ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

Date:

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್ ಬ್ಯಾಚ್‌ನ ಅಲ್ಪಸಂಖ್ಯಾತ ಸಮುದಾಯದ ಹಲವು ವಿದ್ಯಾರ್ಥಿಗಳು ವಿದ್ಯಾರ್ಥಿವೇತನದಿಂದ ವಂಚಿತರಾಗಿದ್ದು, ಬಾಕಿ ಇರುವ ವಿದ್ಯಾರ್ಥಿವೇತನವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಅಪ್ನಿ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಸದ್ದಮ್ ಹುಸೇನ್ ಒತ್ತಾಯಿಸಿದ್ದಾರೆ.

- Advertisement -

ಈ ಕುರಿತು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹ್ಮದ್ ಅವರಿಗೆ ಮನವಿ ಸಲ್ಲಿಸಿರುವ ಅವರು, 2021ನೇ ಸಾಲಿನ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಬಾಕಿ ಉಳಿದಿರುವ ಶೈಕ್ಷಣಿಕ ವರ್ಷಗಳ ವಿದ್ಯಾರ್ಥಿವೇತನ ಹಾಗೂ ಇಂಟರ್ನ್‌ಶಿಪ್ ಅವಧಿಯ ವಿದ್ಯಾರ್ಥಿವೇತನ ಮಂಜೂರು ಮಾಡಲು ವಿಶೇಷ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಇದನ್ನು ಓದಿದ್ದೀರಾ? ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೋವಿಡ್ ಸಂದರ್ಭದಲ್ಲಿ ಪ್ರವೇಶಾತಿ ಮತ್ತು ಶೈಕ್ಷಣಿಕ ಪ್ರಕ್ರಿಯೆಗಳಲ್ಲಿ ವಿಳಂಬ ಉಂಟಾದ ಪರಿಣಾಮ ಹಲವು ವಿದ್ಯಾರ್ಥಿಗಳು ನಿಗದಿತ ಅವಧಿಯಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಹೀಗಾಗಿ ವಿದ್ಯಾರ್ಥಿವೇತನ ಪೋರ್ಟಲ್ ಪುನಃ ತೆರೆದು ಬಾಕಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಬೇಕು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರದ ಗಮನಕ್ಕೆ ತರುವ ಮೂಲಕ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಸದ್ದಮ್ ಹುಸೇನ್ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಬಸವಣ್ಣನವರ ಅವಹೇಳನ ಖಂಡಿಸಿ ರವಿ ಹಂಜ್ ವಿರುದ್ಧ ದಸಂಸ ಕ್ರಾಂತಿಕಾರಿ ಬಣ ಪ್ರತಿಭಟನೆ

ಬಸವಣ್ಣನವರು ಹಾಗೂ ಶರಣ ಪರಂಪರೆಯ ಕುರಿತು ಅವಹೇಳನಕಾರಿ ಅಂಶಗಳನ್ನು ಒಳಗೊಂಡಿದೆ ಎನ್ನಲಾದ...

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ವಿಜಯಪುರ |ಬಸವ ತತ್ವದ ವಿರುದ್ಧದ ಅಪಪ್ರಚಾರ | ಎಸ್‌ಐಟಿ ತನಿಖೆಗೆ ಆಗ್ರಹ

ಬಸವಣ್ಣನವರ ವಚನಗಳು, ವಿಚಾರಧಾರೆ ಹಾಗೂ ಶರಣ ಚಳವಳಿಯ ಇತಿಹಾಸವನ್ನು ತಿರುಚಿ ಸಮಾಜದಲ್ಲಿ...