ಮ್ಯಾನ್ಮಾರ್‌ಗೆ ಯುವಕರ ಕಳ್ಳಸಾಗಣೆ; 300 ಮಂದಿ ರಕ್ಷಣೆ – ಇಬ್ಬರ ಬಂಧನ

Date:

ಭಾರತೀಯ ಯುವಕರನ್ನು ಉದ್ಯೋಗ ಕೊಡಿಸುವ ನೆಪದಲ್ಲಿ ಮ್ಯಾನ್ಮಾರ್‌ಗೆ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಯುವಕರ ಕಳ್ಳಸಾಗಣೆ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

- Advertisement -

ದೆಹಲಿಯ ಬವಾನಾ ನಿವಾಸಿ ಡ್ಯಾನಿಶ್‌ ರಾಜಾ (24) ಮತ್ತು ಫರೀದಾಬಾದ್‌ನ ಹರ್ಷ (30) ಬಂಧಿತ ಆರೋಪಿಗಳು. ಈ ಇಬ್ಬರು ಸೈಬರ್ ಅಪರಾಧ ಎಸಗುವ ಜಾಲದೊಂದಿಗೆ ಸಂಪರ್ಕದಲ್ಲಿದ್ದು, ಯುವಕರನ್ನು ಮ್ಯಾನ್ಮಾರ್‌ಗೆ ಕಳ್ಳಸಾಗಣೆ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಮ್ಯಾನ್ಮಾರ್‌ಗೆ ಯುವಕರನ್ನು ಕಳೆದೊಯ್ದು, ಸೈಬರ್ ಗಲಾಮಗಿರಿಗೆ ತಳ್ಳಲಾಗುತ್ತಿದೆ. ಅವರನ್ನು ಸೈಬರ್ ಅಪರಾಧ ಕೃತ್ಯಗಳಲ್ಲಿ ಬಳಸಿಕೊಳ್ಳಲಾಗುತ್ತಿತ್ತು ಎಂದು ಹೇಳಲಾಗಿದೆ.

ಇತ್ತೀಚೆಗೆ, ಮ್ಯಾನ್ಮಾರ್‌ ಮಿಲಿಟರಿ ಅಧಿಕಾರಿಗಳು ಸೈಬರ್ ವಂಚನೆ ಕೇಂದ್ರದ ಮೇಲೆ ದಾಳಿ ಮಾಡಿ, ಸೈಬರ್‌ ವಂಚನೆ ಜಾಲದಲ್ಲಿ ಸಿಲುಕಿದ್ದ ಅನೇಕ ಭಾರತೀಯರನ್ನು ರಕ್ಷಿಸಿದ್ದಾರೆ. ಈ ಬೆನ್ನಲ್ಲೇ, ದೆಹಲಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

“ಮ್ಯಾನ್ಮಾರ್‌ನಲ್ಲಿ ಸಿಕ್ಕಿಕೊಂಡಿದ್ದ 300ಕ್ಕೂ ಹೆಚ್ಚು ಭಾರತೀಯ ಯುವಕರನ್ನು ರಕ್ಷಿಸಿ, ಭಾರತಕ್ಕೆ ಕರೆತರಲಾಗಿದೆ. ಈ ಎಲ್ಲರನ್ನು ಸೈಬರ್ ವಂಚನೆ ಕೇಂದ್ರಗಳಲ್ಲಿ ಬಲವಂತವಾಗಿ ಕೆಲಸಕ್ಕೆ ಹಚ್ಚಲಾಗಿತ್ತು. ಭಾರತಕ್ಕೆ ಮರಳಿದವರು ನೀಡಿದ ಮಾಹಿತಿ ಮೇಲೆ ಕ್ರಮ/ಕಾರ್ಯಾಚರಣೆಗಳು ನಡೆಯುತ್ತಿವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.

“ಭಾರತಕ್ಕೆ ಮರಳಿದ ಯುವಕರಲ್ಲಿ ಒಬ್ಬರಾದ ಬವಾನಾ ಮೂಲದ ಇಮ್ತಿಯಾಜ್‌ ಬಾಬು ಎಂಬವರು ದೂರು ದಾಖಲಿಸಿದ್ದಾರೆ. ಡೇಟಾ ಎಂಟ್ರಿ ಉದ್ಯೋಗ ಕೊಡಿಸುವ ನೆಪವೊಡ್ಡಿ ತಮ್ಮನ್ನು ಮ್ಯಾನ್ಮಾರ್‌ಗೆ ಕಳ್ಳಸಾಗಣೆ ಮಾಡಿ, ವಂಚಿಸಲಾಗಿದೆ ಎಂಬುದಾಗಿ ಅವರು ವಿವರಿಸಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆತ್ಮಹತ್ಯೆ ಪ್ರಕರಣ: ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಬಾಲಿವುಡ್ ನಟಿ ರಾಖಿ ಸಾವಂತ್‌ಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ. 2010ರ...

ರಷ್ಯಾದ ಇಂಧನದಿಂದ ಭಾರತ ದೂರ ಸರಿಯುವುದು ಅಸಾಧ್ಯ: ಅಮೆರಿಕ

ರಷ್ಯಾದ ತೈಲ ಖರೀದಿಸುವ ರಾಷ್ಟ್ರಗಳ ಮೇಲಿನ ದಿಗ್ಬಂಧನ ಮತ್ತು ಆಮದು ಸುಂಕದ...

ಫುಟ್‌ಪಾತ್ ನಿರ್ಮಿಸದಿದ್ರೆ, ನಾವೇ ಧರಣಿ‌ ಕೂರ್ತೀವಿ; BJP ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ವಾರ್ನಿಂಗ್!

ದೆಹಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಸಮೀಪದ ಮಥುರಾ ರಸ್ತೆಯಲ್ಲಿ ಪಾದಚಾರಿಗಳು...