ಪಾಕ್‌ ಮೇಲೆ ಜಲ ದಾಳಿ: ಸಲಾಲ್, ಬಹ್ಲಿಹಾರ್ ಡ್ಯಾಮ್‌ನಿಂದ ನೀರು ಬಿಡುಗಡೆ

Date:

ಪಾಕಿಸ್ತಾನ ಮತ್ತು ಭಾರತ ನಡುವಿನ ಸಂಘರ್ಷವು ಉಲ್ಬಣಗೊಳ್ಳುತ್ತಿದೆ. ಪಾಕ್‌ ವಿರುದ್ಧ ಜಲ ದಾಳಿಗೆ ಮುಂದಾಗಿದ್ದ ಭಾರತ, ಕಳೆದ ವಾರ ಝೀಲಂ ನದಿಗೆ ಏಕಾಏಕಿ ನೀರು ಹರಿಸಿತ್ತು. ಪರಿಣಾಮವಾಗಿ ಪಾಕಿಸ್ತಾನದ ಮುಜಾಫರಾಬಾದ್‌ ಪ್ರದೇಶದಲ್ಲಿ ಪ್ರವಾಹ ಭೀತಿ ಎದುರಾಗಿತ್ತು. ಇದೀಗ, ಸಲಾಲ್ ಹೈಡ್ರೋ ಮತ್ತು ಬಗ್ಲಿಹಾರ್‍‌ ಹೈಡ್ರೋ ಅಣೆಕಟ್ಟುಗಳ ಗೇಟ್‌ಗಳನ್ನು ತೆರೆಯಲಾಗಿದ್ದು, ಚೆನಾಬ್ ನದಿಗೆ ನೀರು ಹರಿಸಲಾಗಿದೆ. ಪರಿಣಾಮವಾಗಿ, ಪಾಕಿಸ್ತಾನದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.

- Advertisement -

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಿಂಧು ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದಾಗಿ ಭಾರತ ಘೋಷಿಸಿದೆ. ಇದೇ ವೇಳೆ, ಚೆನಾಬ್ ನದಿಗೆ ಕಟ್ಟಲಾಗಿರುವ ಅಣೆಕಟ್ಟುಗಳ ಎಲ್ಲ ಗೇಟ್‌ಗಳನ್ನು ಮುಚ್ಚಿತ್ತು. ಪರಿಣಾಮವಾಗಿ, ಚೆನಾಬ್ ನದಿಯಲ್ಲಿ ನೀರು ಕಡಿಮೆಯಾಗಿ, ಪಾಕಿಸ್ತಾನಕ್ಕೆ ನೀರಿನ ಹರಿವುದು ಇಲ್ಲದಂತಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಈ ನಡುವೆ, ರಿಯಾಸಿಯಲ್ಲಿರುವ ಸಲಾಲ್ ಹೈಡ್ರೋ ಯೋಜನೆ ಮತ್ತು ರಾಂಬನ್‌ನಲ್ಲಿರುವ ಬಗ್ಲಿಹಾರ್ ಹೈಡ್ರೋ ಯೋಜನೆ ಅಣೆಕಟ್ಟುಗಳು ತುಂಬುತ್ತಿದ್ದವು. ಇದೀಗ, ಅಣೆಕಟ್ಟುಗಳ ಗೇಟ್‌ಗಳನ್ನು ಏಕಾಏಕಿ ತೆಗೆಯಲಾಗಿದೆ. ಪಾಕಿಸ್ತಾನದಲ್ಲಿನ ನದಿ ದಂಡೆಯ ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

“ಭಾರೀ ಮಳೆಯಿಂದಾಗಿ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ನೀರು ಬಿಡುಗಡೆ ಅನಿವಾರ್ಹವಾಗಿದೆ. ಸಲಾಲ್ ವಿದ್ಯುತ್ ಯೋಜನೆಯ ಮೂರು ಗೇಟ್‌ಗಳು ಮತ್ತು ಬಗ್ಲಿಹಾರ್ ಯೋಜನೆಯ ಎರಡು ಗೇಟ್‌ಗಳನ್ನು ಗುರುವಾರ ತೆರೆಯಲಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಸಾಮಾನ್ಯವಾಗಿ ಚೆನಾಬ್ ನದಿಯಲ್ಲಿ 25-30 ಅಡಿಯಷ್ಟು ನೀರು ಹರಿಯುತ್ತದೆ. ಆದರೆ, ಕಳೆದ ವಾರ ಪಾಕಿಸ್ತಾನಕ್ಕೆ ನೀರಿನ ಹರಿವನ್ನು ನಿರ್ಬಂಧಿಸಿದ್ದರಿಂದ ಎರಡು ಅಣೆಕಟ್ಟುಗಳ ಗೇಟ್‌ಗಳನ್ನು ಮುಚ್ಚಲಾಗಿತ್ತು. ಪರಿಣಾಮವಾಗಿ, ನದಿಯಲ್ಲಿ ಕೇವಲ 2 ಅಡಿ ನೀರು ಮಾತ್ರ ಇತ್ತು” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಆಪರೇಷನ್ ಸಿಂಧೂರ್ | ಉಭಯ ರಾಷ್ಟ್ರಗಳ ಪರಿಸ್ಥಿತಿಯನ್ನು ಮತ್ತಷ್ಟು ಜಟಿಲಗೊಳಿಸಬಹುದೇ?

