ಪ್ರವಾಹ ಕಾರ್ಯಾಚರಣೆಗೆ ವಿದೇಶಿ ರಕ್ಷಣಾ ಪಡೆಗಳು ನಮಗೆ ಬೇಡ, ನಮ್ಮವರೇ ಸಮರ್ಥರು: ನೇಪಾಳ ಪ್ರಧಾನಿ

Date:

ಭೀಕರ ದಿಢೀರ್ ಪ್ರವಾಹದಿಂದಾಗಿ ನೇಪಾಳದಲ್ಲಿ 469ಕ್ಕೂ ಹೆಚ್ಚು ಮಂದಿ ಮೃತಪಟ್ಟು, ನೂರಾರು ಜನರು ನಾಪತ್ತೆಯಾಗಿದ್ದರೂ, ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಲು ಮುಂದಾದ ವಿವಿಧ ದೇಶಗಳ ಪ್ರಸ್ತಾವನೆಯನ್ನು ನೇಪಾಳ ಸರ್ಕಾರ ತಿರಸ್ಕರಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಸಲು ನಮ್ಮ ಭದ್ರತಾ ಪಡೆಗಳೇ ಸಮರ್ಥವಾಗಿವೆ ಹಾಗೂ ನೇಪಾಳದ ಭದ್ರತಾ ಏಜೆನ್ಸಿಗಳೇ ಈ ಕಾರ್ಯಾಚರಣೆಯ ನೇತೃತ್ವ ವಹಿಸಲಿವೆ ಎಂದು ಬಾಲೇಂದ್ರ ಶಾ ನೇತೃತ್ವದ ಸರ್ಕಾರ ಸ್ಪಷ್ಟಪಡಿಸಿದೆ.

- Advertisement -

ನೇಪಾಳ-ಚೀನಾ ಗಡಿಯ ಭೋಟೆಕೋಶಿ ಮತ್ತು ತ್ರಿಶೂಲಿ ನದಿ ಪಾತ್ರಗಳಲ್ಲಿ ಬುಧವಾರ ಸಂಭವಿಸಿದ ಪ್ರವಾಹದಿಂದಾಗಿ ಅಪಾರ ಹಾನಿಯುಂಟಾಗಿದ್ದು, ಮಣ್ಣು ಮತ್ತು ಅವಶೇಷಗಳಡಿ ಸಿಲುಕಿರುವವರಿಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ. ಈ ನಡುವೆ, ಭಾರತ, ಚೀನಾ, ಅಮೆರಿಕ, ಬ್ರಿಟನ್, ಜಪಾನ್, ದಕ್ಷಿಣ ಕೊರಿಯಾ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಸೇರಿದಂತೆ ಹಲವು ರಾಷ್ಟ್ರಗಳು ಹಾಗೂ ಅಂತರರಾಷ್ಟ್ರೀಯ ಸಂಸ್ಥೆಗಳು ತಮ್ಮ ರಕ್ಷಣಾ ಪಡೆಗಳನ್ನು ಕಳುಹಿಸಿಕೊಡುವ ಪ್ರಸ್ತಾವನೆ ಇಟ್ಟಿದ್ದವು. ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ ನಾಪತ್ತೆಯಾಗಿರುವ ಕಾರಣ, ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಯನ್ನು (NDRF) ನಿಯೋಜಿಸಲು ಭಾರತವೂ ಅನುಮತಿ ಕೋರಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಆದರೆ, “ರಕ್ಷಣಾ ಕಾರ್ಯಾಚರಣೆಗೆ ನಮಗೆ ಬೇರೆ ದೇಶಗಳ ನೆರವು ಅಗತ್ಯವಿಲ್ಲ” ಎಂದು ಹೇಳುವ ಮೂಲಕ ವಿದೇಶಾಂಗ ಸಚಿವಾಲಯವು ಎಲ್ಲ ಪ್ರಸ್ತಾವನೆಗಳನ್ನು ನಿರಾಕರಿಸಿದೆ. 2015ರ ಭೂಕಂಪದ ಸಮಯದಲ್ಲಿ ಹಲವಾರು ವಿದೇಶಿ ರಕ್ಷಣಾ ತಂಡಗಳು ಒಟ್ಟಿಗೆ ಆಗಮಿಸಿದ್ದರಿಂದ ಸಮನ್ವಯ ಮತ್ತು ನಿರ್ವಹಣೆಯ ಕೊರತೆ ತೀವ್ರವಾಗಿ ಕಾಡಿತ್ತು. ಈ ಹಿಂದಿನ ಅನುಭವದ ಹಿನ್ನೆಲೆಯಲ್ಲಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ವಿವರಿಸಲಾಗಿದೆ.

