ಕೇಜ್ರಿವಾಲ್ ಬಂಧನದ ಬಗ್ಗೆ ಅಮೆರಿಕ-ಜರ್ಮನಿ ಹೇಳಿದ್ದೇನು? ಕೇಂದ್ರ ಸರ್ಕಾರ ಸಿಟ್ಟಾಗಿದ್ದೇಕೆ?

Date:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಬಂಧನದ ವರದಿಗಳನ್ನು ಅಮೆರಿಕ ನಿಕಟವಾಗಿ ಗಮನಿಸುತ್ತಿದ್ದು, ನಾವು ನ್ಯಾಯೋಚಿತ ಹಾಗೂ ಪಾರದರ್ಶಕ ಪ್ರಕ್ರಿಯೆಯನ್ನು ಪ್ರೋತ್ಸಾಹಿಸುತ್ತೇವೆ ಎಂದು ಅಮೆರಿಕದ ವಕ್ತಾರರು ಹೇಳಿಕೆ ನೀಡಿದ್ದಾರೆ.

ಕೇಜ್ರಿವಾಲ್‌ ಬಂಧನದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಭುಗಿಲೆದ್ದಿರುವ ಪ್ರತಿಭಟನೆಗಳ ನಂತರ ಇತ್ತೀಚಿಗಷ್ಟೆ ಜರ್ಮನಿ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೆ ಅಮೆರಿಕ ಕೂಡ ತನ್ನ ಪ್ರತಿಕ್ರಿಯೆ ನೀಡಿದೆ.

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಬಗ್ಗೆ ನಾವು ನ್ಯಾಯೋಚಿತ ಹಾಗೂ ಪಾರದರ್ಶಕ ಪ್ರಕ್ರಿಯೆಯನ್ನು ಪ್ರೋತ್ಸಾಹಿಸುತ್ತೇವೆ ಎಂದು ಅಮೆರಿಕ ವಕ್ತಾರರು ಇಮೇಲ್ ಮಾಡಿದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜರ್ಮನಿ ಹೇಳಿಕೆ ನೀಡಿದ ನಂತರ ಭಾರತದ ಜರ್ಮನಿ ರಾಯಭಾರಿಯನ್ನು ಕರೆಸಿಕೊಂಡಿದ್ದ ಕೆಂದ್ರ ಸರ್ಕಾರ ತನ್ನ ಆಂತರಿಕ ವಿಷಯಗಳಲ್ಲಿ ತಲೆ ಹಾಕಿರುವುದರ ಬಗ್ಗೆ ಪ್ರತಿಭಟನೆ ವ್ಯಕ್ತಪಡಿಸಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಡಿಕೆ ಕದ್ದ ಕಳ್ಳ ಜೈಲಿಗೆ, ಆನೆ ಕದ್ದ ಕಳ್ಳ ಎಲ್ಲಿಗೆ?

ಜರ್ಮನಿಯ ವಿದೇಶಾಂಗ ಇಲಾಖೆಯ ವಕ್ತಾರರಾದ ಸೆಬಾಸ್ಟಿನ್ ಫಿಸ್‌ಚೇರ್‌ ಅವರು, ಕೇಜ್ರಿವಾಲ್‌ರಂತೆ ಯಾರೆ ಆರೋಪಗಳನ್ನು ಎದುರಿಸುತ್ತಿದ್ದರೂ ನ್ಯಾಯೋಚಿತ ಹಾಗೂ ನಿಷ್ಪಕ್ಷಪಾತ ವಿಚಾರಣೆ ನಡೆಸಬೇಕು ಎಂದು ಹೇಳಿದ್ದರು.

”ನಾವು ನ್ಯಾಯಾಂಗ ಸ್ವಾತಂತ್ರ್ಯದ ಸಂಬಂಧಿಸಿದ ಮಾನದಂಡಗಳನ್ನು ನಿರೀಕ್ಷಿಸುತ್ತೇವೆ ಹಾಗೂ ಈ ಪ್ರಕರಣದಲ್ಲಿ ಸಾಮಾನ್ಯ ಪ್ರಜಾಸತ್ತಾತ್ಮಕ ತತ್ವಗಳನ್ನು ಅಳವಡಿಸಬೇಕೆಂದು ಭಾವಿಸುತ್ತೇವೆ” ಎಂದು ಹೇಳಿದ್ದರು.

ಈ ಹೇಳಿಕೆಯ ನಂತರ ಭಾರತ ಸರ್ಕಾರವು ಜರ್ಮನಿ ರಾಯಭಾರಿ ಕಚೇರಿಯ ಉಪ ಮುಖ್ಯಸ್ಥರಾದ ಜಾರ್ಜ್‌ ಎಂಜ್ವೇಲಿಯರ್‌ ಅವರನ್ನು ಕರೆಸಿಕೊಂಡು ತೀವ್ರವಾಗಿ ಪ್ರತಿಭಟನೆ ವ್ಯಕ್ತಪಡಿಸಿತ್ತು.

”ನಾವು ನಮ್ಮ ನ್ಯಾಯಾಂಗ ಪ್ರಕ್ರಿಯೆಯ ಆಂತರಿಕ ವ್ಯವಹಾರಗಳಲ್ಲಿ ಮಧ್ಯಸ್ಥಿಕೆ ವಹಿಸುವುದು ಹಾಗೂ ನಮ್ಮ ನ್ಯಾಯಾಂಗ ಸ್ವಾತಂತ್ರ್ಯವನ್ನು ದುರ್ಬಲಗೊಳಿಸುವುದನ್ನು ಖಂಡಿಸುತ್ತೇವೆ. ಇಂತಹ ಪಕ್ಷಪಾತದ ಊಹೆಗಳು ಅನಗತ್ಯವಾದವು” ಎಂದು ಭಾರತ ಖಂಡಿಸಿತ್ತು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ತಾರಕ್ ಮೆಹ್ತಾ’ ನಟ ಗುರುಚರಣ್ ಸಿಂಗ್ ನಾಪತ್ತೆ; ಅಪಹರಣ ಪ್ರಕರಣ ದಾಖಲು

ಅತ್ಯಂತ ಜನಪ್ರಿಯ ಭಾರತೀಯ ಟಿವಿ ಶೋ ಆದ 'ತಾರಕ್ ಮೆಹ್ತಾ ಕಾ...

2ನೇ ಹಂತದ ಚುನಾವಣೆ | ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು; ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಗಿದಿದೆ. 13 ರಾಜ್ಯಗಳ...

ಅಮೆರಿಕಾ | ಕುತ್ತಿಗೆ ಮೇಲೆ ಕಾಲಿಟ್ಟು ಪೊಲೀಸರ ದೌರ್ಜನ್ಯ; ಕಪ್ಪು ವರ್ಣೀಯ ಸಾವು

2020ರಲ್ಲಿ ಜಾರ್ಜ್ ಫ್ಲಾಯ್ಡ್ ಹತ್ಯೆಯ ಕಹಿ ಘಟನೆ ಮಾಸುವ ಮುನ್ನವೇ ಅಮೆರಿಕಾದಲ್ಲಿ...