ಮಾಸ್ಕೋ ಕಾರ್ ಬಾಂಬ್ ಸ್ಫೋಟದಲ್ಲಿ ರಷ್ಯಾದ ಜನರಲ್ ಫನಿಲ್ ಸರ್ವರೋವ್ ಸಾವು

Date:

ದಕ್ಷಿಣ ಮಾಸ್ಕೋದಲ್ಲಿ ನಡೆದ ಕಾರ್ ಬಾಂಬ್ ಸ್ಫೋಟದಲ್ಲಿ ರಷ್ಯಾದ ಹಿರಿಯ ಮಿಲಿಟರಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ರಷ್ಯಾ ಸೇನೆಯ ಜನರಲ್ ಫನಿಲ್ ಸರ್ವರೋವ್ ಸೋಮವಾರ ಬೆಳಿಗ್ಗೆ ಯಾಸೆನೆವೊ ಜಿಲ್ಲೆಯಲ್ಲಿ ಸ್ಫೋಟ ಸಂಭವಿಸಿದಾಗ ಸಾವನ್ನಪ್ಪಿದ್ದಾರೆ ಎಂದು ರಷ್ಯಾ ಹೇಳಿಕೊಂಡಿದೆ.

- Advertisement -

ಫನಿಲ್ ಸರ್ವರೋವ್ (56) ರಷ್ಯಾದ ಸಶಸ್ತ್ರ ಪಡೆಗಳ ಜನರಲ್ ಸ್ಟಾಫ್‌ನ ಕಾರ್ಯಾಚರಣಾ ತರಬೇತಿ ನಿರ್ದೇಶನಾಲಯದ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಇದನ್ನು ಓದಿದ್ದೀರಾ? ಉಕ್ರೇನ್‌-ರಷ್ಯಾ ಸಂಘರ್ಷ | ಮಾತುಕತೆ ವಿಫಲ: ರಷ್ಯಾ ಡ್ರೋನ್ ದಾಳಿಗೆ ಉಕ್ರೇನ್‌ನ 9 ಮಂದಿ ಬಲಿ

“ಕೊಲೆಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಹಲವು ಆಯಾಮಗಳಲ್ಲಿ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಉಕ್ರೇನ್ ಈ ದಾಳಿ ನಡೆಸಿರುವ ಬಗ್ಗೆಯೂ ವಿಚಾರಣೆ ನಡೆಯುತ್ತಿದೆ” ಎಂದು ರಷ್ಯಾದ ತನಿಖಾ ಸಮಿತಿಯ ಅಧಿಕೃತ ವಕ್ತಾರ ಸ್ವೆಟ್ಲಾನಾ ಪೆಟ್ರೆಂಕೊ ಹೇಳಿದ್ದಾರೆ.

ಕಾರಿನ ಅಡಿಯಲ್ಲಿ ಸುಧಾರಿತ ಸ್ಫೋಟಕ ಇರಿಸಲಾಗಿತ್ತು. ಕಾರು ಚಲಿಸಲು ಪ್ರಾರಂಭಿಸಿದ ಸ್ವಲ್ಪ ಸಮಯದ ನಂತರ ಸ್ಫೋಟಗೊಂಡಿದೆ ಎಂದು ಉಕ್ರೇನ್ ನ್ಯಾಷನಲ್ ನ್ಯೂಸ್ ವರದಿ ಮಾಡಿದೆ.

ರಷ್ಯಾ ಉಕ್ರೇನ್‌ ನಡುವೆ ಯುದ್ಧ ತೀವ್ರಗೊಳ್ಳುತ್ತಿರುವ ನಡುವೆ ಈ ಹತ್ಯೆ ನಡೆದಿದೆ. ಕಳೆದ ವಾರದಲ್ಲಿ ರಷ್ಯಾ ಸುಮಾರು 1,300 ಡ್ರೋನ್‌ ದಾಳಿ, ಸುಮಾರು 1,200 ಬಾಂಬ್‌ ದಾಳಿ ನಡೆಸಿದೆ. ಒಂಬತ್ತು ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತಿಳಿಸಿದ್ದಾರೆ. ಹಾಗೆಯೇ ಯುದ್ಧ ಅಂತ್ಯಗೊಳಿಸುವ ನಿಟ್ಟಿನಲ್ಲಿ ಉಕ್ರೇನ್ ಮತ್ತು ಯುನೈಟೆಡ್ ಸ್ಟೇಟ್ಸ್ ಮಾತುಕತೆಗಳನ್ನು ಮುಂದುವರಿಸುತ್ತಿವೆ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2026ರ ನೊಬೆಲ್ ಸಾಹಿತ್ಯ ಪ್ರಶಸ್ತಿ: ಕೆನಡಾದ ಖ್ಯಾತ ಕವಯಿತ್ರಿ ‘ಆನ್ ಕಾರ್ಸನ್’ ಮುಡಿಗೇರಿದ ಗರಿ

ಸಾಹಿತ್ಯ ಲೋಕದ ಅತ್ಯಂತ ಪ್ರತಿಷ್ಠಿತ ಗೌರವವಾದ 2026ನೇ ಸಾಲಿನ 'ನೊಬೆಲ್ ಸಾಹಿತ್ಯ...

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...

ಗಾಜಾ ನರಮೇಧ : ಪ್ಯಾಲೆಸ್ತೀನಿಯನ್ ಪಟ್ಟಣಗಳ ನಾಶವನ್ನು ತೋರಿಸುವ ಉಪಗ್ರಹಚಿತ್ರಗಳು

ಜೆರುಸಲೇಮ್: ಕಳೆದ ವರ್ಷ ಇಸ್ರೇಲ್–ಹಮಾಸ್ ಕದನ ವಿರಾಮ ಒಪ್ಪಂದ ಜಾರಿಯಾದ ಬಳಿಕವೂ...