ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

Date:

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಿರಸ್ಕರಿಸಿದ್ದಾರೆ ಎಂದು ದಿ ವಾಲ್‌ ಸ್ಟ್ರೀಟ್‌ ಜರ್ನಲ್ ವರದಿ ಮಾಡಿದೆ. ಇರಾನ್‌ ಸಂಘರ್ಷಕ್ಕೆ ರಾಜತಾಂತ್ರಿಕ ಪರಿಹಾರದ ಪ್ರಸ್ತಾವ ಮುಂದಿಟ್ಟಿರುವ ಹೊತ್ತಿನಲ್ಲೇ ಅಮೆರಿಕ ಮತ್ತೆ ಸೇನಾ ಕಾರ್ಯಾಚರಣೆಗೆ ಸಿದ್ಧತೆ ನಡೆಸುತ್ತಿರುವುದಾಗಿ ವರದಿಯಾಗಿದ್ದು, ಸಂಘರ್ಷ ಮತ್ತಷ್ಟು ತೀವ್ರಗೊಳ್ಳುವ ಆತಂಕ ಎದುರಾಗಿದೆ.

- Advertisement -

ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್‌, ಇರಾನ್‌ ಮೇಲೆ ಜಂಟಿ ದಾಳಿ ನಡೆಸಿದ ಬಳಿಕ ಉಭಯ ದೇಶಗಳ ನಡುವಿನ ಸಂಘರ್ಷ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಇರಾನ್‌ 7 ದಿನಗಳ ಕದನ ವಿರಾಮದ ಪ್ರಸ್ತಾವ ಮುಂದಿಟ್ಟಿದ್ದು, ಅಮೆರಿಕ ತನ್ನ ಕೆಲವು ಷರತ್ತುಗಳನ್ನು ಒಪ್ಪಿಕೊಂಡರೆ ಹೋರ್ಮುಜ್‌ ಜಲಸಂಧಿಯನ್ನು ಪುನಃ ತೆರೆಯುವುದಾಗಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ರಾಜ್ಯದಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಕುರಿತು ಗಂಭೀರ ಆತಂಕಗಳನ್ನು ಹುಟ್ಟುಹಾಕಿದೆ. ರಾಜ್ಯದ 34 ಜಿಲ್ಲಾ ಮತ್ತು ನಗರ ಆಡಳಿತ ಘಟಕಗಳ...

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ...

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಅತ್ಯಂತ ಭೀಕರ ಮತ್ತು ಆಘಾತಕಾರಿ ಷಡ್ಯಂತ್ರವೊಂದು ದೇಶದಾದ್ಯಂತ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಮೋದಿ-ಶಾ ಜೋಡಿಯ ಸೂತ್ರದ ಬೊಂಬೆ ಗ್ಯಾನೇಶ್‌...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್:...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ₹5ಕ್ಕೆ ಉಪಹಾರ, ₹10ಕ್ಕೆ ಊಟ ನೀಡುವ ಇಂದಿರಾ ಕ್ಯಾಂಟಿನ್ ಯೋಜನೆ ಜನಸಾಮಾನ್ಯರಿಗೆ ಬಹುದೊಡ್ಡ ಆಸರೆಯಾಗಿದೆ. ಆದರೆ...

ಇರಾನ್‌ ವಿದೇಶಾಂಗ ಸಚಿವ ಅಬ್ಬಾಸ್‌ ಅರಾಘ್ಚಿ, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಹಿನ್ನೆಲೆಯಲ್ಲಿ ಶುಕ್ರವಾರ ಮಾತನಾಡಿ, ಕತಾರ್‌ ಮೂಲಕ ಅಮೆರಿಕಕ್ಕೆ ಏಳು ದಿನಗಳ ನಿರ್ದಿಷ್ಟ ಯೋಜನೆಯನ್ನು ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಅಮೆರಿಕ ಅಗತ್ಯ ಷರತ್ತುಗಳನ್ನು ಒಪ್ಪಿಕೊಂಡರೆ ಏಳು ದಿನಗಳೊಳಗೆ ಹೋರ್ಮುಜ್‌ ಜಲಸಂಧಿಯಲ್ಲಿ ಸಾಮಾನ್ಯ ಸಾಗರ ಸಂಚಾರ ಪುನಃಸ್ಥಾಪಿಸಲು ಸಿದ್ಧವಿರುವುದಾಗಿ ಹೇಳಿದ್ದಾರೆ.

