ಯುದ್ಧ ಪರಿಣಾಮ: ಶ್ರೀಲಂಕಾದಲ್ಲಿ ಇಂಧನ ದರ 25% ಏರಿಕೆ

Date:

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ತೀವ್ರ ಪರಿಣಾಮವು ಭಾರತವನ್ನು ಮಾತ್ರವಲ್ಲದೆ, ಶ್ರೀಲಂಕಾವನ್ನೂ ಕಾಡುತ್ತಿದೆ. ಶ್ರೀಲಂಕಾದಲ್ಲಿ ಭಾನುವಾರ ಇಂಧನ ದರವನ್ನು ಪರಿಷ್ಕರಿಸಲಾಗಿದ್ದು, 25%ರಷ್ಟು ಹೆಚ್ಚಿಸಲಾಗಿದೆ.

- Advertisement -

ಸಾಮಾನ್ಯ ಪೆಟ್ರೋಲ್ ಬೆಲೆಯು ಪ್ರತಿ ಲೀಟರ್‌ಗೆ 317 ರೂಪಾಯಿಗಳಿಂದ 398 ರೂಪಾಯಿಗಳಿಗೆ ಏರಿಕೆಯಾಗಿದೆ. ಇನ್ನು ಸಾರ್ವಜನಿಕ ಸಾರಿಗೆಯಲ್ಲಿ ಹೆಚ್ಚಾಗಿ ಬಳಕೆಯಾಗುವ ಡೀಸೆಲ್ ಬೆಲೆಯು ಲೀಟರ್‌ಗೆ 79 ರೂಪಾಯಿ ಏರಿಕೆಯಾಗಿದ್ದು, ಈಗ 382 ರೂಪಾಯಿ ತಲುಪಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಕಳೆದ ವಾರವಷ್ಟೇ, ಶ್ರೀಲಂಕಾ ಸರ್ಕಾರವು ಇಂಧನ ದರದಲ್ಲಿ 8% ರಷ್ಟು ಏರಿಕೆ ಮಾಡಿತ್ತು. ಬಳಕೆಯನ್ನು ನಿಯಂತ್ರಿಸಲು ಪಡಿತರ ವ್ಯವಸ್ಥೆಯನ್ನು ಜಾರಿಗೆ ತಂದಿತ್ತು. “ಇತ್ತೀಚಿನ ಬೆಲೆ ಏರಿಕೆಯ ಮೂಲಕ ಇಂಧನ ಬಳಕೆಯಲ್ಲಿ 15%ನಿಂದ 20% ರಷ್ಟು ಕಡಿತವನ್ನು ನಿರೀಕ್ಷಿಸುತ್ತಿದ್ದೇವೆ” ಎಂದು ಸಿಲೋನ್ ಪೆಟ್ರೋಲಿಯಂ ಕಾರ್ಪೊರೇಶನ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ದೀರ್ಘಕಾಲದವರೆಗೆ ಸಂಘರ್ಷ ಮುಂದುವರಿಯುವ ಸಾಧ್ಯತೆಯಿದ್ದು, ಇದು ದೇಶದ ಇಂಧನ ಪೂರೈಕೆಯ ಮೇಲೆ ಪರಿಣಾಮ ಬೀರಬಹುದು ಎಂದು ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸ್ಸಾನಾಯಕೆ ಕಳೆದ ವಾರ ಎಚ್ಚರಿಸಿದ್ದರು. ಈ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

ಇಂಧನ ಉಳಿತಾಯಕ್ಕಾಗಿ ಶ್ರೀಲಂಕಾದಲ್ಲಿ ಕಳೆದ ಬುಧವಾರದಿಂದ ಜಾರಿಗೆ ಬರುವಂತೆ ವಾರಕ್ಕೆ ನಾಲ್ಕು ದಿನಗಳ ಕೆಲಸದ ಅವಧಿಯನ್ನು ಘೋಷಿಸಲಾಗಿದೆ. ಅಲ್ಲದೆ, ಸಾಧ್ಯವಿರುವ ಕಡೆಗಳಲ್ಲಿ ಉದ್ಯೋಗಿಗಳಿಗೆ ‘ಮನೆಯಿಂದಲೇ ಕೆಲಸ’ ಮಾಡುವ ವ್ಯವಸ್ಥೆಯನ್ನು ಮರುಜಾರಿಗೊಳಿಸುವಂತೆ ಉದ್ಯೋಗದಾತರಿಗೆ ಸೂಚಿಸಲಾಗಿದೆ.

ಈ ಲೇಖನ ಓದಿದ್ದೀರಾ?: ಲಿಂಗತ್ವ ಅಲ್ಪಸಂಖ್ಯಾತರ ಅಸ್ಮಿತೆಯನ್ನೇ ಅಳಿಸುವ ಮಸೂದೆ: ಆತ್ಮಗೌರವಕ್ಕೆ ಕೊಡಲಿಪೆಟ್ಟು

ವಿಶ್ವದ ಒಟ್ಟು ತೈಲ ರಫ್ತಿನ 20%ರಷ್ಟು ಭಾಗವು ಇರಾನ್ ನಿಯಂತ್ರಣದಲ್ಲಿರುವ ‘ಹಾರ್ಮುಜ್ ಜಲಸಂಧಿ’ಯ ಮೂಲಕವೇ ಸಾಗಾಟವಾಗುತ್ತದೆ. ಈ ಜಲಸಂಧಿಯನ್ನು ಇರಾನ್ ಸ್ಥಗಿತೊಳಿಸಿರುವ ಕಾರಣ, ಇಂಧನ ಬಿಕ್ಕಟ್ಟು ಎದುರಾಗಿದೆ. ಭಾರತದಲ್ಲಿಯೂ ಇಂಧನ ಮತ್ತು ಎಲ್‌ಪಿಜಿ ಕೊರತೆ ಎದುರಾಗಿದ್ದು, ಭಾರತದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸರಬರಾಜು ಸ್ಥಗಿತಗೊಂಡಿದೆ. ಗೃಹ ಬಳಕೆಯ ಎಲ್‌ಪಿಜಿ ಲಭ್ಯತೆಯೂ ಅಸಪರ್ಮಕವಾಗಿದೆ. ಈ ನಡುವೆ, ಭಾರತದಲ್ಲಿ ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂ. ಮತ್ತು ಕೈಗಾರಿಕಾ ಡೀಸೆಲ್‌ ದರವನ್ನು 22 ರೂ. ಹೆಚ್ಚಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...