ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

Date:

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ಕೆಂಭಾವಿ ಘಟಕದ ವತಿಯಿಂದ ಪಾದಯಾತ್ರೆ ನಡೆಸಿ ಯಾದಗಿರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

- Advertisement -

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಬಳಿಕ ಡಾ.ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಕಾರ್ಯಕರ್ತರು, ಅಲ್ಲಿಂದ ಉಪತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆ ನಡೆಸಿದರು. ನಂತರ ಉಪತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಕೆಂಭಾವಿ ಪ್ರಮುಖ ವ್ಯಾಪಾರ ಕೇಂದ್ರವಾಗಿದ್ದು, ಸುತ್ತಮುತ್ತಲಿನ ಹಲವು ಗ್ರಾಮಗಳ ಜನರು ವ್ಯಾಪಾರ-ವಹಿವಾಟು ಸೇರಿದಂತೆ ವಿವಿಧ ಅಗತ್ಯಗಳಿಗೆ ಪಟ್ಟಣವನ್ನೇ ಅವಲಂಬಿಸಿದ್ದಾರೆ. ಆದರೆ, ಇಲ್ಲಿ ಅಗ್ನಿಶಾಮಕ ಠಾಣೆ ಇಲ್ಲದ ಕಾರಣ ಬೆಂಕಿ ಅವಘಡ ಸಂಭವಿಸಿದಾಗ ದೂರದ ಸುರಪುರದಿಂದ ಅಗ್ನಿಶಾಮಕ ವಾಹನ ಬರುವವರೆಗೆ ಕಾಯಬೇಕಾದ ಅನಿವಾರ್ಯತೆ ಇದೆ. ಇದರಿಂದ ರೈತರ ಬೆಳೆಗಳು, ಮನೆಗಳು, ಅಂಗಡಿ ಮುಂಗಟ್ಟುಗಳು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಅಪಾರ ನಷ್ಟವಾಗುವ ಆತಂಕವಿದೆ ಎಂದು ಸಂಘಟನೆಯ ಪದಾಧಿಕಾರಿಗಳು ತಿಳಿಸಿದರು.

ಪಟ್ಟಣದ ಸರ್ವೆ ನಂ.512ರಲ್ಲಿ ಸುಮಾರು ಎರಡು ಎಕರೆ ಜಾಗ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಲಭ್ಯವಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇತ್ತೀಚೆಗೆ ದೀಪಾವಳಿ ಸಂದರ್ಭದಲ್ಲಿ ರೈತರ ಹತ್ತಿ ಬೆಳೆಗೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿರುವುದು ಅಗ್ನಿಶಾಮಕ ಠಾಣೆಯ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಜಾಗ ಪರಿಶೀಲಿಸಿ ಶಾಶ್ವತ ಅಗ್ನಿಶಾಮಕ ಠಾಣೆ ಮಂಜೂರು ಮಾಡಬೇಕು. ಠಾಣೆ ನಿರ್ಮಾಣವಾಗುವವರೆಗೆ ತಾತ್ಕಾಲಿಕವಾಗಿ ಅಗ್ನಿಶಾಮಕ ವಾಹನ ಹಾಗೂ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರ ವರ್ಗಾವಣೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಮನವಿ

ಈ ಸಂದರ್ಭದಲ್ಲಿ ಸುರಪುರ ತಾಲೂಕು ಮಹಿಳಾ ಅಧ್ಯಕ್ಷೆ ಸಂಗೀತಾ ಕೋತಿನ, ಭೀಮಬಾಯಿ ಪೂಜಾರಿ, ರೇಣುಕಾ ಆಲೂಗುರು, ಗುರುರಾಜ ಅಂಗಡಿ, ಮೂರ್ತುಜಾ ಸುರಪುರ, ಎಚ್.ಎಂ. ಪಟೇಲ್, ಬಸವರಾಜ ಮಾಳಲಿಕರ್, ಮೈಯೂಬ್ ಮೇಸ್ತ್ರಿ ದಫೇದಾರ್, ಸೋಮನಾಥ ಕೋರಳ್ಳಿ, ಶರಣು ಖಾನಾಪುರ, ಭಾಗೇಶ ನಾಯಕ, ಸಿದ್ಧನಗೌಡ ಬಿರಾದಾರ ಸೇರಿದಂತೆ ವಿವಿಧ ಗ್ರಾಮ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು. ಪಾದಯಾತ್ರೆಯ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಬಂದೋಬಸ್ತ್ ಕಲ್ಪಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಬಸವಣ್ಣನವರ ಅವಹೇಳನ ಖಂಡಿಸಿ ರವಿ ಹಂಜ್ ವಿರುದ್ಧ ದಸಂಸ ಕ್ರಾಂತಿಕಾರಿ ಬಣ ಪ್ರತಿಭಟನೆ

ಬಸವಣ್ಣನವರು ಹಾಗೂ ಶರಣ ಪರಂಪರೆಯ ಕುರಿತು ಅವಹೇಳನಕಾರಿ ಅಂಶಗಳನ್ನು ಒಳಗೊಂಡಿದೆ ಎನ್ನಲಾದ...

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ವಿಜಯಪುರ |ಬಸವ ತತ್ವದ ವಿರುದ್ಧದ ಅಪಪ್ರಚಾರ | ಎಸ್‌ಐಟಿ ತನಿಖೆಗೆ ಆಗ್ರಹ

ಬಸವಣ್ಣನವರ ವಚನಗಳು, ವಿಚಾರಧಾರೆ ಹಾಗೂ ಶರಣ ಚಳವಳಿಯ ಇತಿಹಾಸವನ್ನು ತಿರುಚಿ ಸಮಾಜದಲ್ಲಿ...