ವಿಶ್ವ ದಾಖಲೆ | ಟಿ20 ಪಂದ್ಯದಲ್ಲೇ ದ್ವಿಶತಕ ಸಿಡಿಸಿದ ಎಡ್ವರ್ಡ್ಸ್

Date:

ಟಿ20 ಪಂದ್ಯದಲ್ಲಿ 14 ಫೋರ್‌ಗಳು ಮತ್ತು 23 ಸಿಕ್ಸರ್‌ಗಳ ನೆರವಿನೊಂದಿಗೆ 81 ಎಸೆತಗಳನ್ನು ಎದುರಿಸಿ 229 ರನ್‌ಗಳಿರುವ ನೆದರ್​ಲೆಂಡ್​ ತಂಡದ ನಾಯಕ ಸ್ಕಾಟ್​ ಎಡ್ವರ್ಡ್ಸ್ ವಿಶ್ವ ದಾಖಲೆ ಬರೆದಿದ್ದಾರೆ. ಟಿ20 ಇತಿಹಾಸದಲ್ಲಿ ಎಡ್ವರ್ಡ್‌ ಅವರು ಗರಿಷ್ಠ ರನ್‌ಗಳನ್ನು ಕಲೆ ಹಾಕಿದ ಆಟಗಾರನೆಂಬ ಖ್ಯಾತಿಗೆ ಭಾಜನರಾಗಿದ್ದಾರೆ.

- Advertisement -

ಆಸ್ಟ್ರೇಲಿಯಾದಲ್ಲಿ ಗ್ರೇಡ್ ಟಿ20 ಕ್ರಿಕೆಟ್ ಟೂರ್ನಿ ನಡೆಯುತ್ತಿದೆ. ಟೂರ್ನಿಯಲ್ಲಿ ವಿಲಿಯಮ್ಸ್ ಲ್ಯಾಂಡಿಂಗ್ ಎಸ್​ಸಿ ಮತ್ತು ಆಲ್ಟೋನಾ ಸ್ಪೋರ್ಟ್ಸ್ ನಡುವಿನ ಪಂದ್ಯದಲ್ಲಿ ಅಲ್ಟೋನಾ ಸ್ಪೋರ್ಟ್ಸ್‌ ಪರ ಆರಂಭಿಕ ಬ್ಯಾಟರ್‌ಆಗಿ ಎಡ್ವರ್ಡ್‌ ಕಣಕ್ಕಿಳಿದಿದ್ದರು. ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದು, ದ್ವಿಶತಕ ಬಾರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಎಡ್ವರ್ಡ್‌ ಅವರು ಪಂದ್ಯದ ಉದ್ದಕ್ಕೂ 81 ಎಸೆತಗಳನ್ನು ಎದುರಿಸಿದರು. 14 ಫೋರ್‌ಗಳು ಮತ್ತು 23 ಸಿಕ್ಸರ್​ಗಳನ್ನು ಬಾರಿಸುವ ಮೂಲಕ ಅಜೇಯರಾಗಿ 229 ರನ್ ಕಲೆಹಾಕಿದರು.

ಈ ಲೇಖನ ಓದಿದ್ದೀರಾ?: ಬ್ಯಾಂಕ್‌, ವಿಮಾ ಕಂಪನಿಗಳಲ್ಲಿ ಬಿದ್ದಿದೆ ಜನರ 78,000 ಕೋಟಿ ರೂ.; ಈ ಹಣ ಪಡೆಯುವುದು ಹೇಗೆ?

ಈ ಹಿಂದೆ, ಟಿ20ಯಲ್ಲಿ ದ್ವಿಶತಕ ಬಾರಿಸಿದ ದಾಖಲೆ ಸಾಗರ್ ಕುಲ್ಕರ್ಣಿ ಹೆಸರಿನಲ್ಲಿತ್ತು. ಅವರು ಸಿಂಗಾಪುರ್​ನಲ್ಲಿ ನಡೆದ ಟಿ20 ಪಂದ್ಯದಲ್ಲಿ ಮರೀನಾ ಕ್ಲಬ್​ ಪರವಾಗಿ ಬ್ಯಾಟಿಂಗ್‌ ಮಾಡಿ, 56 ಎಸೆತಗಳಲ್ಲಿ 219 ರನ್ ಗಳಿಸಿದ್ದರು. ಇದೀಗ, ಅವರ ದಾಖಲೆಯನ್ನು ಎಡ್ವರ್ಡ್‌ ಮುರಿದಿದ್ದಾರೆ.

ಎಡ್ವರ್ಡ್‌ ಅವರ ದ್ವಿಶತಕದ ನೆರವಿನೊಂದಿಗೆ ಆಲ್ಟೋನಾ ಸ್ಪೋರ್ಟ್ಸ್ ತಂಡವು 20 ಓವರ್​ಗಳಲ್ಲಿ 302 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ವಿಲಿಯಮ್ಸ್ ಲ್ಯಾಂಡಿಂಗ್ ಎಸ್​ಸಿ ತಂಡವು 118 ರನ್​ಗಳಿಗೆ ಆಲೌಟ್ ಆಗುವ ಮೂಲಕ ಹೀನಾಯವಾಗಿ ಸೋಲುಂಡಿತು. ಆಲ್ಟೋನಾ ಸ್ಪೋರ್ಟ್ಸ್ ತಂಡ 186 ರನ್​​ಗಳ ಭರ್ಜರಿ ಜಯ ಸಾಧಿಸಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ ಎಸ್‌ಸಿಒ ಸಾಂಸ್ಕೃತಿಕ ಶೃಂಗ: 2023ರ ನಂತರ ಪಾಕ್ ಸಚಿವರಿಗೆ ಭಾರತದ ಮೊದಲ ಆಹ್ವಾನ

ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) 10 ಸದಸ್ಯ ರಾಷ್ಟ್ರಗಳ ಪ್ರಥಮ 'ನಾಗರಿಕತೆಗಳ...

ಕಿವೀಸ್ ಬಗ್ಗುಬಡಿದ ಭಾರತ: ಅಭಿಷೇಕ್ ಶರ್ಮಾ ಸಿಡಿಲಬ್ಬರದ ಶತಕ, 3-0 ಅಂತರದಲ್ಲಿ ಸರಣಿ ಕೈವಶ

ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿರುವ ಹೆನ್ರಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 27ರಂದು ನಡೆದ ಆತಿಥೇಯ ನ್ಯೂಜಿಲೆಂಡ್...

ಬ್ರಹ್ಮಪುತ್ರ ನದಿಗೆ ಚೀನಾದ ಬೃಹತ್ ಅಣೆಕಟ್ಟು: ಪ್ರವಾಹದ ಅಪಾಯ ಹೆಚ್ಚಳ, ಭಾರತಕ್ಕೂ ಆತಂಕ

ಟಿಬೆಟ್‌ನಲ್ಲಿ ಹರಿಯುವ ಬ್ರಹ್ಮಪುತ್ರ (ಯಾರ್ಲುಂಗ್ ಜಾಂಗ್ಬೋ) ನದಿಗೆ ಚೀನಾ ನಿರ್ಮಿಸುತ್ತಿರುವ ವಿಶ್ವದ...