ಭಾರತ ಭಯೋತ್ಪಾದನೆಯ ಬಗ್ಗೆ ಯಾವುದೇ ಸಹಿಷ್ಣುತೆಯನ್ನು ಹೊಂದಿಲ್ಲ. ಭಯೋತ್ಪಾದಕರು ಮತ್ತು ಅವರ ಬೆಂಬಲಿಗರ ನಡುವೆ ವ್ಯತ್ಯಾಸವಿಲ್ಲ ಎಂದು ಫ್ರಾನ್ಸ್‌ನಲ್ಲಿ ಭಾರತೀಯ ನಿಯೋಗ ಹೇಳಿದೆ.
ಭಯೋತ್ಪಾದನೆಯ ವಿರುದ್ಧ ಭಾರತದ ನಿಲುವನ್ನು ಪ್ರತಿಪಾದಿಸಲು ಮೇ25ರಂದು ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ನೇತೃತ್ವದ ಸರ್ವಪಕ್ಷ ನಿಯೋಗವು ಫ್ರಾನ್ಸ್‌ಗೆ ಭೇಟಿ ನೀಡಿದೆ. ಮೇ 27ರವರೆಗೆ ಫ್ರಾನ್ಸ್‌ನಲ್ಲಿರಲಿದೆ. ಅಲ್ಲಿ ನಡೆದ ಸರಣಿ ಕಾರ್ಯಕ್ರಮಗಳ ಬಗ್ಗೆ ಫ್ರಾನ್ಸ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ಹಂಚಿಕೊಂಡಿದೆ.
ಇದನ್ನು ಓದಿದ್ದೀರಾ? ದೆಹಲಿ ನ್ಯಾಯಮೂರ್ತಿ ಬಂಗಲೆ; ಭರ್ತಿ ಚೀಲಗಳ ನಗದಿಗೆ ಬೆಂಕಿ ಬಿದ್ದ ಕತೆಯೇನು?
ಪ್ಯಾರಿಸ್ ಮೂಲದ ವಿವಿಧ ಚಿಂತಕರನ್ನು ಭಾರತೀಯ ಸರ್ವಪಕ್ಷ ನಿಯೋಗವು ಭೇಟಿಯಾಗಿದೆ. ಅವರೊಂದಿಗೆ ಭಯೋತ್ಪಾದನೆಯ ವಿರುದ್ಧ ಭಾರತದ ಬಲವಾದ, ಸ್ಪಷ್ಟ ಸಂದೇಶದ ಬಗ್ಗೆ ಮತ್ತು ಭಯೋತ್ಪಾದನೆಯು ಜಗತ್ತಿಗೆ ಒಡ್ಡಿದ ಸವಾಲಿನ ಬಗ್ಗೆ ಚರ್ಚಿಸಿದರು.
ಏಪ್ರಿಲ್ 22ರಂದು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಪಹಲ್ಗಾಮ್‌ನಲ್ಲಿ ನಾಗರಿಕರ ಮೇಲೆ ದಾಳಿ ನಡೆಸಿ 26 ಪ್ರವಾಸಿಗರ ಹತ್ಯೆ ಮಾಡಿದೆ. ಇದಕ್ಕೆ ಪ್ರತೀಕಾರವಾಗಿ ಮೇ 7ರಂದು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಭಾರತೀಯ ಸೇನೆ ನಡೆಸಿದೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿದೆ. ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಉಗ್ರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ 100ಕ್ಕೂ ಅಧಿಕ ಭಯೋತ್ಪಾದಕರ ಹತ್ಯೆ ಮಾಡಲಾಗಿದೆ. ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ ಕದನ ವಿರಾಮ ಒಪ್ಪಂದ ನಡೆದಿದೆ.
ಇದನ್ನು ಓದಿದ್ದೀರಾ? ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಅಭಿಯಾನ; ಶಶಿ ತರೂರ್ ನೇತೃತ್ವದ ಸರ್ವಪಕ್ಷ ನಿಯೋಗ ರಚನೆ
ಇದಾದ ಬಳಿಕ ಭಾರತವು ಭಯೋತ್ಪಾದನೆ ವಿರುದ್ಧವಾಗಿ ಕಾಂಗ್ರೆಸ್ ನಾಯಕ ಶಶಿ ತರೂರ್ ನೇತೃತ್ವದಲ್ಲಿ ಸರ್ವಪಕ್ಷ ನಿಯೋಗ ಸೇರಿದಂತೆ ಒಟ್ಟು ಏಳು ನಿಯೋಗಗಳನ್ನು ರಚಿಸಿದೆ. ಈ ನಿಯೋಗವು ಗಯಾನಾ, ಪನಾಮ, ಕೊಲಂಬಿಯಾ, ಬ್ರೆಜಿಲ್, ಫ್ರಾನ್ಸ್, ಯುಎಸ್ ಸೇರಿದಂತೆ ಹಲವು ದೇಶಗಳಿಗೆ ಭೇಟಿ ನೀಡುತ್ತಿದೆ.
Meeting with Think Tanks
— India in France (@IndiaembFrance) May 26, 2025
The All Party Indian Parliamentary Delegation had an in-depth and interactive discussion with experts from various French think-tanks. The Think-tanks were briefed on India's strong and clear message against terrorism. #IndiaInFrance
Rencontre avec des… pic.twitter.com/l8bPyGBGtc
ಫ್ರಾನ್ಸ್‌ಗೆ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ನೇತೃತ್ವದ ಸರ್ವಪಕ್ಷ ನಿಯೋಗವು ಭೇಟಿ ನೀಡಿದೆ. “ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಮತ್ತು ಅಭಿವೃದ್ಧಿಯನ್ನು ಹಾಳುಮಾಡಲು ಉದ್ದೇಶಪೂರ್ವಕ ಪ್ರಯತ್ನ. ಆಪರೇಷನ್ ಸಿಂಧೂರ ಮೂಲಕ ಭಾರತ ದಿಟ್ಟವಾಗಿ ಪ್ರತಿಕ್ರಿಯಿಸಿದೆ” ಎಂದು ನಿಯೋಗವು ಹೇಳಿದೆ.
ಫ್ರಾನ್ಸ್‌ನ ಚಿಂತಕರೊಂದಿಗೆ ಸಂವಾದ ನಡೆಸಿದ ವಿವರವನ್ನು ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. “ಸರ್ವಪಕ್ಷ ಭಾರತೀಯ ಸಂಸದೀಯ ನಿಯೋಗವು ವಿವಿಧ ಫ್ರೆಂಚ್ ಚಿಂತಕರ ಜೊತೆ ರ್ಚೆಯನ್ನು ನಡೆಸಿದೆ. ಭಯೋತ್ಪಾದನೆಯ ವಿರುದ್ಧ ಭಾರತದ ಬಲವಾದ ಮತ್ತು ಸ್ಪಷ್ಟ ಸಂದೇಶದ ಕುರಿತು ಚಿಂತಕರ ಚಾವಡಿಗೆ ವಿವರಿಸಲಾಗಿದೆ” ಎಂದಿದೆ.
