ್ಲಿ ಇಸ್ರೇಲ್ ನಡೆಸಿದ ಮಿಲಿಟರಿ ಕಾರ್ಯಾಚರಣೆಯ ಸಂದರ್ಭದಲ್ಲಿ ಈ ಇಬ್ಬರು ನಾಯಕರು ಯುದ್ಧಾಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳನ್ನು ಎಸಗಿದ್ದಾರೆ ಎಂಬ ಆರೋಪಗಳ ಮೇರೆಗೆ ವಾರೆಂಟ್‌ ಜಾರಿಗೊಳಿಸಲಾಗಿದೆ.  

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನ.17, 18ರಂದು ಕಲಾ ಪ್ರತಿಭೋತ್ಸವ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಮಕ್ಕಳು ಮತ್ತು ಯುವಜನರಲ್ಲಿನ ಸುಪ್ತ ಕಲಾ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ...

ವಿಜಯಪುರ | ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘನೆ; 186 ಅಧಿಕಾರಿಗಳಿಗೆ ದಂಡ!

ಮಾಹಿತಿ ಹಕ್ಕು ಕಾಯ್ದೆಯಡಿ ನಿಗದಿತ ಅವಧಿಯಲ್ಲಿ ಮಾಹಿತಿ ನೀಡದೆ ಕರ್ತವ್ಯ ಲೋಪ...

ಇ.ಡಿ. ‘ಸೂಪರ್ ಕಾಪ್’ ಅಲ್ಲ, ಸ್ವತಂತ್ರವಾಗಿ ತನಿಖೆ ನಡೆಸಲು ಅಧಿಕಾರವಿಲ್ಲ: ಕರ್ನಾಟಕ ಹೈಕೋರ್ಟ್

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯಕ್ಕೆ...