ಅಮೆರಿಕದ ನೌಕಾ ನಿರ್ಬಂಧ ತೆರವು, ಇರಾನ್‌ ತೈಲದ ಮೇಲಿನ ನಿರ್ಬಂಧಗಳಿಗೆ ವಿನಾಯಿತಿ ಹಾಗೂ ಲೆಬನಾನ್‌ನ್ನೂ ಒಳಗೊಂಡ ಕದನ ವಿರಾಮ ಇರಾನ್‌ನ ಪ್ರಮುಖ ಷರತ್ತುಗಳಾಗಿವೆ. ಈ ಷರತ್ತುಗಳು ಈಡೇರಿದರೆ ಏಳು ದಿನಗಳೊಳಗೆ ಪರಮಾಣು ಕಾರ್ಯಕ್ರಮದ ಕುರಿತು ಮಾತುಕತೆ ಪುನರಾರಂಭಿಸುವುದಾಗಿ ಟೆಹ್ರಾನ್‌ ಹೇಳಿದೆ.

image 205

ಆದರೆ, ಈ ಪ್ರಸ್ತಾವವನ್ನು ಟ್ರಂಪ್‌ ತಿರಸ್ಕರಿಸಿದ್ದಾರೆ ಎಂದು ಅಮೆರಿಕದ ಅಧಿಕಾರಿಗಳನ್ನು ಉಲ್ಲೇಖಿಸಿ ದಿ ವಾಲ್‌ ಸ್ಟ್ರೀಟ್‌ ಜರ್ನಲ್ ವರದಿ ಮಾಡಿದೆ. ಇರಾನ್‌ ತನ್ನ ಬದ್ಧತೆಗಳನ್ನು ಪಾಲಿಸುವ ಬಗ್ಗೆ ಟ್ರಂಪ್‌ ಅನುಮಾನ ಹೊಂದಿದ್ದು, ಮಾತುಕತೆ ವಿಫಲವಾದರೆ ಮತ್ತೆ ಬಾಂಬ್‌ ದಾಳಿ ನಡೆಸುವ ಸಾಧ್ಯತೆಯನ್ನು ಪರಿಗಣಿಸುತ್ತಿದ್ದಾರೆ ಎನ್ನಲಾಗಿದೆ. ನವೆಂಬರ್‌ನಲ್ಲಿ ನಡೆಯಲಿರುವ ಅಮೆರಿಕದ ಮಧ್ಯಂತರ ಚುನಾವಣೆಗಳ ಬಳಿಕ ದಾಳಿ ಪುನರಾರಂಭಿಸುವ ಸಾಧ್ಯತೆಯ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇರಾನ್‌ ಪರಮಾಣು ಬಾಂಬ್‌ ಹೊಂದುವುದನ್ನು ಎಂದಿಗೂ ಒಪ್ಪುವುದಿಲ್ಲ ಎಂದು ಟ್ರಂಪ್‌ ಈಗಾಗಲೇ ಹಲವು ಬಾರಿ ಹೇಳಿದ್ದಾರೆ. ಇದೇ ವೇಳೆ ತಮ್ಮ ‘ಟ್ರೂತ್‌ ಸೋಷಿಯಲ್‌’ ಖಾತೆಯಲ್ಲಿ ಹೋರ್ಮುಜ್‌ ಜಲಸಂಧಿಯನ್ನು ಗುರುತಿಸಿರುವ ನಕ್ಷೆಯೊಂದನ್ನು ಹಂಚಿಕೊಂಡಿರುವ ಅವರು, ಅದಕ್ಕೆ ‘ಟ್ರಂಪ್‌ ಸ್ಟ್ರೈಟ್‌’ ಎಂದು ಹೆಸರಿಟ್ಟಿದ್ದಾರೆ.

