ಯುದ್ಧ ವರದಿ | ಖಮೇನಿ ಹತ್ಯೆ ಖಂಡಿಸಿ ಕರಾಚಿಯಲ್ಲಿ ಪ್ರತಿಭಟನೆ; ಘರ್ಷಣೆಯಿಂದ 9 ಸಾವು

Date:

ಇರಾನ್‌ನ ಸರ್ವೋಚ್ಛ ನಾಯಕ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ ಪ್ರತಿಭಟನೆಗಳು ನಡೆದಿವೆ. ಈ ವೇಳೆ, ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿದ್ದು, ಕನಿಷ್ಠ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

- Advertisement -

ಘಟನೆ ಕುರಿತು ಎಧಿ ಫೌಂಡೇಶನ್ ರಕ್ಷಣಾ ಸೇವೆಯ ವಕ್ತಾರ ಮುಹಮ್ಮದ್ ಅಮೀನ್ ಮಾಹಿತಿ ಹಂಚಿಕೊಂಡಿದ್ದಾರೆ. “ನಾವು ಕನಿಷ್ಠ ಎಂಟು ಮೃತದೇಹಗಳನ್ನು ಕರಾಚಿಯ ಸಿವಿಲ್ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದ್ದೇವೆ. ದೂತವಾಸದ ಬಳಿಯ ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಖಮೇನಿಯವರ ಹತ್ಯೆಯ ಸುದ್ದಿ ತಿಳಿದು ಭಾನುವಾರ ಬೆಳಿಗ್ಗೆ ಅಮೆರಿಕದ ದೂತವಾಸಕ್ಕೆ ನುಗ್ಗಿದ ನೂರಾರು ಜನರು, ಅಲ್ಲಿನ ಕಿಟಕಿ ಗಾಜುಗಳನ್ನು ಧ್ವಂಸಗೈದಿದ್ದಾರೆ ಎಂದು ವರದಿಗಳು ಹೇಳಿವೆ.

ಆಕ್ರೋಶಗೊಂಡ ಜನರನ್ನು ಚದುರಿಸಲು ಪೊಲೀಸರು ಮತ್ತು ಅರೆಸೇನಾ ಪಡೆಗಳು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ ನಡೆಸಿದೆ ಎಂದು ಪೊಲೀಸ್ ಅಧಿಕಾರಿ ಮೊಹಮ್ಮದ್ ಜವಾದ್ ಹೇಳಿದ್ದಾರೆ. ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯಲ್ಲಿ ಕನಿಷ್ಠ ಒಬ್ಬ ಪ್ರತಿಭಟನಾಕಾರ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳಲ್ಲಿ, ಅಮೆರಿಕ ದೂತವಾಸದ ಕಿಟಕಿ ಗಾಜುಗಳನ್ನು ಯುವಜನರ ಗುಂಪು ಧ್ವಂಸ ಮಾಡಿರುವುದನ್ನು ನೋಡಬಹುದು.

ಪಾಕಿಸ್ತಾನದ ಪೂರ್ವ ನಗರವಾದ ಲಾಹೋರ್ ಮತ್ತು ಉತ್ತರದ ಸ್ಕಾರ್ದುನಲ್ಲೂ ಸಾವಿರಾರು ಜನರು ಬೀದಿಗಿಳಿದಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ಅಮೆರಿಕದ ರಾಯಭಾರ ಕಚೇರಿ ಇರುವ ರಾಜತಾಂತ್ರಿಕ ಪ್ರದೇಶದ ಬಳಿ ಪ್ರತಿಭಟನೆ ನಡೆದಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಮೆನ್ ರಾಷ್ಟ್ರಪತಿ ಭವನದ ಮೇಲೆ ಹೂತಿಗಳ ಕ್ಷಿಪಣಿ ದಾಳಿ: ಐವರ ಸಾವು

ಯಮೆನ್‌ನ ದಕ್ಷಿಣ ಭಾಗದ ಪ್ರಮುಖ ನಗರವಾದ ಅದನ್‌ನಲ್ಲಿರುವ ಅಲ್-ಮಾಶಿಕ್ ರಾಷ್ಟ್ರಪತಿ ಭವನದ...

ಭಾರತದ ಮೇಲೆ ಶೇ.100 ಸುಂಕ: 10 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅಂತಿಮ ತೀರ್ಮಾನ!

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಶೇ. 100ರಷ್ಟು ಭಾರಿ ಆಮದು...

ರಾತ್ರಿ ವೇಳೆಯಲ್ಲೂ ರವಿ; ಸೂರ್ಯನ ಬೆಳಕು ಮಾರಾಟ ಮಾಡಲು ಅಮೆರಿಕ-ಭಾರತ ಸಹಭಾಗಿತ್ವ: ಏನಿದು ಯೋಜನೆ?

ವಿಜ್ಞಾನ ಕಲ್ಪನೆಗಳಿಗಿಂತಲೂ ಮಿಗಿಲಾದ ಅಪರೂಪದ ಯೋಜನೆಯೊಂದು ಈಗ ಜಾಗತಿಕ ಇಂಧನ ಕ್ಷೇತ್ರದಲ್ಲಿ...

ಸೌದಿ ಅರಾಮ್ಕೊ ಪ್ರಧಾನ ಕಚೇರಿ ಮೇಲೆ ದಾಳಿ: ಮತ್ತೆ ಪುಟಿದೆದ್ದರೇ ಹೂತಿ ಬಂಡುಕೋರರು?

ಯೆಮನ್‌ನ ಹೂತಿ ಬಂಡುಕೋರರು ಸೌದಿ ಅರೇಬಿಯಾದ ಧಹ್ರಾನ್‌ನಲ್ಲಿರುವ ತೈಲ ದೈತ್ಯ ಕಂಪನಿ...