ಗೇಟ್‌ಗಳನ್ನು ಮುಚ್ಚಿದ್ದರಿಂದ, ಚೆನಾಬ್ ನದಿ ಒಣಗಿ ಹೋಗಿತ್ತು. ಪಾಕಿಸ್ತಾನಕ್ಕೆ ನೀರಿನ ಹರಿವು ಕಡಿಮೆಯಾಯಿತು. ಮೊದಲ ಬಾರಿಗೆ, ಜಮ್ಮು ಪ್ರದೇಶದ ಅಖ್ನೂರ್ ಪ್ರದೇಶದಲ್ಲಿ ಜನರು ಕಾಲ್ನಡಿಗೆಯಲ್ಲಿ ಚೆನಾಬ್ ನದಿಯನ್ನು ದಾಟುವಷ್ಟು ನೀರು ಕಡಿಮೆಯಾಗಿತ್ತು.

ಬಾಗ್ಲಿಹಾರ್ (ರಾಂಬನ್), ಸಲಾಲ್ (ರಿಯಾಸಿ) ಮತ್ತು ಕಿಶನ್‌ಗಂಗಾ (ಬಂಡಿಪೋರಾ) ಅಣೆಕಟ್ಟುಗಳ ಮೂಲಕ ಭಾರತವು ಪಾಕಿಸ್ತಾನಕ್ಕೆ ನೀರು ಹರಿಸುತ್ತದೆ. ತನ್ನ ಇಚ್ಛೆ ಮತ್ತು ಸಮಯಕ್ಕೆ ತಕ್ಕಂತೆ ನೀರಿನ ಹರಿವನ್ನು ಭಾರತ ನಿಯಂತ್ರಿಸುತ್ತದೆ. ಐಡಬ್ಲ್ಯೂಟಿ ಪ್ರಕಾರ, ಭಾರತವು ‘ಪೂರ್ವ ನದಿಗಳಾದ’ ಸಟ್ಲೆಜ್, ಬಿಯಾಸ್ ಮತ್ತು ರಾವಿ ನದಿಗಳಿಂದ ಅನಿಯಂತ್ರಿತವಾಗಿ ನೀರು ಹರಿವನ್ನು ಪಡೆಯುತ್ತದೆ. ಪಾಕಿಸ್ತಾನವು ಸಿಂಧೂ, ಝೀಲಂ ಮತ್ತು ಚೆನಾಬ್ ಸೇರಿದಂತೆ ‘ಪಶ್ಚಿಮ ನದಿಗಳ’ ನೀರಿನ ಹರಿವನ್ನು ಪಡೆಯುವ ಹಕ್ಕು ಹೊಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್...

ಸಿಜೆಪಿ ಪ್ರತಿಭಟನೆ ಯಶಸ್ವಿ; 40 ಸಾವಿರ ಅರೆಸೇನಾ ಯೋಧರ ನಿಯೋಜನೆಯೇ ಸಾಕ್ಷಿ:‌ ಪ್ರಶಾಂತ್ ಕಿಶೋರ್

ಭಾರತದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆಕೊಟ್ಟಿದ್ದ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳು, ಮಹಿಳೆಯರ ಮೇಲೆ ಹಲ್ಲೆ ಮಾಡಿದ ಹಿಂದೂ ರಕ್ಷಾ ದಳದ ನಾಲ್ವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

NTA ಒಂದು ‘ಖಾಲಿ ಸಂಸ್ಥೆ’, ಮೋದಿ ಸರ್ಕಾರ ಅಹಂಕಾರ ಬಿಟ್ಟು ವರದಿ ಪರಿಗಣಿಸಲಿ: ಕಾಂಗ್ರೆಸ್

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ‌ (ಎನ್‌ಟಿಎ) ಮತ್ತು ಶಿಕ್ಷಣ ಸಚಿವಾಲಯದಲ್ಲಿ ಗಂಭೀರ ಸ್ವರೂಪದ...