ಅಮೆರಿಕ ಮತ್ತು ಇರಾನ್‌ ನಡುವೆ ಜೂನ್‌ 17ರಂದು 14 ಅಂಶಗಳ ಒಪ್ಪಂದವೊಂದು ನಡೆದಿತ್ತು. ತಕ್ಷಣ ಸೇನಾ ಕಾರ್ಯಾಚರಣೆ ಸ್ಥಗಿತಗೊಳಿಸುವುದು ಹಾಗೂ 60 ದಿನಗಳೊಳಗೆ ಅಂತಿಮ ಒಪ್ಪಂದಕ್ಕೆ ಬರುವ ನಿಟ್ಟಿನಲ್ಲಿ ಮಾತುಕತೆ ಮುಂದುವರಿಸುವುದು ಇದರ ಪ್ರಮುಖ ಅಂಶಗಳಾಗಿದ್ದವು. ಲೆಬನಾನ್‌ನಲ್ಲಿನ ಸಂಘರ್ಷವನ್ನೂ ಕದನ ವಿರಾಮದ ವ್ಯಾಪ್ತಿಗೆ ತರಲಾಗಿತ್ತು.

ಇದನ್ನೂ ಓದಿ: ಇರಾನ್‌ನ ಹೊಸ ರಾಷ್ಟ್ರೀಯವಾದಕ್ಕೆ ನೀರೆರೆದಿದ್ದೇ ಟ್ರಂಪ್‌ನ ಹುಚ್ಚಾಟಗಳು!‌

ಆದರೆ ಜುಲೈ 8ರಂದು ಟ್ರಂಪ್‌ ಈ ಒಪ್ಪಂದ ಮುಕ್ತಾಯಗೊಂಡಿದೆ ಎಂದು ಘೋಷಿಸಿದ್ದರು. ಬಳಿಕ ಇರಾನ್‌ ಕೂಡ ಅಮೆರಿಕ ತನ್ನ ಬದ್ಧತೆಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ತಿಳಿವಳಿಕೆ ಒಪ್ಪಂದವನ್ನು ಸ್ಥಗಿತಗೊಳಿಸಿತ್ತು.

ಈಗ ಮತ್ತೊಮ್ಮೆ ಇರಾನ್‌ ಕದನ ವಿರಾಮದ ಪ್ರಸ್ತಾವ ಮುಂದಿಟ್ಟಿದ್ದರೂ ಅಮೆರಿಕದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಶಾಂತಿಯ ಮಾತುಕತೆಗಿಂತ ಸೇನಾ ಆಯ್ಕೆಯತ್ತ ಅಮೆರಿಕದ ಒಲವು ಹೆಚ್ಚುತ್ತಿದೆಯೇ ಎಂಬ ಪ್ರಶ್ನೆ ಇದೀಗ ಮುನ್ನೆಲೆಗೆ ಬಂದಿದೆ. ಆದಾಗ್ಯೂ, ಶ್ವೇತಭವನವು ಮಧ್ಯವರ್ತಿಗಳ ಮೂಲಕ ಅಮೆರಿಕದ ಅಧಿಕಾರಿಗಳು ಸಕಾರಾತ್ಮಕ ಹಾಗೂ ರಚನಾತ್ಮಕ ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ರ‍್ಯಾಲಿಗೆ ತೆರಳುತ್ತಿದ್ದ TMC ಶಾಸಕನ ಕಾರಿಗೆ ಮೊಟ್ಟೆ, ಕಲ್ಲು ತೂರಾಟ

ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸಾರ್ವಜನಿಕ ಸಭೆಯಲ್ಲಿ...

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದೆ. ಪರಿಣಾಮ, ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು...

ಗದಗ | ಅನುದಾನ ಬಾರದೆ ಕಿರುಕುಳ ಆರೋಪ: KRDIL ಎಂಜಿನಿಯರ್ ನಾಪತ್ತೆ

ಗದಗ ಜಿಲ್ಲೆಯ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದ (ಕೆಆರ್ ಡಿಐಎಲ್)...

ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ಕೊಲೆಗಾರ, ‘ಮೋಶಾ’ ಸೂತ್ರದ ಬೊಂಬೆ ಗ್ಯಾನೇಶ್ ಕುಮಾರ್ ವಜಾಗೊಳ್ಳಬೇಕು!

ಮೋದಿ-ಅಮಿತ್ ಶಾರ 'ಅಧಿಕಾರದಾಹ'ಕ್ಕೆ ಇಡೀ ಚುನಾವಣಾ ಆಯೋಗವನ್ನೇ ಬಲಿಪಶು ಮಾಡಿ, ದೇಶದ...