ಇಸ್ರೇಲ್‌ನಲ್ಲಿ ಭೀಕರ ಕಾಡ್ಗಿಚ್ಚು | ಸ್ವಂತ ವಾಹನಗಳನ್ನು ಹೆದ್ದಾರಿಯಲ್ಲೇ ಬಿಟ್ಟು ಜೀವ ರಕ್ಷಿಸಿಕೊಳ್ಳುತ್ತಿರುವ ಜನ!

Date:

ಇಸ್ರೇಲ್‌ನ ಜೆರುಸಲೇಮ್‌ನಲ್ಲಿ ಭಾರೀ ಕಾಡ್ಗಿಚ್ಚು ಸಂಭವಿಸಿದ್ದು, ತೀವ್ರ ಬಿಸಿಲು ಹಾಗೂ ಗಾಳಿಯಿಂದಾಗಿ ಬೆಂಕಿ ವ್ಯಾಪಕವಾಗಿ ಹರಡುತ್ತಿದೆ. ಈ ನಡುವೆ ರಾಷ್ಟ್ರೀಯ ಹೆದ್ದಾರಿಗಳಿಗೂ ಬೆಂಕಿ ವ್ಯಾಪಿಸುತ್ತಿದ್ದು, ಜನರು ತಮ್ಮ ಸ್ವಂತ ವಾಹನಗಳನ್ನು ಹೆದ್ದಾರಿಯಲ್ಲೇ ಬಿಟ್ಟು ಜೀವ ರಕ್ಷಿಸಿಕೊಳ್ಳುತ್ತಿರುವುದಾಗಿ ವರದಿಯಾಗಿದೆ.

- Advertisement -

ಸುಮಾರು 200ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳು ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಶ್ರಮದಲ್ಲಿದೆ. ಹಾಗೆಯೇ 12ಕ್ಕೂ ಹೆಚ್ಚು ಏರ್ ಕ್ರಾಫ್ಟ್‌ಗಳು ಕೂಡ ಬೆಂಕಿ ನಂದಿಸುವ ಕೆಲಸದಲ್ಲಿ ನಿರತವಾಗಿದೆ. ಎರಡನೇ ದಿನವೂ ಬೆಂಕಿಯನ್ನು ಸಂಪೂರ್ಣ ನಂದಿಸುವ ಸಾಧ್ಯವಾಗಿಲ್ಲ ಮತ್ತು ಹಲವು ರಾಷ್ಟ್ರೀಯ ಹೆದ್ದಾರಿಗಳನ್ನು ಮುಚ್ಚಲಾಗಿದೆ ಎಂದು ವರದಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಈ ನಡುವೆ ಬೆಂಕಿ ಅನಾಹುತಕ್ಕೆ ಸಂಬಂಧಿಸಿದಂತೆ 18 ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನ ಮಂತ್ರಿ ನೆತನ್ಯಾಹು ಹೇಳಿದ್ದಾರೆ. ಏಪ್ರಿಲ್ 30 ರಂದು ಜೆರುಸಲೇಮ್ ಮತ್ತು ಟೆಲ್ ಅವಿವ್ ಪ್ರಧಾನ ರಸ್ತೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. 23 ಮಂದಿ ಗಾಯಗೊಂಡಿದ್ದಾರೆ ಎಂದು ಕೂಡ ವರದಿಯಾಗಿದೆ.

ಜೆರುಸಲೆಮ್ ಹೊರವಲಯದಲ್ಲಿ ಬುಧವಾರ ಭಾರೀ ಕಾಡ್ಗಿಚ್ಚುಗಳು ಉಂಟಾಗುತ್ತಿದ್ದಂತೆಯೇ, ಇಸ್ರೇಲ್ ಅಧಿಕಾರಿಗಳು ಕೇವಲ 24 ಗಂಟೆಗಳಲ್ಲಿ ಸಾವಿರಾರು ನಿವಾಸಿಗಳನ್ನು ಸ್ಥಳಾಂತರಿಸಿದ್ದಾರೆ. ಹಲವಾರು ಮಂದಿ ಗಂಭೀರಾಗಿ ಗಾಯಗೊಂಡಿದ್ದಾರೆ. ಸುತ್ತಮುತ್ತಲಿನ ಬೆಟ್ಟಗಳ ತುದಿಯಲ್ಲಿ ಹಾಗೂ ಹೆದ್ದಾರಿಗಳ ಮೇಲೆ ದಟ್ಟವಾದ ಹೊಗೆ ಆವರಿಸಿಕೊಂಡಿದೆ. ಹೀಗಾಗಿ, ಅನೇಕ ಮಂದಿ ತಮ್ಮ ಸ್ವಂತ ವಾಹನಗಳನ್ನು ಬಿಟ್ಟು ಜ್ವಾಲೆಯಿಂದ ತಪ್ಪಿಸಿ ಓಡಿಹೋಗುತ್ತಿರುವುದು ಕಂಡುಬಂದಿದೆ. ರಕ್ಷಣಾ ಮತ್ತು ಅಗ್ನಿಶಾಮಕ ದಳಗಳು ಕಾಡಿಚ್ಚನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿವೆ.

ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಡ್ಗಿಚ್ಚಿನ ಪರಿಸ್ಥಿತಿಯನ್ನು ‘ರಾಷ್ಟ್ರೀಯ ತುರ್ತುಸ್ಥಿತಿ’ ಎಂದು ಘೋಷಿಸಿದ್ದಾರೆ. ಕಾಡ್ಗಿಚ್ಚಿನ ಪರಿಣಾಮವಾಗಿ ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಗಾಯಗೊಂಡಿರುವ ಸುಮಾರು 23 ಜನರಿಗೆ ಚಿಕಿತ್ಸೆ ನೀಡಿರುವುದಾಗಿ ಎಂಡಿಎ ಹೇಳಿದೆ. ಗಾಯಾಳುಗಳಲ್ಲಿ ಇಬ್ಬರು ಗರ್ಭಿಣಿಯರು ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ ಎಂದು ತಿಳಿದು ಬಂದಿದೆ.

“ನಾವು ರಾಷ್ಟ್ರೀಯ ತುರ್ತುಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಜೀವಗಳನ್ನು ಉಳಿಸಲು ಮತ್ತು ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಸಂಪನ್ಮೂಲಗಳನ್ನು ಸಜ್ಜುಗೊಳಿಸುತ್ತಿದ್ದೇವೆ. ಸುಮಾರು ಮೂರು ಸಾವಿರ ಎಕರೆ ಭೂಮಿಗೆ ಬೆಂಕಿ ವ್ಯಾಪಿಸಿದೆ. ಗಾಳಿಯಿಂದಾಗಿ ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದೆ. ಹೀಗಾಗಿ, ಅಂತಾರಾಷ್ಟ್ರೀಯ ನೆರವಿಗೂ ವಿನಂತಿಸಿದ್ದೇವೆ” ಎಂದು ರಕ್ಷಣಾ ಸಚಿವ ಇಸ್ರೇಲ್ ಕಾಟ್ಝ್ ತಮ್ಮ ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಸ್ರೇಲ್ ವಿದೇಶಾಂಗ ಸಚಿವಾಲಯವು ಗ್ರೀಸ್, ಸೈಪ್ರಸ್, ಪ್ರೊಯೇಷಿಯಾ, ಇಟಲಿ ಮತ್ತು ಬಲ್ಗೇರಿಯಾ ಸೇರಿದಂತೆ ಹತ್ತಿರದ ದೇಶಗಳನ್ನು ಸಹಾಯಕ್ಕಾಗಿ ಸಂಪರ್ಕಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಬೆಂಕಿಯನ್ನು ನಂದಿಸುವ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಇಟಲಿ ಮತ್ತು ಪ್ರೊಯೇಷಿಯಾದಿಂದ ಮೂರು ವಿಮಾನಗಳು ಶೀಘ್ರದಲ್ಲೇ ಬರಲಿವೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ತಿಳಿಸಿದೆ. ಈ ನಡುವೆ ಇಸ್ರೇಲ್‌ನ ಹಲವು ಕಡೆಗಳಲ್ಲಿ ‘ಸ್ಯಾಂಡ್ ಸ್ಟೋರ್ಮ್‌’ ಕೂಡ ಅಪ್ಪಳಿಸಿರುವುದಾಗಿ ವರದಿಯಾಗಿದೆ.

fire3
fire2
fire 8
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...

ಮುಳುಗುತ್ತಿರುವ ಬ್ಯಾಂಕಾಕ್: 50 ಜಿಲ್ಲೆಗಳಲ್ಲಿ ‘ವಿಪತ್ತು’ ಘೋಷಣೆ, ಸ್ತಬ್ಧಗೊಂಡ ಜನಜೀವನ

ಸತತ ಮಳೆಯಿಂದಾಗಿ ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ಅಕ್ಷರಶಃ ಜಲಾವೃತಗೊಂಡಿದ್ದು, ನಗರದ ಎಲ್ಲಾ...