ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

Date:

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ ಸಮಾಧಾನ ಸಿಕ್ಕಿದೆ. ರೈತರ ನಿರಂತರ ಹೋರಾಟ ಹಾಗೂ ಒತ್ತಾಯಕ್ಕೆ ಸ್ಪಂದಿಸಿರುವ ಸರ್ಕಾರ, ನಾರಾಯಣಪುರದ ಬಸವಸಾಗರ ಜಲಾಶಯದಿಂದ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ಮೂರು ದಿನಗಳ ಕಾಲ ನೀರು ಹರಿಸಲು ನಿರ್ಧರಿಸಿದೆ.

- Advertisement -

ನವೆಂಬರ್ 24ರಿಂದ 26ರವರೆಗೆ ನೀರು ಬಿಡುಗಡೆಗೆ ಸೂಚನೆ ನೀಡಲಾಗಿದ್ದು, ಎಡದಂಡೆ ಕಾಲುವೆಗೆ 4,000 ಕ್ಯೂಸೆಕ್ ಹಾಗೂ ಬಲದಂಡೆ ಕಾಲುವೆಗೆ 1,000 ಕ್ಯೂಸೆಕ್ ನೀರು ಹರಿಸಲಾಗುತ್ತದೆ. ಈ ಮೂಲಕ ಒಟ್ಟು 1.5 ಟಿಎಂಸಿ ನೀರು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಕಾಲುವೆಗಳಿಗೆ ನವೆಂಬರ್ 30ರವರೆಗೆ ನಿರಂತರವಾಗಿ ನೀರು ಹರಿಸಬೇಕೆಂದು ರೈತಪರ ಸಂಘಟನೆಗಳು ಹಾಗೂ ರೈತ ಮುಖಂಡರು ಹಲವು ದಿನಗಳಿಂದ ಒತ್ತಾಯಿಸುತ್ತಿದ್ದರು. ಈ ಸಂಬಂಧ ರಸ್ತೆ ತಡೆ, ಬಂದ್ ಸೇರಿದಂತೆ ವಿವಿಧ ಹಂತಗಳಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದಿದ್ದರು.
ಆದರೆ ಸದ್ಯಕ್ಕೆ ಕೇವಲ ಮೂರು ದಿನಗಳ ಕಾಲ ಮಾತ್ರ ನೀರು ಹರಿಸಲು ನಿರ್ಧರಿಸಿರುವುದು ರೈತರಿಗೆ ತಾತ್ಕಾಲಿಕ ನೆಮ್ಮದಿ ತಂದಿದೆ. ನವೆಂಬರ್ 30ರವರೆಗೆ ನೀರು ಹರಿಸಬೇಕೆಂಬ ರೈತರ ಪ್ರಮುಖ ಬೇಡಿಕೆ ಇನ್ನೂ ಈಡೇರಬೇಕಿದೆ. ಬೆಳೆಗಳ ರಕ್ಷಣೆಗಾಗಿ ಕಾಲುವೆಗಳಿಗೆ ನಿರಂತರ ನೀರು ಪೂರೈಸುವಂತೆ ರೈತರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಈ ಸಂದರ್ಭದಲ್ಲಿ ರೈತ ಸಂಘಟನೆಯ ರಾಜ್ಯಾಧ್ಯಕ್ಷ ಮಲ್ಲನಗೌಡ ಹಗರೇಟಗಿ, ರಾಜ್ಯ ಗೌರವಾಧ್ಯಕ್ಷ ಪ್ರಶಾಂತಗೌಡ ಪಾಟೀಲ, ತಾಲೂಕು ಅಧ್ಯಕ್ಷ ಮಲ್ಲನಗೌಡ ಬಿರಾದಾರ, ಶಿವಶರಣಪ್ಪ ಸಾಹುಕಾರ, ಗುರು ಬೆಳ್ಳೂರ್ಗಿ, ಗುರುನಾಥ ರೆಡ್ಡಿ ಹದನೂರು, ಮಲ್ಲಪ್ಪಗೌಡ ಅರಿಕೇರಿ, ಯಮನಪ್ಪ ದೊರೆ ರಾಜನಕೋಳೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಬಸವಣ್ಣನವರ ಅವಹೇಳನ ಖಂಡಿಸಿ ರವಿ ಹಂಜ್ ವಿರುದ್ಧ ದಸಂಸ ಕ್ರಾಂತಿಕಾರಿ ಬಣ ಪ್ರತಿಭಟನೆ

ಬಸವಣ್ಣನವರು ಹಾಗೂ ಶರಣ ಪರಂಪರೆಯ ಕುರಿತು ಅವಹೇಳನಕಾರಿ ಅಂಶಗಳನ್ನು ಒಳಗೊಂಡಿದೆ ಎನ್ನಲಾದ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ವಿಜಯಪುರ |ಬಸವ ತತ್ವದ ವಿರುದ್ಧದ ಅಪಪ್ರಚಾರ | ಎಸ್‌ಐಟಿ ತನಿಖೆಗೆ ಆಗ್ರಹ

ಬಸವಣ್ಣನವರ ವಚನಗಳು, ವಿಚಾರಧಾರೆ ಹಾಗೂ ಶರಣ ಚಳವಳಿಯ ಇತಿಹಾಸವನ್ನು ತಿರುಚಿ ಸಮಾಜದಲ್ಲಿ...