ರಷ್ಯಾ-ಉಕ್ರೇನ್ ಸಂಘರ್ಷ: ನಿರ್ಬಂಧ ವಿನಾಯಿತಿ ಪುಟಿನ್‌ಗೆ ಟ್ರಂಪ್ ನೀಡಿದ ಬಹುಮಾನ ಎಂದ‌ ಝೆಲೆನ್ಸ್ಕಿ

Date:

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾದ ಮೇಲಿನ ಪ್ರಮುಖ ನಿರ್ಬಂಧಗಳನ್ನು ಸಡಿಲಗೊಳಿಸಿ, ವಿನಾಯಿತಿ ನೀಡುವ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿರುವುದನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತೀವ್ರವಾಗಿ ಖಂಡಿಸಿದ್ದಾರೆ. ಅಮೆರಿಕದ ಈ ನಿರ್ಧಾರವು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ನೀಡಿದ ‘ಬಹುಮಾನ’ದಂತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

- Advertisement -

ಚಳಿಗಾಲ ಹತ್ತಿರವಾಗುತ್ತಿರುವಂತೆಯೇ ಉಕ್ರೇನ್ ದೇಶದ ಲಕ್ಷಾಂತರ ಜನರನ್ನು ವಿದ್ಯುತ್ ಮತ್ತು ಶಾಖದ ಕೊರತೆಯಿಂದ ಸಂಕಷ್ಟಕ್ಕೆ ಈಡುಮಾಡಲು ರಷ್ಯಾ ಸಂಚು ರೂಪಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ಅಮೆರಿಕದ ನಿರ್ಬಂಧಗಳ ವಿನಾಯಿತಿಯಿಂದಾಗಿ ಆಕ್ರಮಣಕಾರಿ ದೇಶದ ಮೇಲಿನ ಒತ್ತಡ ಕಡಿಮೆಯಾಗಲಿದೆ. ಇದು ರಷ್ಯಾಗೆ ಮತ್ತಷ್ಟು ದಾಳಿ ನಡೆಸಲು ಉತ್ತೇಜನ ನೀಡುತ್ತದೆ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

“ಅಮೆರಿಕ ನಿರ್ಬಂಧಗಳನ್ನು ಸಡಿಲಿಸಿದ ದಿನವೇ ರಷ್ಯಾ ಉಕ್ರೇನ್‌ನ 15 ಪ್ರಮುಖ ವಿದ್ಯುತ್ ಉತ್ಪಾದನಾ ಕೇಂದ್ರಗಳ ಮೇಲೆ ಬೃಹತ್ ದಾಳಿ ನಡೆಸಿದೆ. ಈಗಾಗಲೇ ವರ್ಷಗಳಿಂದ ನಡೆಯುತ್ತಿರುವ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದು, ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ರಷ್ಯಾದ ಈ ದಾಳಿಗಳ ನಡುವೆಯೂ ಅಮೆರಿಕದ ಇಂತಹ ನಿರ್ಧಾರ ಬಂದಿರುವುದು ಯುರೋಪಿಯನ್ ಒಕ್ಕೂಟ ಮತ್ತು ಉಕ್ರೇನ್‌ಗೆ ನಿರಾಸೆ ಮೂಡಿಸಿದೆ” ಎಂದಿದ್ದಾರೆ.

ಮತ್ತೊಂದೆಡೆ, ಡೊನಾಲ್ಡ್ ಟ್ರಂಪ್ ಅವರ ಈ ನಿರ್ಧಾರವನ್ನು ರಷ್ಯಾದ ಅಧಿಕಾರಿಗಳು ಸ್ವಾಗತಿಸಿದ್ದು, ಇದನ್ನು ‘ಐತಿಹಾಸಿಕ ಕ್ಷಣ: ಎಂದು ಬಣ್ಣಿಸಿದ್ದಾರೆ. ರಷ್ಯಾದಿಂದ ಜಾಗತಿಕ ಮಾರುಕಟ್ಟೆಗೆ ಡೀಸೆಲ್ ಪೂರೈಕೆಯನ್ನು ಹೆಚ್ಚಿಸುವ ಒಪ್ಪಂದದ ಭಾಗವಾಗಿ ಟ್ರಂಪ್ ಈ ನಿರ್ಬಂಧಗಳನ್ನು ಸಡಿಲಿಸಿದ್ದಾರೆ ಎನ್ನಲಾಗಿದೆ.

ಈ ಬೆಳವಣಿಗೆಗಳ ಮಧ್ಯೆ, ಯುರೋಪಿಯನ್ ಒಕ್ಕೂಟದ ನಾಯಕರು ಉಕ್ರೇನ್‌ಗೆ ತಮ್ಮ ಬೆಂಬಲವನ್ನು ಮುಂದುವರಿಸುವುದಾಗಿ ಮತ್ತು ರಷ್ಯಾದ ಮೇಲಿನ ಒತ್ತಡವನ್ನು ಹೆಚ್ಚಿಸುವುದಾಗಿ ಭರವಸೆ ನೀಡಿದ್ದಾರೆ. ಯುದ್ಧವನ್ನು ನಿಲ್ಲಿಸಲು ರಷ್ಯಾದ ಮೇಲೆ ಜಾಗತಿಕ ಮಟ್ಟದಲ್ಲಿ ನಿರಂತರ ಒತ್ತಡ ಹೇರುವುದು ಅತ್ಯಗತ್ಯ ಎಂದು ಉಕ್ರೇನ್ ಮಿತ್ರರಾಷ್ಟ್ರಗಳಿಗೆ ಮನವಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ ಸಿಗದ ಎಬಿವಿಪಿ ಪಾತ್ರದ ಪ್ರಶ್ನೆಗಳು

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ...

ಶಿವಮೊಗ್ಗ | ಮಾದಕ ದ್ರವ್ಯಗಳ ಸೇವನೆ ವಿರುದ್ದ ಪ್ರತಿಜ್ಞೆಗೆ ಕರೆ

ಮಾದಕ ದ್ರವ್ಯಗಳ ದುರುಪಯೋಗವು ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ...

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ ಸುರಕ್ಷತೆಗೆ ಬೇಕಿದೆ ತುರ್ತು ಕ್ರಮ

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ...