ಭಾರತೀಯ ಟಿವಿ ಚಾನೆಲ್‌ಗಳ ನಿಷೇಧ ಕೋರಿ ಬಾಂಗ್ಲಾ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ

Date:

ಬಾಂಗ್ಲಾದೇಶದಲ್ಲಿ ನಡೆದ ಪ್ರತಿಭಟನೆಗಳ ಬಗ್ಗೆ ಭಾರತದ ಎಲ್ಲ ಟಿವಿ ಚಾನೆಲ್‌ಗಳು ಪ್ರಚೋದನಕಾರಿ ಸುದ್ದಿಗಳನ್ನು ಪ್ರಸಾರ ಮಾಡಿವೆ. ಕೋಮುದ್ವೇಷ ಬಿತ್ತುತ್ತಿವೆ ಎಂದು ಆರೋಪಿಸಿ, ಬಾಂಗ್ಲಾದಲ್ಲಿ ಭಾರತೀಯ ಟಿವಿ ಚಾನೆಲ್‌ಗಳ ಪ್ರಸಾರವನ್ನು ನಿಷೇಧಿಸುವಂತೆ ಕೋರಿ ಬಾಂಗ್ಲಾ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಲಾಗಿದೆ ಎಂದು ವರದಿಯಾಗಿದೆ.

- Advertisement -

ವಕೀಲ ಎಖ್ಲಾಸ್ ಉದ್ದೀನ್ ಭುಯಾನ್ ಅವರು ಅರ್ಜಿ ಸಲ್ಲಿಸಿದ್ದಾರೆ. ಬಾಂಗ್ಲಾ ಹೈಕೋರ್ಟ್‌ನ ನ್ಯಾಯಮೂರ್ತಿ ಫಾತಿಮಾ ನಜೀಬ್ ಮತ್ತು ಸಿಕ್ದರ್ ಮಹಮುದೂರ್ ರಾಜಿ ಅವರಿರುವ ಪೀಠವು ಅರ್ಜಿಯ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಸ್ವತಃ ಭುಯಾನ್ ಅವರೇ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಸ್ಟಾರ್ ಜಲ್ಶಾ, ಸ್ಟಾರ್ ಪ್ಲಸ್, ಝೀ ಬಾಂಗ್ಲಾ, ರಿಪಬ್ಲಿಕ್ ಬಾಂಗ್ಲಾ ಹಾಗೂ ಇತರ ಎಲ್ಲ ಭಾರತೀಯ ಮೂಲದ ಟಿವಿ ಚಾನೆಲ್‌ಗಳನ್ನು ನಿಷೇಧಿಸಬೇಕು. ಈ ಚಾನೆಲ್‌ಗಳ ಪ್ರಸಾರ ನಿಷೇಧಿಕ್ಕೆ ‘ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ಆಪರೇಷನ್ ಆಕ್ಟ್-2006’ರ ಸೆಕ್ಷನ್ 29ರ ಅಡಿಯಲ್ಲಿ ನಿರ್ದೇಶನ ನೀಡಬೇಕು” ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಭಾರತೀಯ ಚಾನೆಲ್‌ಗಳಲ್ಲಿ ಪ್ರಚೋದನಕಾರಿ ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತಿದೆ. ಬಾಂಗ್ಲಾದೇಶದ ಸಂಸ್ಕೃತಿಯನ್ನು ವಿರೋಧಿಸಿ ಅನಿಯಂತ್ರಿತವಾಗಿ ಸುದ್ದಿಗಳು ಪ್ರಸಾರವಾಗುತ್ತಿವೆ. ಯುವಜನರಲ್ಲಿ ದ್ವೇಷ ಬಿತ್ತುತ್ತಿವೆ. ಈ ಚಾನಲ್‌ಗಳು ಯಾವುದೇ ನಿಯಮಗಳಿಗೆ ಬದ್ಧವಾಗಿಲ್ಲ” ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಅರ್ಜಿಯಲ್ಲಿ, ಬಾಂಗ್ಲಾದೇಶದ ಮಾಹಿತಿ ಸಚಿವಾಲಯ ಮತ್ತು ಗೃಹ ಸಚಿವಾಲಯದ ಕಾರ್ಯದರ್ಶಿಗಳು, ಬಾಂಗ್ಲಾದೇಶ ದೂರಸಂಪರ್ಕ ನಿಯಂತ್ರಣ ಆಯೋಗ (ಬಿಟಿಆರ್‌ಸಿ) ಮತ್ತು ಇತರರನ್ನು ಪ್ರತಿವಾದಿಗಳಾಗಿ ಹೆಸರಿಸಲಾಗಿದೆ.

ಈ ವರದಿ ಓದಿದ್ದೀರಾ?: ಮಹಾರಾಷ್ಟ್ರ | ಬಿಜೆಪಿ ಗೆಲುವಿನಲ್ಲಿ ಆರ್‌ಎಸ್‌ಎಸ್‌ ಪಾತ್ರ; ಕಾಂಗ್ರೆಸ್‌ ಕಲಿಯಬೇಕಾದ ಪಾಠ

ಬಾಂಗ್ಲಾದ ಪ್ರಧಾನಿಯಾಗಿದ್ದ ಶೇಖ್ ಹಸೀನಾ ಅವರನ್ನು ಆಗಸ್ಟ್‌ ತಿಂಗಳಿನಲ್ಲಿ ಪದಚ್ಯುತಗೊಳಿಸಲಾಯಿತು.  ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ರಚನೆಯಾಗಿದೆ. ಯೂನಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭಾರತ ಮತ್ತು ಬಾಂಗ್ಲಾ ನಡುವಿನ ಸಂಬಂಧಗಳು ಹದಗೆಟ್ಟಿವೆ ಎಂದು ಹೇಳಲಾಗುತ್ತಿದೆ.

ಬಾಂಗ್ಲಾದಲ್ಲಿ ಅಸ್ಪಸಂಖ್ಯಾತರಾಗಿರುವ ಹಿಂದುಗಳ ಮೇಲೆ ದಾಳಿಗಳು ನಡೆಯುತ್ತಿವೆ ಎಂದು ಭಾರತೀಯ ಮಾಧ್ಯಮಗಳು ನಿರಂತರವಾಗಿ ಆರೋಪಿಸುತ್ತಿವೆ. ಈ ನಡುವೆ, ಕೋಮುದ್ವೇಷ ಮತ್ತು ಹಿಂಸೆ ಪ್ರಚೋದನೆ ಬಿತ್ತುತ್ತಿರುವ ಆರೋಪದ ಮೇಲೆ ಇಸ್ಕಾನ್‌ ಮಾಜಿ ಸದಸ್ಯ ಚಿನ್ಮೋಯ್ ಕೃಷ್ಣ ದಾಸ್ ನವೆಂಬರ್ 25ರಂದು ಬಾಂಗ್ಲಾ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೂ ಭಾರತೀಯ ಮಾಧ್ಯಮಗಳು ಕೋಮು ಬಣ್ಣ ಬಳಿಯುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...