ವಿದೇಶಿ ರಕ್ಷಣಾ ಪಡೆಗಳ ಬದಲಾಗಿ, ಒಂದೇ ವ್ಯವಸ್ಥೆಯ ಮೂಲಕ ಆರ್ಥಿಕ ನೆರವು ಒದಗಿಸುವಂತೆ ನೇಪಾಳ ಮನವಿ ಮಾಡಿದೆ. ಭವಿಷ್ಯದಲ್ಲಿ ಪುನರ್ವಸತಿ ಮತ್ತು ಪುನರ್ನಿರ್ಮಾಣದ ಹಂತದಲ್ಲಿ ಅಂತಾರಾಷ್ಟ್ರೀಯ ಬೆಂಬಲವನ್ನು ಪಡೆಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರವಾಹದ ತೀವ್ರತೆ ಭಯಾನಕವಾಗಿದ್ದು, ಶುಕ್ರವಾರದ ವರೆಗಿನ ಮಾಹಿತಿ ಪ್ರಕಾರ 469 ಜನರು ಸಾವನ್ನಪ್ಪಿದ್ದಾರೆ ಹಾಗೂ 1,545 ಜನರನ್ನು ರಕ್ಷಿಸಲಾಗಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರದ ದತ್ತಾಂಶಗಳ ಪ್ರಕಾರ, 28 ಪೊಲೀಸ್ ಸಿಬ್ಬಂದಿ ಸೇರಿದಂತೆ ಸುಮಾರು 1,000 ಜನರು ಇನ್ನೂ ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಗಾಗಿ 4,348 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ರಸುವಾ ಭಾಗದಲ್ಲಿ 644, ನುವಾಕೋಟ್‌ನಲ್ಲಿ 898 ಮತ್ತು ಧಾದಿಂಗ್‌ನಲ್ಲಿ ಮೂವರನ್ನು ರಕ್ಷಿಸಲಾಗಿದೆ.

ಪ್ರವಾಹದಲ್ಲಿ ನಾಪತ್ತೆಯಾದವರಲ್ಲಿ ವಿದೇಶಿಗರೂ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ‘ದ ಕಾಠ್ಮಂಡು ಪೋಸ್ಟ್’ ವರದಿಯ ಪ್ರಕಾರ, 178 ಭಾರತೀಯರು, 65 ಅಮೆರಿಕನ್ನರು, 51 ಮಲೇಷಿಯನ್ನರು, 53 ಉಕ್ರೇನಿಯನ್ನರು, 33 ಬ್ರಿಟನ್ ಪ್ರಜೆಗಳು, 35 ಆಸ್ಟ್ರೇಲಿಯನ್ನರು ಮತ್ತು 25 ಕೆನಡಿಯನ್ನರು ಸೇರಿದಂತೆ ಹಲವಾರು ದೇಶಗಳ ಪ್ರಜೆಗಳು ನಾಪತ್ತೆಯಾಗಿದ್ದಾರೆ. ಈ ಪೈಕಿ ಕನಿಷ್ಠ 100ಕ್ಕೂ ಹೆಚ್ಚು ಚೀನಾ ಪ್ರಜೆಗಳು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಚೀನಾ ಅಧಿಕಾರಿಗಳು ತಿಳಿಸಿದ್ದಾರೆ.

ಈ ನಡುವೆಯೂ, ಅಂತಾರಾಷ್ಟ್ರೀಯ ಆರ್ಥಿಕ ಮತ್ತು ಮಾನವೀಯ ನೆರವನ್ನು ನೇಪಾಳ ಸ್ವಾಗತಿಸಿದ್ದು, ಅಮೆರಿಕ 5 ಲಕ್ಷ ಡಾಲರ್ (ಸುಮಾರು 4.2 ಕೋಟಿ ರೂ.) ನೆರವು ಘೋಷಿಸಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ತುರ್ತು ವೈದ್ಯಕೀಯ ಸಾಮಗ್ರಿಗಳನ್ನು ರವಾನಿಸಿದೆ. ಸಂತ್ರಸ್ತ ವಿದೇಶಿ ಪ್ರಜೆಗಳಿಗೆ ಮಾಹಿತಿ, ರಕ್ಷಣಾ ಕಾರ್ಯದ ಸಮನ್ವಯ ಮತ್ತು ರಾಯಭಾರಿ ನೆರವು ಒದಗಿಸಲು ವಿದೇಶಾಂಗ ಸಚಿವಾಲಯವು ‘ತುರ್ತು ನಿಯಂತ್ರಣ ಕೊಠಡಿ’ಯನ್ನು ಸ್ಥಾಪಿಸಿ ಕಾರ್ಯಾಚರಣೆ ಚುರುಕುಗೊಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...